BREAKING NEWS

ಜೂ.26 ರಂದು ಬೆಂಗಳೂರು-ಹುಬ್ಬಳ್ಳಿ ಸೇರಿದಂತೆ ಐದು ಹೊಸ ವಂದೇ ಭಾರತ್ ರೈಲಿಗೆ ಚಾಲನೆ

ನವದೆಹಲಿ: ಜೂನ್ 2 ರಂದು ಒಡಿಶಾದಲ್ಲಿ 289 ಜನರನ್ನು ಬಲಿ ಪಡೆದ ತ್ರಿವಳಿ ರೈಲು ಅಪಘಾತದ ನಂತರ ಭಾರತೀಯ ರೈಲ್ವೆ ಜೂನ್ 26 ರಿಂದ ಐದು ಮಾರ್ಗಗಳಲ್ಲಿ ಐದು ಹೊಸ ವಂದೇ ಭಾರತ್ ರೈಲುಗಳನ್ನು ಪ್ರಾರಂಭಿಸಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಈ ಐದು ಸೆಮಿ ಹೈಸ್ಪೀಡ್ ರೈಲುಗಳಿಗೆ ಚಾಲನೆ ನೀಡುವ ನಿರೀಕ್ಷೆ ಇದೆ.

ಐದು ವಂದೇ ಭಾರತ್ ರೈಲುಗಳು ಚಲಿಸುವ ಮಾರ್ಗಗಳೆಂದರೆ – ಮುಂಬೈ-ಗೋವಾ, ಬೆಂಗಳೂರು-ಹುಬ್ಬಳ್ಳಿ, ಪಾಟ್ನಾ-ರಾಂಚಿ, ಭೋಪಾಲ್-ಇಂಧೋರ್ ಮತ್ತು ಭೋಪಾಲ್-ಜಬಲ್ಪುರ.

ಒಡಿಶಾ ದುರಂತದ ನಂತರ ರೈಲ್ವೆ ಸಚಿವಾಲಯವು ಮುಂಬೈ-ಗೋವಾ ವಂದೇ ಭಾರತ್ ರೈಲಿನ ಉದ್ಘಾಟನೆಯನ್ನು ರದ್ದುಗೊಳಿಸಿತ್ತು. ಒಂದೇ ದಿನದಲ್ಲಿ ಐದು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡುತ್ತಿರುವುದು ಇದೇ ಮೊದಲು.

andolanait

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

3 hours ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

3 hours ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

3 hours ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

3 hours ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

3 hours ago