ಬೆಂಗಳೂರು : ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಒಡೆತನದ ಸಕ್ಕರೆ ಕಾರ್ಕಾನೆ ಮುಚ್ಚುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿದೆ.
ಕಲಬುರಗಿಯಲ್ಲಿರುವ ಸಿದ್ದಶ್ರೀ ಸೌಹಾರ್ದ ಸಕ್ಕರೆ ಕಾರ್ಖಾನೆ, ಒಂದು ವರ್ಷದಿಂದಲೂ ಪರಿಸರ ಮಾಲಿನ್ಯ ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ಕಂಡು ಬಂದಿದ್ದು,ಹೀಗಾಗಿ ತಮ್ಮ ಕಾರ್ಖಾನೆಯನ್ನು ಮುಚ್ಚುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.
ಅಷ್ಟೇ ಅಲ್ಲದೇ ಈ ಕಾರ್ಖಾನೆಯ ನೊಂದಣಿಗೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕೆಎಸ್‌ಪಿಸಿಬಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
2020ರಲ್ಲಿ ಕಾರ್ಖಾನೆ ಪ್ರಾರಂಭಕ್ಕೂ ಮೊದಲೆ ಅನೇಕ ಶರತ್ತುಗಳನ್ನು ವಿಧಿಸಲಾಗಿತ್ತು. ಆದರೆ ಇದೀಗ ಮಂಡಳಿ ಪ್ರದೇಶಿಕ ಅಧಿಕಾರಗಳು ಪರಿಶೀಲನೆಗೆ ತೆರಳಿದ್ದ ಸಂದರ್ಭದಲ್ಲಿ ಯಾವುದೇ ಷರತ್ತುಗಳನ್ನು ಪಾಲಿಸದಿರುವುದು ಕಂಡು ಬಂದಿದೆ. ಯಾವುದೇ ಅನುಮತಿ ಪಡೆಯದೇ ಡಿಸ್ಟಿಲರಿ ಘಟಕವನ್ನು ಸ್ಥಾಪಿಸಿರುವುದು ಕಂಡು ಬಂದಿದೆ.
ಇವೆಲ್ಲಾ ಕಾರಣದಿಂದ ಶಾಸಕ ಯತ್ನಾಳ್ ಅವರ ಸಕ್ಕರೆ ಕಾರ್ಖಾನೆ ಮುಚ್ಚುವಂತೆ ನೋಟಿಸ್ ಜಾರಿ ಮಾಡಲಾಗಿದೆ.





