ಮುಂಬೈ : ಮಹಾರಾಷ್ಟ್ರದ ಲೋನಾವಾಲಾ ಬಳಿ ಮುಂಬೈ – ಪುಣೆ ಎಕ್ಸ್ಪ್ರೆಸ್ವೇಯಲ್ಲಿ ತೈಲ ಟ್ಯಾಂಕರ್ ವೊಂದು ಭೀಕರ ಅಪಘಾತಕ್ಕೀಡಾಗಿ ಬೆಂಕಿಯಿಂದ ಹೊತ್ತಿಕೊಂಡಿದ್ದು, ಘಟನೆಯಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ.
ಲೋನಾವಾಲಾ ಮೇಲ್ಸೇತುವೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಹೆದ್ದಾರಿಯ ಒಂದು ಬದಿ ಮಾತ್ರ ಬಳಕೆಯಲ್ಲಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ” ಎಂದು ಪುಣೆ ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.
ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ್ದ ಟ್ಯಾಂಕರ್ ಅನ್ನು ತೆರವುಗೊಳಿಸಿ, ಬೆಂಕಿ ನಂದಿಸಲು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.
ರಾಸಾಯನಿಕ ಪದಾರ್ಥ ತುಂಬಿದ್ದ ಟ್ಯಾಂಕರ್ ಉರುಳಿದ ಕೂಡಲೇ ಬೆಂಕಿ ಸ್ಫೋಟಗೊಂಡಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಟ್ಯಾಂಕರ್‌ನ ಸಮೀಪದಲ್ಲಿ ಸಂಚರಿಸುತ್ತಿದ್ದ ವಾಹನಗಳಿಗೂ ಬೆಂಕಿ ತಗುಲಿತ್ತು. ಟ್ಯಾಂಕರ್‌ನಲ್ಲಿ ಸಂಗ್ರಹಿಸಿದ್ದ ರಾಸಾಯನಿಕಗಳು ಅತ್ಯಂತ ಸೂಕ್ಷ್ಮ ಪದಾರ್ಥಗಳಾಗಿದ್ದು, ಬೆಂಕಿ ತಗುಲುವ ಸಾಧ್ಯತೆ ಹೆಚ್ಚಾಗಿತ್ತು ಎಂದು ಅಗ್ನಿ ಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ.
ಮೈಸೂರು: ಮೈಸೂರು ತಾಲ್ಲೂಕು ಕಚೇರಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ದಿಢೀರ್ ಭೇಟಿ ನೀಡಿದರು. ಮೈಸೂರಿನ ಮಿನಿ…
ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳನ್ನು ತೆರವುಗೊಳಿಸಿದ ಬಳಿಕ ನಿರಾಶ್ರಿತರಿಗೆ ಮನೆ ನೀಡುವ ಸಂಬಂಧ ಪ್ರತಿಕ್ರಿಯೆ ನೀಡಿರುವ ವಸತಿ ಸಚಿವ…
ವರದಿ: ಮುದ್ದುರವಿ ಮದ್ದೂರು ಮದ್ದೂರು: ಜಿಲ್ಲೆಯ ಮದ್ದೂರು ತಾಲ್ಲೂಕಿನ ದೇಶಹಳ್ಳಿ ಗ್ರಾಮದಲ್ಲಿ ಸರಗಳ್ಳತನಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಸಾರ್ವಜನಿಕರು ಹಿಡಿದು…
ಮದ್ದೂರು: ಪಟ್ಟಣದ ಪೇಟೆ ಬೀದಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಜೆಸಿಬಿ ಸದ್ದು ಮಾಡಿದ್ದು, ಅಕ್ರಮ ಫುಟ್‌ಪಾತ್ ತೆರವು ಕಾರ್ಯಾಚರಣೆ ಮಾಡಲಾಯಿತು. ಇಂದು…
ನಂಜನಗೂಡು: ಪಾಗಲ್ ಪ್ರೇಮಿಯೋರ್ವ ಪ್ರೀತಿಸುವಂತೆ ಅಪ್ರಾಪ್ತ ಬಾಲಕಿಯ ಬೆನ್ನು ಬಿದ್ದ ಪರಿಣಾಮ ಮನನೊಂದ ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ…
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ ಸಿಕ್ಕಿದ್ದು, ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರದ ಟೀಸರ್ ಇಂದು ರಿಲೀಸ್ ಆಗಿದೆ.…