Mysore
17
few clouds

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಅಧಿಕಾರಕ್ಕೆ ಬಂದು ಎರಡು ವಾರ ಆಗಿಲ್ಲ ಕಾಂಗ್ರೆಸ್ ನವರು ಆಕಾಶದ ಮೇಲೆ ನಡೆಯುತ್ತಿದ್ದಾರೆ : ಅಶ್ವತ್ಥ ನಾರಾಯಣ ವಾಗ್ದಾಳಿ

ಬೆಂಗಳೂರು : ಅಧಿಕಾರಕ್ಕೆ ಬಂದು ಎರಡು ವಾರ ಆಗಿಲ್ಲ, ಕಾಂಗ್ರೆಸ್ ನವರು ಆಕಾಶದ ಮೇಲೆ ನಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತಕ್ಕೆ ಬಂದ ಪ್ರಥಮ ದಿನಗಳಲ್ಲಿ ಬೆಲೆ ಏರಿಕೆ ಮಾಡುತ್ತಿದ್ದಾರೆ. ಐದು ಗ್ಯಾರಂಟಿ ಕೊಡುವ ಭರವಸೆ ನೀಡಿ ಮಾತು ತಪ್ಪಿದ್ದಾರೆ. ಗ್ಯಾರಂಟಿಯಲ್ಲಿ ಫ್ರೀ ಕೊಡುತ್ತೇವೆ ಎಂದು ಹೇಳಿದವರು ಅದನ್ನು ಈಡೇರಿಸಿಲ್ಲ ಎಂದರು.

ಉಚಿತ ವಿದ್ಯುತ್ ಎಂದು ಹೇಳಿ ಇದೀಗ ವಿದ್ಯುತ್ ದರ ಏರಿಕೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಚೊಚ್ಚಲ ಕೊಡುಗೆ ಬೆಲೆ ಏರಿಕೆಯಾಗಿದೆ. ವಿದ್ಯುತ್ ಉತ್ಪಾದನೆ ವೆಚ್ಚ ಕಡಿಮೆ ಆದರೂ ವಿದ್ಯುತ್ ದರ ಏರಿಕೆ ಆಗುತ್ತಿದೆ. ಇದಕ್ಕೆ ಡಿಕೆಶಿ‌ ಕೊಡುಗೆ ಇದೆ. ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಇಂಧನ ಸಚಿವರಾಗಿದ್ದ ಡಿಕೆಶಿ ಸೋಲಾರ್ ಯೋಜನೆಯನ್ನು ಬೇಕಾದವರಿಗೆ ಹರಾಜು ಮಾಡಿರುವ ಪರಿಣಾಮ ಇದು. ಜನರ ರಕ್ತ ಹೀರುವುದೇ ಕಾಂಗ್ರೆಸ್ ‌ಕೊಡುಗೆ ಆಗಿದೆ ಎಂದು ಟೀಕಿಸಿದರು.

ಇನ್ನು ಚಕ್ರವರ್ತಿ ಸೂಲಿಬೆಲೆಯನ್ನು ಜೈಲಿಗೆ ಹಾಕುವ ಎಚ್ಚರಿಕೆ ನೀಡುವ ಸಚಿವ ಎಂಬಿ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ,‌ ಜೈಲಿಗೆ ಹಾಕುತ್ತೇನೆ ಎಂದು ಹೇಳಲು ನೀವು ಜಡ್ಜಾ? ಇದೆಲ್ಲಾ ಕರ್ನಾಟಕದಲ್ಲಿ ನಡೆಯಲ್ಲ, ನಡವಳಿಕೆಯಲ್ಲಿ ಸುಧಾರಣೆ ತರಬೇಕು. ಜನ ಪರವಾಗಿ ಆಡಳಿತ ಮಾಡಿದರೆ ಸಹಕಾರ ಕೊಡುತ್ತೇವೆ. ದ್ವೇಷದ ರಾಜಕಾರಣ ಮಾಡಬೇಡಿ ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವಾರ ಆಗಿಲ್ಲ, ಆಕಾಶದ ಮೇಲೆ ನಡೆಯುತ್ತೀರಿ,ಭೂಮಿ ಮೇಲೆ ‌ನಡೆಯಿರಿ ಎಂದು ಅಶ್ವತ್ಥ ನಾರಾಯಣ ಸಲಹೆ ನೀಡಿದರು.
ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಮಾತನಾಡಿ, ಗ್ಯಾರಂಟಿಗಳ‌ ಯೂಟರ್ನ್ ಹೊಡೆಯುತ್ತಿದೆ ಸರ್ಕಾರ ಎಂದು‌ ಕಿಡಿಕಾರಿದರು. ಸಾವಿರ ಸುಳ್ಳು ಹೇಳಿ ಸರ್ಕಾರ ತಂದಿದ್ದಾರೆ. ಅಧಿಕಾರಕ್ಕೆ ಬಂದ ಬಳಿಕ ಇದೀಗ ಉತ್ತರ ಕೊಡಬೇಕಾಗಿದೆ. ಇನ್ನು ಮುಂದೆ ಗ್ಯಾರಂಟಿ ಅಂದರೆ ಸುಳ್ಳು ಎಂಬಂತಾಗಿದೆ ಎಂದು ಕಿಡಿಕಾರಿದರು.

ಪರಿಷತ್ ಸದಸ್ಯ ಕೇಶವ ಪ್ರಸಾದ್ ಮಾತನಾಡಿ, ‌ಉಚಿತ ಎಂದು ಘೋಷಣೆ ಮಾಡಿದ್ದರು. ವೇದಿಕೆ ಮೇಲೆ ಇದ್ದ ಎಲ್ಲರಿಗೂ ಕರೆಂಟ್ ಉಚಿತ ಎಂದಿದ್ದರು. ಮೊದಲ ಕ್ಯಾಬಿನೆಟ್ ನಲ್ಲಿ ಈಡೇರಿಸುವ ಭರವಸೆ ಕೊಟ್ಟಿದ್ದರು. ಆದರೆ ನೂರೆಂಟು ಷರತ್ತುಗಳನ್ನು ಹಾಕಿದ್ದಾರೆ. ಇವಾಗ ಗೊಂದಲಮಯ ವಾತಾವರಣ ಸೃಷ್ಟಿ ಮಾಡಿದ್ದಾರೆ.
ಮಹಿಳೆಯರಿಗೆ ಎರಡು ಸಾವಿರ ರೂಪಾಯಿ ಕೊಡುವ ಮೂಲಕ ಮನೆಯನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ನಿರುದ್ಯೋಗಿಗಳಿಗೆ ಮೂರು ಸಾವಿರ ಕೊಡುತ್ತೇವೆ ಎಂದವರು ಇವಾಗ 2022-23 ಅವಧಿಗೆ ಎಂದು ಷರತ್ತು ಹಾಕಿದ್ದಾರೆ ಎಂದು ಕಿಡಿಕಾರಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!