ಬೆಂಗಳೂರು : ರಾಜ್ಯದಲ್ಲಿ ಕಾವೇರಿಗಾಗಿಹೋರಾಟ ಜೋರಾಗಿದೆ. ಬೆಂಗಳೂರು ಬಂದ್, ಕರ್ನಾಟಕ ಬಂದ್ ಯಾವಾಗ ಮಾಡಬೇಕೆಂಬ ಗೊಂದಲದಲ್ಲಿ ಸಂಘಟನೆಗಳು ಸಿಲುಕಿಕೊಂಡಿವೆ. ಈಗಾಗಲೇ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಸೇರಿದಂತೆ ಕೆಲ ಸಂಘಟನೆಗಳು ಈಗಾಗಲೇ ನಾಳೆ ಬೆಂಗಳೂರು ಬಂದ್ಗೆ ಕರೆ ಕೊಟ್ಟಿದ್ದು, ಇದಕ್ಕೆ ಹಲವು ಸಂಘ-ಸಂಸ್ಥೆಗಳು ಬೆಂಬಲ ಸೂಚಿಸಿವೆ. ಇದರ ಮಧ್ಯೆ ಆಟೋ, ಓಲಾ ಹಾಗೂ ಊಬರ್ ಸಂಘಟನೆಗಳು ಬೆಂಗಳೂರು ಬಂದ್ಗೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದುಕೊಂಡಿವೆ.
ನಾಳೆ ಬೆಂಗಳೂರು ಬಂದ್ಗೆ ಓಲಾ ಉಬರ್ ಬೆಂಬಲವಿಲ್ಲ. ಆಟೋ ಸಂಘಟನೆಗಳು ಹಾಗೂ ಓಲಾ, ಉಬರ್ ಸಂಘ ಬೆಂಗಳೂರು ಬಂದ್ಗೆ ಬೆಂಬಲ ವಾಪಸ್ ಪಡೆದಿದ್ದು, ನಾಳೆ ಬೆಂಗಳೂರಿನಲ್ಲಿ ಓಲಾ ಉಬರ್ ಸೇವೆಗಳು ಯಥಾಸ್ಥಿತಿಯಲ್ಲಿ ಇರುತ್ತವೆ. ಆದರೆ, ಸೆ.29ರ ಕರ್ನಾಟಕ ಬಂದ್ಗೆ ಸಂಪೂರ್ಣ ಬೆಂಬಲ ನೀಡಲು ನಿರ್ಧರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಇನ್ನು ಕನ್ನಡಪರ ಸಂಘಟನೆಗಳು ಸಹ ಬೆಂಗಳೂರು ಬಂದ್ಗೆ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿವೆ. ಆದರೆ, ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್ಗೆ ಬೆಂಬಲ ಇದೆ ಎಂದು ಘೋಷಿಸಿವೆ. ಇದರಿಂದ ಬೆಂಗಳೂರು ಹಾಗೂ ಕರ್ನಾಟಕ ಬಂದ್ ಗೊಂದಲಮಯವಾಗಿದ್ದು, ಸಂಘಟನೆಗಳ ನಡುವೆಯೇ ಗೊಂದಲ ಸೃಷ್ಟಿಯಾಗಿದೆ.