BREAKING NEWS

ಒಡಿಶಾ ರೈಲು ದುರಂತ : ನೆರವಿಗೆ ಧಾವಿಸಿದ ಮುಖ್ಯಮಂತ್ರಿಗಳಿಗೆ ಧನ್ಯವಾದ ಸಲ್ಲಿಸಿದ ವಾಲಿಬಾಲ್ ಕ್ರೀಡಾಪಟುಗಳು

ಬೆಂಗಳೂರು : ಕಲ್ಕತಾದಲ್ಲಿ ನಡೆಯುತ್ತಿರುವ 16 ವರ್ಷದೊಳಗಿನ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಕರ್ನಾಟಕದ ಬಾಲಕ ಹಾಗೂ ಬಾಲಕಿಯರ ತಂಡ ತೆರಳಿತ್ತು, ನಿನ್ನೆ ಒಡಿಸ್ಸಾದಲ್ಲಿ ನಡೆದ ಭೀಕರ ರೈಲು ದುರಂತದ ಪರಿಣಾಮವಾಗಿ ಮರಳಿ ರಾಜ್ಯಕ್ಕೆ ವಾಪಸ್ಸು ಬರಲು ಪರಿತಪಿಸುತ್ತಿದ್ದ ತಂಡಕ್ಕೆ ರಾಜ್ಯ ಸರ್ಕಾರ ನಿಯೋಜಿಸಿದ್ದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಹಾಯ ಹಸ್ತ ಚಾಚಿ ತಂಡ ಸುರಕ್ಷಿತವಾಗಿ ರಾಜ್ಯಕ್ಕೆ ವಾಪಸ್ಸಾಗಲು ನೆರವಾಗಿದ್ದಾರೆ. 

ತಂಡದ ತರಬೇತುದಾರರು ಸೇರಿದಂತೆ 32 ಸದಸ್ಯರನ್ನೊಳಗೊಂಡ ತಂಡ ತಮ್ಮ ಸಂಕಷ್ಟವನ್ನು ವಿಡಿಯೊ ಮಾಡಿ ಹೇಳಿಕೊಂಡಿದ್ದರು. ಈ ವಿಡಿಯೊ ತಲುಪಿದ ತಕ್ಷಣ ಕಾರ್ಯ ಪ್ರವೃತ್ತರಾದ ಸಂತೋಷ್ ಲಾಡ್ ಮತ್ತು ಅಧಿಕಾರಿಗಳ ತಂಡ ಎಲ್ಲರಿಗೂ ಬೆಂಗಳೂರಿಗೆ ವಿಮಾನ ಟಿಕೆಟ್ ಹಾಗೂ ಸೂಕ್ತ ವಸತಿ‌, ಊಟದ ವ್ಯವಸ್ಥೆ ಒದಗಿಸಿದ್ದಾರೆ. 

ತಮ್ಮ ನೆರವಿಗೆ ಧಾವಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತು ಕಾರ್ಮಿಕ ಸಚಿವ ಲಾಡ್ ಹಾಗೂ ಅಧಿಕಾರಿಗಳಿಗೆ ಕ್ರೀಡಾ ಪಟುಗಳು ಧನ್ಯವಾದ ಅರ್ಪಿಸಿದ್ದಾರೆ.

ತಮ್ಮ ತಂಡ ಕೈಗೊಂಡ ರಕ್ಷಣಾ ಮತ್ತು ನೆರವಿನ ಕಾರ್ಯಗಳ ಕುರಿತು ಸಚಿವ ಸಂತೋಷ್ ಲಾಡ್ ಅವರು ದೂರವಾಣಿ ಮೂಲಕ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದಾರೆ.

lokesh

Recent Posts

ಓದುಗರ ಪತ್ರ: ಹೊಸ ರಾಜ್ಯಪಾಲರು ರಾಜ್ಯದ ಪ್ರಗತಿಗೆ ಮಾರ್ಗದರ್ಶನ ನೀಡಲಿ

ರಾಜ್ಯದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದು, ರಾಜ್ಯದ ರಾಜ್ಯಪಾಲರಾಗಿ…

3 mins ago

ಓದುಗರ ಪತ್ರ: ದರ ವ್ಯತ್ಯಾಸ: ಗ್ರಾಹಕರ ಹಿತವೇ ಮುಖ್ಯ

ಔಷಧಿಗಳ ನೈಜ ದರಕ್ಕೂ ಮತ್ತು ಮಾರಾಟ ದರಕ್ಕೂ ಅಜಗಜಾಂತರ ವ್ಯತ್ಯಾಸ ಇರುವುದನ್ನು ಇತ್ತೀಚೆಗೆ ದೇಶದ ಸರ್ವೋಚ್ಚ ನ್ಯಾಯಾಲಯ ಗಮನಿಸಿ ತೀವ್ರ…

6 mins ago

ದೇವಭೂಮಿ ದ್ವಾರಕಾದ ‘ಮೀಟಾಪುರ್ ಮದರ್ ಥೆರೇಸಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಡಪಾಯಿಗಳ ಸೇವೆ ಮಾಡಿ ಜನರ ಹೃದಯ ಗೆದ್ದ ಮಾತೆ  ಮದರ್ ಥೆರೇಸಾ ಈಗ ನಮ್ಮ…

9 mins ago

‘ಸರೆಂಡರ್ ಆದ ಹುಡುಗರು ಬೇರೆ ಕಥೆ ಹೇಳುತ್ತಿದ್ದಾರೆ!?’

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಅಂತೂ ನಾಲ್ಕು ಹುಡುಗರು ಸ್ಟೇಷನ್ ಒಳಗೆ ಹೋದರು ಎಂದರೆ ಮತ್ತೊಂದು ಸಂಕಟ ಶುರು ಪಿಎಸ್‌ಐ…

17 mins ago

ಮಡಿಕೇರಿ ದಸರಾ: ಕೆಎಸ್‌ಆರ್‌ಟಿಸಿ ಪ್ರವಾಸಿ ಪ್ಯಾಕೇಜ್

ನವೀನ್ ಡಿಸೋಜ ಒಂದೇ ದಿನದಲ್ಲಿ ಕೊಡಗಿನ ಪ್ರಮುಖ ಪ್ರವಾಸಿ ತಾಣಗಳ ವೀಕ್ಷಣೆ; ವಯಸ್ಕರಿಗೆ ೪೦೦, ಮಕ್ಕಳಿಗೆ ೩೦೦ ರೂ.ದರ  ಮಡಿಕೇರಿ:…

30 mins ago

ದಸರಾ ಖರ್ಚಿನ ಭಾರ ಇಳಿಸಿದ ಟಿಕೆಟ್ ಮಾರಾಟದ ಆದಾಯ

ಕೆ.ಬಿ.ರಮೇಶನಾಯಕ ಗೋಲ್ಡ್ ಕಾರ್ಡ್, ಜಂಬೂಸವಾರಿ, ಪಂಜಿನ ಕವಾಯತು ಟಿಕೆಟ್ ಸೋಲ್ಡ್ ಔಟ್ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳ ಪ್ಲಾನ್ ಯಶಸ್ವಿ ಮೈಸೂರು:…

50 mins ago