BREAKING NEWS

ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಟ್ವೀಟ್: ನಟ ಚೇತನ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆಗೆ ಅಸ್ತು

ಬೆಂಗಳೂರು : ನ್ಯಾಯಾಂಗ ಮತ್ತು ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಡಿ ನಟ ಚೇತನ್ ಅಹಿಂಸಾ, ತಮಿಳುನಾಡಿನ ‘ತೌಹೀದ್ ಜಮಾತ್’ ಅಧ್ಯಕ್ಷ ರಹಮತ್ ಉಲ್ಲಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಕರ್ನಾಟಕದ ಅಡ್ವೊಕೇಟ್ ಜನರಲ್ (ಎಜಿ) ಕೆ.ಶಶಿಕಿರಣ್ ಶೆಟ್ಟಿ ಅವರು ಒಪ್ಪಿಗೆ ನೀಡಿದ್ದಾರೆ.

ನ್ಯಾಯಾಂಗ ಮತ್ತು ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಡಿ ಚೇತನ್ ಅಹಿಂಸಾ, ರಹಮತ್ ಉಲ್ಲಾ, ಸಿಪಿಐ(ಎಂ) ನಾಯಕ ಸೀತಾರಾಂ ಯೆಚೂರಿ ಹಾಗೂ “ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ”(ಸಿಎಫ್‍ಐ) ಅಧ್ಯಕ್ಷ ಅತಾವುಲ್ಲಾ ಪುಂಜಾಲಕಟ್ಟೆ ವಿರುದ್ಧ ನ್ಯಾಯಾಂಗ ನಿಂದನೆ ಕಾಯ್ದೆಯ ಕಲಂ 15(1)(ಬಿ) ಅಡಿ ಕ್ರಮ ಕೈಗೊಳ್ಳಲು ಅನುಮತಿಸಬೇಕು ಎಂದು ಕೋರಿ ನಗರದ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್ ಮನವಿ ಮಾಡಿದ್ದರು.

ಅತ್ಯಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರು ನಿರೀಕ್ಷಣಾ ಜಾಮೀನು ಮಂಜೂರು ಮಾಡಿ, ತೀರ್ಪಿನಲ್ಲಿ ಆಘಾತಕಾರಿ ಹೇಳಿಕೆಯೊಂದನ್ನು ಉಲ್ಲೇಖಿಸಿದ್ದಾರೆ. ಈಗ ಅದೇ ನ್ಯಾಯಮೂರ್ತಿ ಶಾಲೆಗಳಲ್ಲಿ ಹಿಜಾಬ್ ಧರಿಸಬಹುದೇ ಅಥವಾ ಇಲ್ಲವೇ ಎಂಬುದನ್ನು ತೀರ್ಮಾನಿಸಲಿದ್ದಾರೆ. ಅವರಿಗೆ ಅಗತ್ಯವಾದ ಸ್ಪಷ್ಟತೆ ಇದೆಯೇ ಎಂದು ನಟ ಚೇತನ್ ಅವರು ಟ್ವೀಟ್ ನಲ್ಲಿ ಪ್ರಶ್ನೆ ಮಾಡಿದ್ದರು.

ಅಡ್ವೊಕೇಟ್ ಜನರಲ್ ಅವರು, ಇದು ದುರುದ್ದೇಶಪೂರಿತ, ವ್ಯಾಪ್ತಿ ಮೀರಿದ ಮತ್ತು ವಿವಾದಾತ್ಮಕ ಹೇಳಿಕೆಯಾಗಿದೆ. ನ್ಯಾಯಮೂರ್ತಿಯೊಬ್ಬರ ಮೇಲಿನ ನಿಷ್ಪಕ್ಷಪಾತದ ಬಗ್ಗೆ ಸಾರ್ವಜನಿಕರಿಗೆ ಸಂಶಯ ಮೂಡಿಸುವಂತಿದೆ. ಹೀಗಾಗಿ, ನಟ ಚೇತನ್ ಅಹಿಂಸಾ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಅರ್ಜಿದಾರರಿಗೆ ಅನುಮತಿಸಿದ್ದೇನೆ ಎಂದು ಅಡ್ವೊಕೇಟ್ ಜನರಲ್ ವಿವರಿಸಿದ್ದಾರೆ.

ಹಿಜಾಬ್ ತೀರ್ಪಿಗೆ ಸಂಬಂಧಿಸಿದಂತೆ, ತಮಿಳುನಾಡಿನ ‘ತೌಹೀದ್ ಜಮಾತ್’ ಅಧ್ಯಕ್ಷ ಆರ್. ರಹಮತ್ ಉಲ್ಲಾ, ‘ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆಯಂತೆ ಹೈಕೋರ್ಟ್ ಹಿಜಾಬ್ ತೀರ್ಪು ನೀಡಿದೆ. ಒಂದು ವೇಳೆ ನ್ಯಾಯಮೂರ್ತಿಗಳು ಕೊಲೆಯಾದರೆ ಅವರ ಸಾವಿಗೆ ಅವರೇ ಜವಾಬ್ದಾರಿ’ ಎಂದು ಮಧುರೈನಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿದ್ದರು.

ಈ ಹೇಳಿಕೆಯು ನ್ಯಾಯಾಂಗ ನಿಂದನೆ ಕಾಯ್ದೆಯ ಕಲಂ 2(ಸಿ) ಅಡಿ ನಿಂದನೆಗೆ ಸಮನಾಗಿದೆ. ಇಂತಹ ಹೇಳಿಕೆಯ ಮೂಲಕ ಅವರು ನ್ಯಾಯಾಂಗದ ಸ್ವಾತಂತ್ರ್ಯ, ಪ್ರಾಮಾಣಿಕತೆ ಮತ್ತು ನ್ಯಾಯಿಕ ಸಾಮಥ್ರ್ಯದ ಹಾಗೂ ನ್ಯಾಯಮೂರ್ತಿಗಳ ನಿಷ್ಪಕ್ಷಪಾತ ನಿಲುವಿನ ಮೇಲೆ ದಾಳಿ ಮಾಡುವುದರ ಜೊತೆಗೆ ನ್ಯಾಯಾಂಗದ ಘನತೆಗೆ ಕುಂದುಂಟು ಮಾಡಿದ್ದಾರೆ ಎಂದು ಎಜಿ ನೀಡಿರುವ ಅನುಮತಿ ಪತ್ರದಲ್ಲಿ ವಿವರಿಸಲಾಗಿದೆ.

andolanait

Recent Posts

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

11 hours ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

12 hours ago

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ

ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…

12 hours ago

ಜನರೊಂದಿಗೆ ಬೆರೆಯುವುದು ಅದ್ಭುತ ಅನುಭವ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…

12 hours ago

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

16 hours ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

21 hours ago