ಮೈಸೂರು : ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಶ್ರೀಗಳ ಬಗ್ಗೆ ಹಗುರವಾಗಿ ಮಾತನಾಡಿದ್ದ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಹೇಳಿಕೆಯನ್ನ ಖಂಡಿಸಿ ಒಕ್ಕಲಿಗ ಸಮುದಾಯದಿಂದ ರಂಗಾಯಣ ಮುತ್ತಿಗೆಗೆ ಯತ್ನಿಸಲಾಯ್ತು.
ನಿರ್ಮಲಾನಂದನಾಥ ಸ್ವಾಮೀಜಿ ಕೇವಲ ಒಕ್ಕಲಿಗ ಸಮುದಾಯಕ್ಕೆ ಮಾತ್ರ ಸ್ವಾಮೀಜಿ ಎಂದಿದ್ದ ಕಾರ್ಯಪ್ಪ ಹೇಳಿಕೆಗೆ ಒಕ್ಕಲಿಗ ಸಮುದಾಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು,ಇಂದು ಒಕ್ಕಲಿಗ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿ ಮೈಸೂರಿನ ರಂಗಾಯಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.ಮುನ್ನೆಚ್ಚರಿಕಾ ಕ್ರಮವಾಗಿ ಪೋಲೀಸರು ರಂಗಾಯಣದ ಎಲ್ಲಾ ಗೇಟ್ ಗಳನ್ನೂ ಬಂದ್ ಮಾಡಿದ್ದರು,ಇದರಿಂದ ರೊಚ್ಚಿಗೆದ್ದ ಪ್ರತಿಭಟನಾಕಾರರು ಪೋಲಿಸರ ಜೊತೆ ಮಾತಿನ ಚಕಮಕಿ ನಡೆಸಿದರು.ಇನ್ನು ಅಡ್ಡಂಡ ಕಾರ್ಯಪ್ಪ ವಿರುದ್ಧ ವಿವಿಧ ಧಿಕ್ಕಾರದ ಘೋಷಣೆಗಳನ್ನ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಇದೇ ವೇಳೆ ಪೋಲಿಸರು ಪ್ರತಿಭಟನಾಕಾರರನ್ನ ವಶಕ್ಕೆ ಪಡೆದುಕೊಂಡರು.
ಕಾರ್ಯಪ್ಪ ಶ್ರೀಗಳ ಬಗ್ಗೆ ಹೇಳಿದ್ದೇನು ?
“ಅವರು ಒಕ್ಕಲಿಗ ಸಮುದಾಯಕ್ಕೆ ಮಾತ್ರ ಸ್ವಾಮೀಜಿ. ಬೇರೆ ಜಾತಿಗಳಿಗೆ ಅಲ್ಲ.ಒಕ್ಕಲಿಗ ಸಮುದಾಯ ರಕ್ಷಣೆ ಮಾಡುವುದು ಅವರ ಕೆಲಸ.ಹಾಗಂತ ಉರಿಗೌಡ,ನಂಜೇಗೌಡ ಕುರಿತು ಚರ್ಚೆ ನಡೆಯಲೇ ಬಾರದು ಅಂತಾ ಹೇಳಿದ್ದು ಸರಿಯಲ್ಲ” ಸ್ವಾಮೀಜಿಗಳು ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಅವರ ಬೆನ್ನಿಗೆ ನಿಂತರು.ಆಗಾಗ ಡಿಕೆಶಿ ಅವರನ್ನ ಕರೆದು ಕುಮಾರಸ್ವಾಮಿ ನಮ್ಮವ,ಅವರ ಸರ್ಕಾರ ಬೀಳದಂತೆ ನೋಡಿಕೊ ಎಂದು ಹೇಳಿದ್ದರು.ಅವರಿಗೆ ಕುಮಾರಸ್ವಾಮಿ,ಡಿಕೆಶಿ ಮಾತ್ರ ಒಕ್ಕಲಿಗ ನಾಯಕರು,ಸಿ.ಟಿ.ರವಿ,ಅಶ್ವತ್ ನಾರಾಯಣ್ ಅವರೆಲ್ಲ ಅದೇ ಸಮುದಾಯದವರಾದರೂ ಸ್ವಾಮೀಜಿಗೆ ಬೇಕಿಲ್ಲ ಎಂದಿದ್ದರು.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…