BREAKING NEWS

ಕೆಎಂಎಫ್‌ ಮುಳುಗಿಸಲು ಅಧಿಕಾರಿಗಳೂ ಶಾಮೀಲು: ಕುಮಾರಸ್ವಾಮಿ ಆರೋಪ

ರಾಮನಗರ: ‘ ಕೆಎಂಎಫ್‌ ಅನ್ನು ಹಂತಹಂತವಾಗಿ ಮುಗಿಸಲು ಹುನ್ನಾರ ನಡೆದಿದೆ. ಹಣದ ಆಸೆಯಾಗಿ ಕೆಎಂಎಫ್‌ ಅಧಿಕಾರಿಗಳೇ ಇದರಲ್ಲಿ ಶಾಮೀಲಾಗಿದ್ದಾರೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಆರೋಪಿಸಿದರು.

ಬಿಡದಿ ಸಮೀಪದ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಶನಿವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ‘ ಅಮುಲ್ ವಿಚಾರದಲ್ಲಿ ರಾಜ್ಯದ ಬಿಜೆಪಿ ನಾಯಕರು ಗುಜರಾತಿನವರನ್ನು ಓಲೈಸಲು ಹೊರಟಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಇದರ ಅರಿವು ಇದೆಯೋ ಇಲ್ಲವೋ ಗೊತ್ತಿಲ್ಲ. ರೈತರ ಬದುಕಿನಲ್ಲಿ ಚೆಲ್ಲಾಟ ಆಡಬಾರದು’ ಎಂದು ಎಚ್ಚರಿಸಿದರು.

ಎರಡನೇ ಪಟ್ಟಿ ವಿಳಂಬ

‘ ಜೆಡಿಎಸ್‌ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಸೋಮವಾರದ ನಂತರ ಬಿಡುಗಡೆ ಮಾಡಲಾಗುವುದು. ಕಾಂಗ್ರೆಸ್ಸಿನವರು ನಮ್ಮ ಶಾಸಕರನ್ನು ರಾಜೀನಾಮೆ ಕೊಡಿಸಿ ಪಕ್ಷಕ್ಕೆ ಸೇರಿಸಿಕೊಂಡಿದ್ದರು. ಈಗ ಅದು ಯೂ ಟರ್ನ್ ತೆಗೆದುಕೊಳ್ಳುತ್ತಿದೆ. ಕಾಂಗ್ರೆಸ್‌ನಿಂದ 15ಕ್ಕೂ ಹೆಚ್ಚು ಸಮರ್ಥ ಅಭ್ಯರ್ಥಿಗಳು ಜೆಡಿಎಸ್‌ನತ್ತ ಮುಖ ಮಾಡಿದ್ದು, ನಮ್ಮ ಅಭ್ಯರ್ಥಿಗಳ ಕೊರತೆಯೂ ನೀಗುತ್ತಿದೆ. 120ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ವಾತಾವರಣ ನಿರ್ಮಾಣ ಆಗುತ್ತಿದೆ. ರಾಷ್ಟ್ರೀಯ ಪಕ್ಷ ಇನ್ನೂ ಮೊದಲ ಪಟ್ಟಿಯನ್ನೇ ಬಿಡುಗಡೆ ಮಾಡಿಲ್ಲ ’ ಎಂದರು.

ಅಧಿಕಾರಿಗಳಿಗೆ ಎಚ್ಚರಿಕೆ:

‘ ಜೆಡಿಎಸ್ ಪ್ರಚಾರ ವಾಹನಗಳಿಗೆ ಇದೇ 8ರವರೆಗೆ ಪ್ರಚಾರಕ್ಕೆ ಅನುಮತಿ ಪಡೆದಿದ್ದೇವೆ. ಆದಾಗ್ಯೂ ಅಧಿಕಾರಿಗಳು ಶನಿವಾರ ಯಶವಂತಪುರದಲ್ಲಿ ನಮ್ಮ ವಾಹನಗಳನ್ನು ತಡೆದಿದ್ದಾರೆ. ಈ ಅಧಿಕಾರಿಗಳಿಗೆ ಕಾನೂನು ಗೊತ್ತಿದೆಯೋ ಇಲ್ಲ ಸೋಮಶೇಖರ್ ಬಳಿ ತರಬೇತಿ ಪಡೆದಿದ್ದಾರೋ ಗೊತ್ತಿಲ್ಲ. ಕೊಂಚ ಎಚ್ಚರಿಕೆಯಿಂದ ವರ್ತಿಸಿ. ನೀತಿಸಂಹಿತೆ ಪ್ರಕಾರ ನಡೆದುಕೊಳ್ಳಿ. ದಬ್ಬಾಳಿಕೆ ತೋರಿದರೆ ಮುಂದೆ ನನ್ನ ಕೈಗೆ ಸಿಗದೇ ಎಲ್ಲಿಗೆ ಹೋಗುತ್ತೀರಿ’ ಎಂದು ಎಚ್ಚರಿಸಿದರು.

ಒಂದೇ ಕ್ಷೇತ್ರದಿಂದ ಸ್ಪರ್ಧೆ:

ಈ ಬಾರಿ ಚನ್ನಪಟ್ಟಣ ಕ್ಷೇತ್ರದಿಂದ ಮಾತ್ರ ನನ್ನ ಸ್ಪರ್ಧೆ. ಕಾರ್ಯಕರ್ತರ ಒತ್ತಡ ಇರುವ ಕ್ಷೇತ್ರಗಳಲ್ಲೂ ಬೇರೆ ಅಭ್ಯರ್ಥಿಗಳನ್ನು ನಿಲ್ಲಿಸಿ ಗೆಲ್ಲಿಸಿಕೊಳ್ಳುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.

ಹುಲಿ ವಿಹಾರಕ್ಕಾಗಿ ಭೇಟಿ:

ಬಂಡೀಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ ‘ ಅವರು ಹುಲಿ ವಿಹಾರಕ್ಕಾಗಿ ಬರುತ್ತಿದ್ದಾರೆಯೇ ಹೊರತು ರಾಜ್ಯದ ಜನರ ಕಷ್ಟ ಕೇಳಲು ಬರುತ್ತಿಲ್ಲ. ದೇಶದ ಅಭಿವೃದ್ಧಿ ಮಾಡಿ ಸುಸ್ತಾಗಿದ್ದಾರೆ. ಹೀಗಾಗಿ ವಿಶ್ರಾಂತಿಗಾಗಿ ರಾಜ್ಯಕ್ಕೆ ಬರುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದರು.

andolanait

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

6 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

6 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

7 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

7 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

7 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

7 hours ago