ಕಲಬುರಗಿ : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧದ ಆಕ್ಷೇಪಾರ್ಹ ಹೇಳಿಕೆಗಾಗಿ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಇಲ್ಲಿನ ಪೊಲೀಸರು ಗುರುವಾರ ಎಫ್‌ಐಆರ್ ದಾಖಲಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತ ರಾಜೀವ್ ಜೇನ್ ನೀಡಿದ ದೂರಿನ ಆಧಾರದ ಮೇಲೆ ಇಲ್ಲಿನ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಆರಗ ಜ್ಞಾನೇಂದ್ರ ವಿರುದ್ಧ ಐಪಿಸಿ ಸೆಕ್ಷನ್ 504 (ಶಾಂತಿ ಭಂಗ ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಪ್ರಕರಣವನ್ನು ನಾಳೆ ಘಟನೆ ಸಂಭವಿಸಿದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ವರ್ಗಾಯಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.
ಆಗಸ್ಟ್ 1ರಂದು ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ನಾಯಕ ಆರಗ ಅವರು ಖರ್ಗೆ ಅವರ ಮೈಬಣ್ಣ ಮತ್ತು ಅವರು ಬಂದ ಪ್ರದೇಶದ ಜನರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.
ಕಸ್ತೂರಿರಂಗನ್ ವರದಿ ಅನುಷ್ಠಾನದ ಕುರಿತು ನೀಡಿರುವ ಹೇಳಿಕೆಗೆ ಖರ್ಗೆಯವರೂ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಗುರಿಯಾಗಿಸಿ ಆರಗ ಜ್ಞಾನೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದರು.
ಕಸ್ತೂರಿರಂಗನ್ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು. ಆ ಭಾಗದ ಜನರಿಗೆ ಮರ, ಗಿಡಗಳ ಬಗ್ಗೆ ಏನೂ ಗೊತ್ತಿಲ್ಲ. ಅವರು ಪಶ್ಚಿಮ ಘಟ್ಟ ಪ್ರದೇಶದಲ್ಲಿ ವಾಸಿಸುವ ಜನರ ಜೀವನದ ಮೇಲೆ ಪರಿಣಾಮ ಬೀರುವ ನಿರ್ಧಾರಗಳ ಬಗ್ಗೆ ಮಾತನಾಡುತ್ತಿದ್ದಾರೆ. ಅರಣ್ಯವೇ ಇಲ್ಲದ ಪ್ರದೇಶದವರು ಅರಣ್ಯ ಸಚಿವರಾಗಿರುವುದು ನಮ್ಮ ದುರದೃಷ್ಟ. ಬಿಸಿಲಿನ ತಾಪಕ್ಕೆ ಅಲ್ಲಿನ ಜನ ಸುಟ್ಟು ಕರಕಲಾಗಿರುತ್ತಾರೆ. ಖರ್ಗೆ ಅವರನ್ನು ನೋಡಿದರೆ ಅಲ್ಲಿನವರ ಸ್ಥಿತಿ ಗೊತ್ತಾಗುತ್ತದೆ ಎಂದು ಆರಗ ಜ್ಞಾನೇಂದ್ರ ಅವರು ಟೀಕಿಸಿದ್ದರು.
ಬೆಂಗಳೂರಿನಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರು ಆರಗ ಜ್ಞಾನೇಂದ್ರ ವಿರುದ್ಧ ಪ್ರತಿಭಟನೆ ನಡೆಸಿ, ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಕಾಂಗ್ರೆಸ್ ನಾಯಕರು ಅವರ ವಿರುದ್ಧ ವಾಗ್ದಾಳಿ ನಡೆಸಿದರು.
ಆದರೆ, ಈ ವಿಷಯ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಆರಗ ಜ್ಞಾನೇಂದ್ರ ಅವರು, ‘ಮಲ್ಲಿಕಾರ್ಜುನ ಖರ್ಗೆ ವಿರುದ್ಧ ನಾನು ಯಾವತ್ತೂ ಮಾತನಾಡಿಲ್ಲ, ಅವರನ್ನು ಟೀಕಿಸುವಷ್ಟು ದೊಡ್ಡವನೆಂದು ನನಗನಿಸುವುದಿಲ್ಲ. ಅವರ ಹಿರಿತನ, ಅನುಭವಕ್ಕೆ ಗೌರವ ಕೊಟ್ಟು ಮಾತನಾಡುತ್ತೇನೆ. ಖಂಡ್ರೆ, ಮಲ್ಲಿಕಾರ್ಜುನ ಖರ್ಗೆ ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ. ಆದರೆ, ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…
ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…
ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…