BREAKING NEWS

ಯತ್ನಾಳ್‌ ಮಾಲಿಕತ್ವದ ಸಕ್ಕರೆ ಕಾರ್ಖಾನೆ ಮುಚ್ಚಲು ನೋಟಿಸ್‌ ಜಾರಿ!

ಬೆಂಗಳೂರು : ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌  ಒಡೆತನದ ಸಕ್ಕರೆ ಕಾರ್ಕಾನೆ ಮುಚ್ಚುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್‌ ಜಾರಿ ಮಾಡಿದೆ.

ಕಲಬುರಗಿಯಲ್ಲಿರುವ ಸಿದ್ದಶ್ರೀ ಸೌಹಾರ್ದ ಸಕ್ಕರೆ ಕಾರ್ಖಾನೆ,  ಒಂದು ವರ್ಷದಿಂದಲೂ ಪರಿಸರ ಮಾಲಿನ್ಯ ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ಕಂಡು ಬಂದಿದ್ದು,ಹೀಗಾಗಿ ತಮ್ಮ ಕಾರ್ಖಾನೆಯನ್ನು ಮುಚ್ಚುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಅಷ್ಟೇ ಅಲ್ಲದೇ ಈ ಕಾರ್ಖಾನೆಯ ನೊಂದಣಿಗೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಕೆಎಸ್‌ಪಿಸಿಬಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

2020ರಲ್ಲಿ ಕಾರ್ಖಾನೆ ಪ್ರಾರಂಭಕ್ಕೂ ಮೊದಲೆ ಅನೇಕ ಶರತ್ತುಗಳನ್ನು ವಿಧಿಸಲಾಗಿತ್ತು. ಆದರೆ ಇದೀಗ ಮಂಡಳಿ ಪ್ರದೇಶಿಕ ಅಧಿಕಾರಗಳು ಪರಿಶೀಲನೆಗೆ ತೆರಳಿದ್ದ ಸಂದರ್ಭದಲ್ಲಿ ಯಾವುದೇ ಷರತ್ತುಗಳನ್ನು ಪಾಲಿಸದಿರುವುದು ಕಂಡು ಬಂದಿದೆ. ಯಾವುದೇ ಅನುಮತಿ ಪಡೆಯದೇ ಡಿಸ್ಟಿಲರಿ ಘಟಕವನ್ನು ಸ್ಥಾಪಿಸಿರುವುದು  ಕಂಡು ಬಂದಿದೆ.

ಇವೆಲ್ಲಾ ಕಾರಣದಿಂದ ಶಾಸಕ ಯತ್ನಾಳ್‌ ಅವರ ಸಕ್ಕರೆ ಕಾರ್ಖಾನೆ ಮುಚ್ಚುವಂತೆ ನೋಟಿಸ್‌ ಜಾರಿ ಮಾಡಲಾಗಿದೆ.

 

andolanait

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

2 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

2 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

4 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

6 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

6 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

7 hours ago