Mysore
20
broken clouds

Social Media

ಗುರುವಾರ, 13 ನವೆಂಬರ್ 2025
Light
Dark

ನನಗೇನೂ ಆಗಿಲ್ಲ ನಾನು ಚೆನ್ನಾಗಿದ್ದೇನೆ! ಸಾವಿನ ರೂಮರ್ಸ್​ ಬಗ್ಗೆ ದ್ವಾರಕೀಶ್​ ಸ್ಪಷ್ಟನೆ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ನಿಧನರಾಗಿದ್ದಾರೆ ಎನ್ನುವ ಸುಳ್ಳು ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಸುದ್ದಿ ನೋಡಿದ ಅನೇಕರು ಆತಂಕಕ್ಕೊಳಗಾಗಿದ್ರು. ಇದೀಗ ಹಿರಿಯ ನಟ ದ್ವಾರಕೀಶ್​ ಈ ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.  ನನಗೇನು ಆಗಿಲ್ಲ ನಾನು ಚೆನ್ನಾಗಿದ್ದೀನಿ ಎಂದು ದ್ವಾರಕೀಶ್ ಹೇಳಿದ್ದಾರೆ.

ವಿಡಿಯೋ ಮೂಲಕ ದ್ವಾರಕೀಶ್ ಸ್ಪಷ್ಟನೆ

ದ್ವಾರಕೀಶ್ ಆರೋಗ್ಯ ಬಗ್ಗೆ ಸುಳ್ಳು ಸುದ್ದಿ ಹರಡುತ್ತಿದ್ದಂತೆ ಅಭಿಮಾನಿಗಳಲ್ಲಿ ಆತಂಕ ಮೂಡಿದೆ. ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನಟ ದ್ವಾರಕೀಶ್​ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ನಿಮ್ಮ ಆಶೀರ್ವಾದದಿಂದ ನಾನು ಚೆನ್ನಾಗಿದ್ದೇನೆ : ಎಲ್ಲರಿಗೂ ನಮಸ್ಕಾರ.. ನಾನು ನಿಮ್ಮ ದ್ವಾರಕೀಶ್​. ನೀವೇ ಸಾಕಿದ ದ್ವಾರಕೀಶ್​. ನಿಮ್ಮ ಆಶೀರ್ವಾದದಿಂದ ನಾನು ಚೆನ್ನಾಗಿದ್ದೇನೆ. ನಿಮ್ಮ ಆಶೀರ್ವಾದ ನನಗೆ ಬೇಕು. ನಾನು ಗಟ್ಟಿಮುಟ್ಟಾಗಿದ್ದೀನಿ. ಯಾವುದೇ ಚಿಂತೆ ಇಲ್ಲದೇ ನಗುನಗುತ್ತಾ ಇದ್ದೇನೆ. ನಿಮ್ಮ ಪ್ರೀತಿ, ವಿಶ್ವಾಸ ಇದೇ ರೀತಿ ಇರಲಿ. ನಿಮ್ಮ ಆಶೀರ್ವಾದ ಇರುವ ತನಕ ನನಗೆ ಏನೂ ತೊಂದರೆ ಆಗುವುದಿಲ್ಲ ಎಂದು ವಿಡಿಯೋ ಮೂಲಕ ದ್ವಾರಕೀಶ್​ ಹೇಳಿದ್ದಾರೆ.

ವ್ಯಾಪಾರ ಬಿಟ್ಟು ಸಿನಿಮಾದತ್ತ ಮುಖ ಮಾಡಿದ್ರು: ದ್ವಾರಕೀಶ್ ಆಗಸ್ಟ್ 19, 1942 ರಂದು ಹುಣಸೂರು ನಲ್ಲಿ ಜನಿಸಿದ್ರು. ಶಾರದಾ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ನಂತರ CPC ಪಾಲಿಟೆಕ್ನಿಕ್ನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಕೋರ್ಸ್ ಮುಗಿಸಿದ್ದಾರೆ. ನಂತರ ಅವರ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಶುರುಮಾಡಿದರು. 1963ರಲ್ಲಿ, ಅವರು ವ್ಯಾಪಾರ ಬಿಟ್ಟು ಸಿನಿಮಾ ಕ್ಷೇತ್ರವನ್ನು ಆಯ್ದುಕೊಂಡರು. ಕನ್ನಡದ ಪ್ರಮುಖ ನಟರಾದ ವಿಷ್ಣುವರ್ಧನ್ ಮತ್ತು ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಜೋಡಿ ಎಂದು ಪ್ರಸಿದ್ಧವಾಗಿತ್ತು.

ವೀರಸಂಕಲ್ಪ ಸಿನಿಮಾ ಮೂಲಕ ಎಂಟ್ರಿ: 1964ರಲ್ಲಿ ‘ವೀರಸಂಕಲ್ಪ’ ಚಿತ್ರದಲ್ಲಿ ನಟಿಸುವ ಮೂಲಕ ಚಿತ್ರರಂಗಕ್ಕೆ ಬಂದ ದ್ವಾರಕೀಶ್ ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. 40 ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಿಸಿರುವ ದ್ವಾರಕೀಶ್, 15ಕ್ಕೂ ಹೆಚ್ಚು ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ. ಕನ್ನಡ ಚಿತ್ರರಂಗಕ್ಕೆ ದ್ವಾರಕೀಶ್​ ಅಪಾರ  ಕೊಡುಗೆ ನೀಡಿದ್ದಾರೆ. ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಅವರು ತಮ್ಮ ಛಾಪು ಮೂಡಿಸಿದ್ದಾರೆ. 1966ರಿಂದ ಇಂದಿನ ತನಕವೂ ಅವರು ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದಾರೆ. ‘ದ್ವಾರಕೀಶ್​ ಚಿತ್ರ’ ನಿರ್ಮಾಣ ಸಂಸ್ಥೆ ಮೂಲಕ ಅವರು ಹಲವಾರು ಸಿನಿಮಾಗಳನ್ನು ನಿರ್ಮಿಸಿದ್ದಾರೆ.

ದಿಗ್ಗಜರ ಜೊತೆ ಮಿಂಚಿದ ದ್ವಾರಕೀಶ್ : ಡಾ. ರಾಜ್‌ಕುಮಾರ್, ವಿಷ್ಣುವರ್ಧನ್‌ರಂತಹ ದಿಗ್ಗಜರ ಸಿನಿಮಾಗಳನ್ನು ನಿರ್ಮಿಸಿದ ಹೆಗ್ಗಳಿಕೆ ದ್ವಾರಕೀಶ್ ಅವರದ್ದು. ಇನ್ನು ಹಾಸ್ಯ ಕಲಾವಿದರಾಗಿ, ನಾಯಕ ನಟನಾಗಿ ನೂರಾರು ಸಿನಿಮಾಗಳಲ್ಲಿ ದ್ವಾರಕೀಶ್ ನಟಿಸಿದ್ದಾರೆ. ಕೊಂಚ ಕುಬ್ಜರಾಗಿರುವ ದ್ವಾರಕೀಶ್ ಅವರನ್ನು ಕುಳ್ಳ ದ್ವಾರಕೀಶ್ ಎಂತಲೇ ಕರೆಯುತ್ತಾರೆ. ಕನ್ನಡ ಮಾತ್ರವಲ್ಲ ತಮಿಳು, ಹಿಂದಿ ಸಿನಿಮಾಗಳನ್ನು ಕೂಡ ನಿರ್ಮಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!