ಬೆಂಗಳೂರು : ಕಲ್ಕತಾದಲ್ಲಿ ನಡೆಯುತ್ತಿರುವ 16 ವರ್ಷದೊಳಗಿನ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಕರ್ನಾಟಕದ ಬಾಲಕ ಹಾಗೂ ಬಾಲಕಿಯರ ತಂಡ ತೆರಳಿತ್ತು, ನಿನ್ನೆ ಒಡಿಸ್ಸಾದಲ್ಲಿ ನಡೆದ ಭೀಕರ ರೈಲು ದುರಂತದ ಪರಿಣಾಮವಾಗಿ ಮರಳಿ ರಾಜ್ಯಕ್ಕೆ ವಾಪಸ್ಸು ಬರಲು ಪರಿತಪಿಸುತ್ತಿದ್ದ ತಂಡಕ್ಕೆ ರಾಜ್ಯ ಸರ್ಕಾರ ನಿಯೋಜಿಸಿದ್ದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಹಾಯ ಹಸ್ತ ಚಾಚಿ ತಂಡ ಸುರಕ್ಷಿತವಾಗಿ ರಾಜ್ಯಕ್ಕೆ ವಾಪಸ್ಸಾಗಲು ನೆರವಾಗಿದ್ದಾರೆ.
ತಂಡದ ತರಬೇತುದಾರರು ಸೇರಿದಂತೆ 32 ಸದಸ್ಯರನ್ನೊಳಗೊಂಡ ತಂಡ ತಮ್ಮ ಸಂಕಷ್ಟವನ್ನು ವಿಡಿಯೊ ಮಾಡಿ ಹೇಳಿಕೊಂಡಿದ್ದರು. ಈ ವಿಡಿಯೊ ತಲುಪಿದ ತಕ್ಷಣ ಕಾರ್ಯ ಪ್ರವೃತ್ತರಾದ ಸಂತೋಷ್ ಲಾಡ್ ಮತ್ತು ಅಧಿಕಾರಿಗಳ ತಂಡ ಎಲ್ಲರಿಗೂ ಬೆಂಗಳೂರಿಗೆ ವಿಮಾನ ಟಿಕೆಟ್ ಹಾಗೂ ಸೂಕ್ತ ವಸತಿ, ಊಟದ ವ್ಯವಸ್ಥೆ ಒದಗಿಸಿದ್ದಾರೆ.
ತಮ್ಮ ನೆರವಿಗೆ ಧಾವಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತು ಕಾರ್ಮಿಕ ಸಚಿವ ಲಾಡ್ ಹಾಗೂ ಅಧಿಕಾರಿಗಳಿಗೆ ಕ್ರೀಡಾ ಪಟುಗಳು ಧನ್ಯವಾದ ಅರ್ಪಿಸಿದ್ದಾರೆ.
ತಮ್ಮ ತಂಡ ಕೈಗೊಂಡ ರಕ್ಷಣಾ ಮತ್ತು ನೆರವಿನ ಕಾರ್ಯಗಳ ಕುರಿತು ಸಚಿವ ಸಂತೋಷ್ ಲಾಡ್ ಅವರು ದೂರವಾಣಿ ಮೂಲಕ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದಾರೆ.
ಮಂಜು ಕೋಟೆ ಕೋಟೆ: ೧೫ ವರ್ಷಗಳ ನಂತರ ಸುಣ್ಣಬಣ್ಣ ಕಂಡ ಕಟ್ಟಡ; -ಲ ನೀಡಿದ ಸಮುದಾಯದ ಮುಖಂಡರ ಎಚ್ಚರಿಕೆ ಎಚ್.ಡಿ.ಕೋಟೆ:…
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…