ನವದೆಹಲಿ : ಸೆಪ್ಟೆಂಬರ್ 5ರಂದು ‘ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ-2023’ ವಿಜೇತ ಶಿಕ್ಷಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು hindustantimes.com ವರದಿ ಮಾಡಿದೆ.
ನವದೆಹಲಿಯ ವಿಜ್ಞಾನ ಭವನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಶಿಕ್ಷಣ ಸಚಿವಾಲಯವು ಜಂಟಿಯಾಗಿ ಆಯೋಜಿಸಿರುವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಶಿಕ್ಷಣ ಸಚಿವಾಲಯವು ಮಾಹಿತಿ ನೀಡಿದೆ. ಪ್ರಶಸ್ತಿ ಪುರಸ್ಕೃತರಲ್ಲಿ ಕರ್ನಾಟಕದ 6 ಮಂದಿ ಸೇರಿದ್ದಾರೆ.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ವಿಭಾಗದಿಂದ ಶಿರಸಿಯ ಶ್ರೀ ಮಾರಿಕಾಂಬ ಸರಕಾರಿ ಹೈಸ್ಕೂಲ್‌ನ ಶಿಕ್ಷಕ ನಾರಾಯಣ ಪರಮೇಶ್ವರ ಭಾಗವತ್, ಬಾಗಲಕೋಟೆಯ ಕೆಎಲ್‌ಇ ಸೊಸೈಟಿಯ ಜೂನಿಯರ್ ಕಾಲೇಜಿನ ಹೈಸ್ಕೂಲ್ ಶಿಕ್ಷಕಿ ಸಪ್ನಾ ಶ್ರೀ ಸೈಲ್ ಅನಿಗೋಲ್, ಉನ್ನತ ಶಿಕ್ಷಣ ವಿಭಾಗದಿಂದ ಧಾರವಾಡ ಐಐಟಿಯ ಡಾ. ಎಸ್ ಆರ್ ಮಹದೇವ ಪ್ರಸನ್ನ, ಬೆಂಗಳೂರಿನ ಇಂಟರ್‌ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಡಾ.ದಿನೇಶ್ ಬಾಬು ಜೆ, ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ ವಿಭಾಗದಲ್ಲಿ ಬೆಂಗಳೂರಿನ ನ್ಯಾಷನಲ್ ಸ್ಕಿಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್‌ನ ಪೂಜಾ ಆರ್ ಸಿಂಗ್, ನ್ಯಾಷನಲ್ ಸ್ಕಿಲ್ ಟ್ರೈನಿಂಗ್ ಫಾರ್ ವುಮೆನ್ ನ ದಿವ್ಯಾ ಆಯ್ಕೆಯಾದವರು.
ಈ ಬಾರಿ ಈ ಪ್ರತಿಷ್ಠಿತ ಪ್ರಶಸ್ತಿಗೆ ದೇಶಾದ್ಯಂತ ಒಟ್ಟು 75 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ವಿಶಿಷ್ಟ ಕೊಡುಗೆ, ಬದ್ಧತೆ, ಅರ್ಪಣಾ ಮನೋಭಾವದಿಂದ ಶಿಕ್ಷಣದ ಗುಣಮಟ್ಟವನ್ನು ಮಾತ್ರವಲ್ಲದೆ, ವಿದ್ಯಾರ್ಥಿಗಳ ಜೀವನವನ್ನೂ ಸಂಪದ್ಭರಿತಗೊಳಿಸಿದ ಶಿಕ್ಷಕರನ್ನು ಗೌರವಿಸುವ ಉದ್ದೇಶವನ್ನು ಹೊಂದಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
ಪ್ರತಿ ಪ್ರಶಸ್ತಿಯು ಅರ್ಹತಾ ಪ್ರಮಾಣ ಪತ್ರ, ರೂ. 50,000 ನಗದು ಹಾಗೂ ಬೆಳ್ಳಿ ಪದಕವನ್ನು ಒಳಗೊಂಡಿದೆ.
ಈ ವರ್ಷದಿಂದ ಉನ್ನತ ಶಿಕ್ಷಣ ಇಲಾಖೆ ಹಾಗೂ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ಶಿಕ್ಷಕರಿಗೂ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯನ್ನು ವಿಸ್ತರಿಸಲಾಗಿದೆ ಎಂದು ಶಿಕ್ಷಣ ಸಚಿವಾಲಯ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ.
ಈ ಬಾರಿ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕರ ಪೈಕಿ 50 ಮಂದಿ ಪ್ರಾಥಮಿಕ ಶಾಲಾ ಶಿಕ್ಷಕರು, 13 ಮಂದಿ ಉನ್ನತ ಶಿಕ್ಷಣ ವಿಭಾಗದವರು ಹಾಗೂ 12 ಮಂದಿ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ವಿಭಾಗಕ್ಕೆ ಸೇರಿದವರು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…