BREAKING NEWS

ರಾಜ್ಯ ಸರ್ಕಾರದಿಂದ ಸಹಕಾರ ಸಿಗುತ್ತಿಲ್ಲ: ಕೆಸಿಆರ್‌ ವಿರುದ್ಧ ಮೋದಿ ವಾಗ್ದಾಳಿ

ಹೈದರಾಬಾದ್‌: ತೆಲಂಗಾಣದ ಭಾರತ ರಾಷ್ಟ್ರ ಸಮಿತಿ ಸರ್ಕಾರ ಹಾಗೂ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಇಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ತೆಲಂಗಾಣಕ್ಕೆ ಉಪಯೋಗವಾಗುವ ಹಲವು ಯೋಜನೆಗಳನ್ನು ಜಾರಿ ಮಾಡಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದೊಂದಿಗೆ ಸಹಕರಿಸುತ್ತಿಲ್ಲ. ತೆಲಂಗಾಣದ ಸರ್ಕಾರ ಪರಿವಾರವಾದ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಪ್ರಧಾನಿ ಆರೋಪಿಸಿದರು.

‘ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರದ ಸಹಕಾರ ಸಿಗದಿರುವುದರಿಂದ ನಾನು ನೊಂದಿದ್ದೇನೆ. ಇದು ತೆಲಂಗಾಣದ ಜನರ ಕನಸಿಗೆ ಅಡ್ಡಿಯುಂಟು ಮಾಡುತ್ತಿದೆ. ತೆಲಂಗಾಣದ ಜನರಿಗೆ ತಲುಪಿಸಲು ಯೋಜನೆ ಮಾಡಿರುವಂಥ ಯೋಜನೆಗಳಿಗೆ ತಡೆಯುಂಟು ಮಾಡಬೇಡಿ ಎಂದು ನಾನು ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತೇನೆ‘ ಎಂದು ಮೋದಿ ಹೇಳಿದ್ದಾರೆ.

ಮುಖ್ಯಮಂತ್ರಿ ಕೆ.ಸಿ.ಆರ್‌ ಅವರ ಹೆಸರೆತ್ತದೆ ವಾಗ್ದಾಳಿ ನಡೆಸಿದ ಅವರು, ಕೆಲವರು ಪರಿವಾರವಾದವನ್ನು ಪೋಷಿಸುತ್ತಿದ್ದು, ತೆಲಂಗಾಣದ ಜನರಿಗೆ ಸಿಗಬೇಕಾದ ಪ್ರಯೋಜನವನ್ನು ಕಸಿದುಕೊಳ್ಳುತ್ತಿದ್ದಾರೆ ಎಂದು ಹರಿಹಾಯ್ದರು.

andolanait

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

7 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

7 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

7 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

7 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

8 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

8 hours ago