BREAKING NEWS

ಏಕದಿನ ವಿಶ್ವಕಪ್‌: ಸಚಿನ್ ದಾಖಲೆ ಸರಿಗಟ್ಟಿ ವಿಶ್ವದಾಖಲೆ ಬರೆದ ವಿರಾಟ್ ಕೊಹ್ಲಿ

ಕೋಲ್ಕತ್ತಾ : ಇಲ್ಲಿನ ಈಡೆನ್ ಗಾರ್ಡನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ದಾಖಲಿಸಿ ಏಕದಿನ ಕ್ರಿಕೆಟ್ ನಲ್ಲಿ ಸಚಿನ್‌ ಸಾಧನೆ ಸರಿಗಟ್ಟಿದರು.

ಭಾನುವಾರ ವಿಶ್ವಕಪ್ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ವಿಕೆಟ್ ಪತನದ ಬಳಿಕ ಕ್ರೀಸಿಗೆ ಬಂದ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 119 ಎಸೆತಗಳಲ್ಲಿ 10 ಬೌಂಡರಿ ಸಹಿತ 100 ರನ್ ಪೇರಿಸಿ ಏಕದಿನ ಕ್ರಿಕೆಟ್ ಮಾದರಿಯಲ್ಲಿ 49 ಶತಕ ದಾಖಲಿಸುವುದರೊಂದಿಗೆ ಸಚಿನ್ ಅವರ ಹೆಸರಲ್ಲಿದ್ದ ಅತೀ ಹೆಚ್ಚು ಶತಕದ ದಾಖಲೆ ಸರಿಗಟ್ಟಿದರು.

ನ.5 ತಮ್ಮ 35 ನೇ ಹುಟ್ಟುಹಬ್ಬ ಆಚರಿಸಿಕೊಂಡ ಕೊಹ್ಲಿ ಟೂರ್ನಿಯುದ್ದಕ್ಕೂ ಶತಕದ ಅಂಚಿನಲ್ಲಿ ಎಡವಿ ಅಭಿಮಾನಿಗಳಿಗೆ ತೀವ್ರ ನಿರಾಸೆ ಮೂಡಿಸಿದ್ದರು. ಆದರೆ ಈ ಪಂದ್ಯದಲ್ಲಿ ರಕ್ಷಣಾತ್ಮಕ ಆಟದ ಮೂಲಕ ವಿರಾಟ್ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಮನಸ್ಸಿಲ್ಲಿ ಅವಿಸ್ಮರಣೀಯಗೊಳಿಸಿದರು. ತಂಡದ ರನ್‌ ಗಳಿಕೆ ನಿಧಾನವಾದಾಗ ಒಂದೇ ಒಂದು ಸಿಕ್ಸರ್‌ ಬಾರಿಸದ ಕೊಹ್ಲಿ ಜವಾಬ್ದಾರಿಯುತ ಆಟವಾಡಿದರು.

ಏಕದಿನ ಕ್ರಿಕೆಟ್ ಮಾದರಿಯಲ್ಲಿ ಭಾರತದ ಕ್ರಿಕೆಟ್ ದೇವರು ಎಂದು ಕರೆಸಿಕೊಳ್ಳುವ ಸಚಿನ್ ತೆಂಡುಲ್ಕರ್, ಒಟ್ಟು 452 ಪಂದ್ಯಗಳಲ್ಲಿ 49 ಶತಕದೊಂದಿಗೆ ಅತೀ ಹೆಚ್ಚು ಶತಕ ಬಾರಿಸಿದ ಕ್ರಿಕೆಟಿಗರಾಗಿದ್ದಾರೆ. ಪ್ರಸ್ತುತ ಈ ದಾಖಲೆ ಸರಿಗಟ್ಟಿದ ಆಧುನಿಕ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ 288 ಪಂದ್ಯಗಳಲ್ಲಿ 49 ಏಕದಿನ ಶತಕ ಬಾರಿಸಿ ತಮ್ಮ, ಒಟ್ಟಾರೆ ಅಂತರಾಷ್ಟ್ರೀಯ ಶತಕ ವನ್ನು 79 ಕ್ಕೆ ಏರಿಸಿದ್ದಾರೆ.

2023ರ ಏಕದಿನ ವಿಶ್ವಕಪ್ ತಮ್ಮ ಎರಡನೇ ಶತಕ ದಾಖಲಿಸಿದ ಕೊಹ್ಲಿ 8 ಪಂದ್ಯಗಳಿಂದ 542 ರನ್ ಬಾರಿಸಿ ವಿಶ್ವಕಪ್ 2023 ಅಧಿಕ ರನ್ ಬಾರಿಸಿದ ಬ್ಯಾಟರ್ ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

andolanait

Recent Posts

ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…

51 mins ago

ನಾಯಕತ್ವ ಬಗ್ಗೆ ಯತೀಂದ್ರ ಹೇಳಿಕೆ: ಇದಕ್ಕೆ ಸಿಎಂ ಉತ್ತರಿಸಲಿ ಎಂದ ಡಿ.ಕೆ.ಶಿವಕುಮಾರ್‌

ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್‌ ಕ್ಲಿಯರ್‌ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…

1 hour ago

ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ…

2 hours ago

ಪೊಲೀಸ್‌ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪರಮೇಶ್ವರ್‌

ಬೆಳಗಾವಿ: ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…

2 hours ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್‌…

3 hours ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…

3 hours ago