ಹುಬ್ಬಳ್ಳಿ: ಕೆಲವರು ತಮ್ಮ ಹಿತಕ್ಕಾಗಿ ಬಿಜೆಪಿಯನ್ನು ಬಲಿ ಕೊಡುತ್ತಿದ್ದಾರೆ. ಹಿರಿಯರಿಗೆ ಗೌರವ ಕೊಡದೆ ಇರುವುದು ಬಿಜೆಪಿಗೆ ಮುಳುವಾಗುತ್ತೆ ಎಂದು ಶಾಸಕ ಜಗದೀಶ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದರು.
ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಿರಸಿಗೆ ತೆರಳುವ ಮುನ್ನ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ ಅವರಿಗೆ ಇಲ್ಲಿನ ಬಿಜೆಪಿಯ ತಳಮಟ್ಟದ ಪರಿಸ್ಥಿತಿ ಬಗ್ಗೆ ಏನೂ ಗೊತ್ತಿಲ್ಲ. ರಾಜ್ಯ ಬಿಜೆಪಿ ಉಸ್ತುವಾರಿಗಳು ಹಾಗೂ ಇಲ್ಲಿನ ನಾಯಕರು ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ಬೇಡ ಅಂತಾ ತೀರ್ಮಾನ ಮಾಡಿದಂತಿದೆ ಎಂದು ಹೇಳಿದರು.
ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ ಬಳಿಕ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಕೊಡುತ್ತೇನೆ. ವಾಪಸ್ ಬಂದು ಹಿತೈಷಿಗಳ ಜೊತೆ ಚರ್ಚಿಸಿ ಮುಂದಿನ ಹೆಜ್ಜೆ ಬಗ್ಗೆ ನಿರ್ಧರಿಸುತ್ತೇನೆ. ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದರು.
ಬಿಜೆಪಿ ನಾಯಕರಿಂದ ಮತ್ತೆ ಯಾವುದೇ ಕರೆ ಬಂದಿಲ್ಲ, ಕೊನೆಯ ವಿಸ್ಮಯ ನಡೆಯಲ್ಲ. ಒಂದು ಹೆಜ್ಜೆ ಮುಂದೆ ಇಟ್ಟಿದ್ದೀನಿ, ಹಿಂದೆ ಸರಿಯಲ್ಲ. ಕಾಂಗ್ರೆಸ್ ಸೇರ್ಪಡೆ ವಿಚಾರ ಸೇರಿದಂತೆ ಎಲ್ಲಾ ಆಯ್ಕೆಗಳು ತೆರೆದಿವೆ. ಕಾಂಗ್ರೆಸ್ ಸೇರ್ಪಡೆ ಬಗ್ಗೆ ಹಿತೈಷಿಗಳ ಜೊತೆ ಚರ್ಚಿಸಿ ತೀರ್ಮಾನ ಮಾಡುತ್ತೇನೆ. ಕಾಂಗ್ರೆಸ್ ನವರು ತಮ್ಮ ಪ್ರತಿನಿಧಿ ಕಳಿಸಿದ್ದಾರೆ ಎಂದರು.
ನಾನು ಎಲ್ಲಾ ಜಾತಿ, ಧರ್ಮದ ಜನರನ್ನು ಸಮಾನವಾಗಿ ಕಂಡಿದ್ದೇನೆ. ಬಿಜೆಪಿ ಮುಖಂಡರಿಗೆ ಹಿರಿಯರ ಜೊತೆ ಮಾತಾಡುವ ಸೌಜನ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…