ರಾಷ್ಟ್ರಧ್ವಜ ಇಳಿಸದೇ ಅಪಮಾನ: ಗ್ರಾಪಂ ಅಟೆಂಡರ್‌ಗೆ ನೋಟಿಸ್‌

ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ 9.30 ಗಂಟೆಯಾದರೂ ಸಹ ಗ್ರಾಮ ರಾಷ್ಟ್ರಧ್ವಜವನ್ನು ಕೆಳಗಿಳಿಸದೆ ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಆರೋಪದಡಿ ಅಟೆಂಡರ್ ಮಂಜುನಾಥ್ ಎಂಬವರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಲ್ಲಮ್ಮ ನೋಟಿಸ್ ಜಾರಿ ಮಾಡಿದ್ದಾರೆ.

ಪ್ರತಿ ದಿನ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿ ಪ್ರತಿದಿನ ಧ್ವಜಾರೋಹಣ ಮಾಡಿ ಸಂಜೆ 6ಗಂಟೆಯ ಒಳಗೆ ಧ್ವಜ ಇಳಿಸಬೇಕೆಂಬ ನಿಯಮವಿದೆ. ಆದರೆ, ಪೊನ್ನಾಚಿ ಗ್ರಾಮ ಪಂಚಾಯಿತಿ ಅಟೆಂಡರ್ ಮಂಜುನಾಥ್ ಶುಕ್ರವಾರ ಧ್ವಜ ಇಳಿಸದೆ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ್ದಾರೆಂದು ಗ್ರಾಮಸ್ಥರು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.

ಈ ಹಿನ್ನೆಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಲ್ಲಮ್ಮ, ಅಟೆಂಡರ್ ಮಂಜುನಾಥ್‌ಗೆ ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಬಗ್ಗೆ 24 ಗಂಟೆ ಒಳಗೆ ಲಿಖಿತ ಸಮಜಾಯಿಷಿ ನೀಡುವಂತೆ ನೋಟಿಸ್ ನೀಡಿದ್ದಾರೆ. ಇಲ್ಲದಿದ್ದರೆ ನಿಮ್ಮ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

× Chat with us