ಮೈಸೂರು : ಬೇಸಿಗೆ ಹಿನ್ನಲೆ ಕುಡಿಯುವ ನೀರು ಸಮಸ್ಯೆ ಇರುವ ಜಾಗಕ್ಕೆ ಅಧಿಕಾರಿಗಳೆ ಖುದ್ದು ಭೇಟಿ ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಸೂಚನೆ ನೀಡಿದರು.
ಮುಖ್ಯ ಮಂತ್ರಿಗಳ ಸಭೆಯ ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಇರುವ ಕಡೆ ಅಧಿಕಾರಿಗಳು ಖುದ್ದು ಭೇಟಿ ಕುಡಿಯುವ ನೀರು ಸಮಸ್ಯೆಯಾಗದಂತೆ ಆದ್ಯತೆಯ ಮೇರೆಗೆ ಅಗತ್ಯ ಕ್ರಮ ವಹಿಸಬೇಕು ತಿಳಿಸಿದರು.
ಚುನಾವಣೆ ಘೋಷಣೆಯಾದರೂ ಬರ ನಿರ್ವಹಣಾ ಕಾರ್ಯಕ್ಕೆ ತೊಂದರೆ ಇಲ್ಲ. ಸಾಕಷ್ಟು ಹಣಕಾಸು ಲಭ್ಯವಿರುವುದರಿಂದ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಕೊರತೆಯಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ಪ್ರತಿ ಗ್ರಾಮ ಪಂಚಾಯಿತಿಗೆ ಒಬ್ಬರನ್ನು ಕುಡಿಯುವ ನೀರು ಸಮಸ್ಯೆಗೆ ನೋಡೆಲ್ ಇಂಜಿನಿಯರ್ ನೇಮಕ ಮಾಡಬೇಕು. ಅವರು ಪ್ರತಿದಿನ ವರದಿ ನೀಡುವಂತೆ ಸಭೆಯಲ್ಲಿ ತಿಳಿಸಿದರು.
ಕುಡಿಯುವ ನೀರು ಪೂರೈಕೆ ಮಾಡುವಾಗ ನಿಯಮಿತವಾಗಿ ಕುಡಿಯುವ ನೀರಿನ ಗುಣಮಟ್ಟ ಪರಿಶೀಲನೆ ಮಾಡಿ ನೀರು ಪೂರೈಸಲು ಅಗತ್ಯ ಕ್ರಮ ವಹಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.