BREAKING NEWS

ಹಿರಿಯರಿಗೆ ಗೌರವ ಕೊಡದಿರುವುದು ಬಿಜೆಪಿಗೆ ಮುಳುವಾಗುತ್ತೆ: ಜಗದೀಶ ಶೆಟ್ಟರ್

ಹುಬ್ಬಳ್ಳಿ: ಕೆಲವರು ತಮ್ಮ ಹಿತಕ್ಕಾಗಿ ಬಿಜೆಪಿಯನ್ನು ಬಲಿ‌ ಕೊಡುತ್ತಿದ್ದಾರೆ. ಹಿರಿಯರಿಗೆ ಗೌರವ ಕೊಡದೆ ಇರುವುದು ಬಿಜೆಪಿಗೆ ಮುಳುವಾಗುತ್ತೆ ಎಂದು ಶಾಸಕ ಜಗದೀಶ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದರು.

ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಿರಸಿಗೆ ತೆರಳುವ ಮುನ್ನ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು‌.

ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ ಅವರಿಗೆ ಇಲ್ಲಿನ ಬಿಜೆಪಿಯ ತಳಮಟ್ಟದ ಪರಿಸ್ಥಿತಿ ಬಗ್ಗೆ ಏನೂ ಗೊತ್ತಿಲ್ಲ. ರಾಜ್ಯ ಬಿಜೆಪಿ ಉಸ್ತುವಾರಿಗಳು ಹಾಗೂ ಇಲ್ಲಿನ ನಾಯಕರು ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ಬೇಡ ಅಂತಾ ತೀರ್ಮಾನ ಮಾಡಿದಂತಿದೆ ಎಂದು ಹೇಳಿದರು.

ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ ಬಳಿಕ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಕೊಡುತ್ತೇನೆ. ವಾಪಸ್ ಬಂದು ಹಿತೈಷಿಗಳ ಜೊತೆ ಚರ್ಚಿಸಿ ಮುಂದಿನ ಹೆಜ್ಜೆ ಬಗ್ಗೆ ನಿರ್ಧರಿಸುತ್ತೇನೆ. ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದರು.

ಬಿಜೆಪಿ ನಾಯಕರಿಂದ ಮತ್ತೆ ಯಾವುದೇ ಕರೆ ಬಂದಿಲ್ಲ, ಕೊನೆಯ ವಿಸ್ಮಯ ನಡೆಯಲ್ಲ. ಒಂದು ಹೆಜ್ಜೆ ಮುಂದೆ ಇಟ್ಟಿದ್ದೀನಿ, ಹಿಂದೆ ಸರಿಯಲ್ಲ. ಕಾಂಗ್ರೆಸ್ ಸೇರ್ಪಡೆ ವಿಚಾರ ಸೇರಿದಂತೆ ಎಲ್ಲಾ ಆಯ್ಕೆಗಳು ತೆರೆದಿವೆ. ಕಾಂಗ್ರೆಸ್ ಸೇರ್ಪಡೆ ಬಗ್ಗೆ ಹಿತೈಷಿಗಳ ಜೊತೆ ಚರ್ಚಿಸಿ ತೀರ್ಮಾನ ಮಾಡುತ್ತೇನೆ. ಕಾಂಗ್ರೆಸ್ ನವರು ತಮ್ಮ ಪ್ರತಿನಿಧಿ ಕಳಿಸಿದ್ದಾರೆ ಎಂದರು.

ನಾನು ಎಲ್ಲಾ ಜಾತಿ, ಧರ್ಮದ ಜನರನ್ನು ಸಮಾನವಾಗಿ ಕಂಡಿದ್ದೇನೆ. ಬಿಜೆಪಿ ಮುಖಂಡರಿಗೆ ಹಿರಿಯರ ಜೊತೆ ಮಾತಾಡುವ ಸೌಜನ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

andolanait

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

3 hours ago