ನವದೆಹಲಿ: ಲೋಕಸಭೆಯಲ್ಲಿ ಬುಧವಾರ ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದ ಚರ್ಚೆಯಲ್ಲಿ ವಿರೋಧ ಪಕ್ಷದಿಂದ ಮೊದಲಿಗರಾಗಿ ಮಾತನಾಡಿದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಪಕ್ಷವು ಮಹಿಳಾ ಮೀಸಲಾತಿ ಮಸೂದೆಯನ್ನುಬೆಂಬಲಿಸುತ್ತದೆ, ಆದರೆ ಮಹಿಳೆಯರಿಗೆ 33 ಶೇ. ಕೋಟಾದೊಳಗೆ ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದರು.
“ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೊಳಿಸುವಲ್ಲಿ ಯಾವುದೇ ವಿಳಂಬವು ಭಾರತೀಯ ಮಹಿಳೆಯರಿಗೆ ಎಸಗುವ ಘೋರ ಅನ್ಯಾಯವಾಗಿದೆ. ಮಹಿಳಾ ಮೀಸಲಾತಿ ಮಸೂದೆಯನ್ನು ತಕ್ಷಣವೇ ಜಾರಿಗೊಳಿಸುವ ಮೂಲಕ ಅಗತ್ಯ ಮಾತ್ರವಲ್ಲದೆ ಸಾಧ್ಯವಿರುವ ಎಲ್ಲಾ ಅಡೆತಡೆಗಳನ್ನು ನಿವಾರಿಸಿ” ಎಂದು ಹೇಳಿದರು.
“ಇದು ನನ್ನ ಸ್ವಂತ ಜೀವನದ ಭಾವನಾತ್ಮಕ ಕ್ಷಣವಾಗಿದೆ. ಮೊದಲ ಬಾರಿಗೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ನಿರ್ಧರಿಸಲು ಸಾಂವಿಧಾನಿಕ ತಿದ್ದುಪಡಿಯನ್ನು ನನ್ನ ಜೀವನ ಸಂಗಾತಿ ರಾಜೀವ್ ಗಾಂಧಿ ತಂದರು. ಅದನ್ನು ರಾಜ್ಯಸಭೆಯಲ್ಲಿ 7 ಮತಗಳಿಂದ ಸೋಲಿಸಲಾಯಿತು . ನಂತರ, ಪಿ.ವಿ. ನರಸಿಂಹರಾವ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರವು ರಾಜ್ಯಸಭೆಯಲ್ಲಿ ಅಂಗೀಕರಿಸಿತು. ಇದರ ಪರಿಣಾಮವಾಗಿ, ನಾವು ದೇಶಾದ್ಯಂತ ಸ್ಥಳೀಯ ಸಂಸ್ಥೆಗಳ ಮೂಲಕ ಚುನಾಯಿತರಾದ 15 ಲಕ್ಷ ಮಹಿಳಾ ನಾಯಕಿರನ್ನು ಹೊಂದಿದ್ದೇವೆ. ರಾಜೀವ್ ಗಾಂಧಿಯವರ ಕನಸು ಭಾಗಶಃ ಮಾತ್ರ ಪೂರ್ಣಗೊಂಡಿದೆ. ಈ ಮಸೂದೆಯ ಅಂಗೀಕಾರದೊಂದಿಗೆ ಅದು ಪೂರ್ಣಗೊಳ್ಳುತ್ತದೆ’’ಎಂದು ಸೋನಿಯಾ ಗಾಂಧಿ ತಮ್ಮ ಭಾಷಣದಲ್ಲಿ ಹೇಳಿದರು.
“ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪರವಾಗಿ, ನಾನು ಇಲ್ಲಿ ನಾರಿ ಶಕ್ತಿ ವಂದನ್ ಅಧಿನಿಯಮ್ ಅನ್ನು ಬೆಂಬಲಿಸುತ್ತೇನೆ. ಹೊಗೆಯಿಂದ ತುಂಬಿದ ಅಡುಗೆಮನೆಯಿಂದ ಫ್ಲಡ್-ಲೈಟ್ ಸ್ಟೇಡಿಯಂಗಳವರೆಗೆ, ಭಾರತೀಯ ಮಹಿಳೆಯ ಪ್ರಯಾಣವು ಸುದೀರ್ಘವಾಗಿದೆ. ಆದರೆ ಆಕೆ ಅಂತಿಮವಾಗಿ ತನ್ನ ಗಮ್ಯಸ್ಥಾನವನ್ನು ತಲುಪಿದ್ದಾಳೆ ಎಂದು ಹಿಂದಿಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ ಹೇಳಿದರು.
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಅಮಿತ್…
ಮಂಡ್ಯ: ಹೆಣ್ಣು ಕಾನೂನು ಅರಿತಕೊಂಡಾಗಷ್ಟೇ, ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ ಎದುರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ…
ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ…
ಬೆಂಗಳೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಅವರು ತಮ್ಮ ಮದುವೆ ಕರೆಯೋಲೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಅವರಿಗೆ ನೀಡಿ…
ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಸಿಎಂ ಮಾತು.. ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ…
ಬೆಳಗಾವಿ: ಎಂಎಲ್‌ಸಿ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪೊಲೀಸರ ವಿರುದ್ಧ ಫೇಕ್ ಎನ್‌ಕೌಂಟರ್ ಹೇಳಿಕೆ…