ನವದೆಹಲಿ (ಪಿಟಿಐ): ಬಿಜೆಪಿಯ ‘ಒಂದು ದೇಶ, ಒಂದು ಹಾಲು’ ಎಂಬ ಘೋಷಣೆಗೆ ಕಾಂಗ್ರೆಸ್ ಅವಕಾಶ ನೀಡುವುದಿಲ್ಲ. ಅಮೂಲ್ ಮತ್ತು ನಂದಿನಿ ನಡುವೆ ಬಲವಂತದ ಸಹಕಾರವನ್ನು ಕೇಂದ್ರ ಸರ್ಕಾರ ಬಯಸುತ್ತಿದೆ ಎಂದು ಪ್ರತಿಪಕ್ಷಗಳು ಬುಧವಾರ ಆರೋಪಿಸಿವೆ.
ಇದು ರಾಜ್ಯಗಳಲ್ಲಿನ ಡೇರಿ ಸಹಕಾರಿ ಸಂಸ್ಥೆಗಳನ್ನು ನಿಯಂತ್ರಿಸುವ ‘ನಾಚಿಕೆಗೇಡಿನ ಕ್ರಮ’ ಎಂದು ಹೇಳಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಸಹಕಾರಿ ಸಂಸ್ಥೆಗಳ ನಿಯಂತ್ರಣವನ್ನು ಕೇಂದ್ರೀಕರಿಸುವ ಬಿಜೆಪಿಯ ಪ್ರಯತ್ನಗಳನ್ನು ಪಕ್ಷ ಬಲವಾಗಿ ವಿರೋಧಿಸುತ್ತದೆ ಎಂದು ಹೇಳಿದರು.
ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಒಂದು ತಿಂಗಳು ಇರುವಾಗ ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದು, ಕೆಎಂಎಫ್ ₹ 21,000 ಕೋಟಿ ವಹಿವಾಟು ನಡೆಸುತ್ತಿದ್ದು ನಂದಿನಿ ಬ್ರಾಂಡ್ ಅನ್ನು ಆನಂದ್ ಮಿಲ್ಕ್ ಯೂನಿಯನ್ ಲಿಮಿಟೆಡ್ (ಅಮೂಲ್) ನೊಂದಿಗೆ ವಿಲೀನಗೊಳಿಸಬಹುದು ಎಂದು ಆತಂಕ ವ್ಯಕ್ತಪಡಿಸಿದೆ. ಆದರೆ, ಈ ಆರೋಪವನ್ನು ಬಿಜೆಪಿ ಬಲವಾಗಿ ತಿರಸ್ಕರಿಸಿದೆ.
ಯಾವುದೇ ಕಾರಣಕ್ಕೂ ಬಿಜೆಪಿಯ ಒಂದು ದೇಶ ಒಂದು ಹಾಲು ಎಂಬ ಘೋಷಣೆಗೆ ಕಾಂಗ್ರೆಸ್ ಅವಕಾಶ ನೀಡುವುದಿಲ್ಲ ಎಂದು ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ತನ್ನ ಚುನಾವಣಾ ಪ್ರಚಾರದಲ್ಲಿ ಹಾಗೂ ದೇಶದಾದ್ಯಂತ ರಾಜಕೀಯ ಚಟುವಟಿಕೆಗಳಲ್ಲಿ ಈ ನಡೆಗಳ ಹಿಂದಿನ ಕೆಟ್ಟ ಕಾರ್ಯಸೂಚಿ ಬಗ್ಗೆ ಕಾಂಗ್ರೆಸ್ ಜನರಿಗೆ ತಿಳಿಸುತ್ತದೆ ಮತ್ತು ಸಾಧ್ಯವಿರುವ ಎಲ್ಲಾ ಪ್ರಜಾಸತ್ತಾತ್ಮಕ ವಿಧಾನಗಳ ಮೂಲಕ ಅವುಗಳನ್ನು ವಿರೋಧಿಸಲು ನಿರ್ಧರಿಸುತ್ತದೆ ಎಂದು ಅವರು ಹೇಳಿದರು.
ಬಿಜೆಪಿ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಸಹಕಾರಿ ಸಂಘಗಳನ್ನು ರಾಜ್ಯ ವಿಷಯವಾಗಿ ಸ್ಪಷ್ಟವಾಗಿ ಗುರುತಿಸುವ ಸಂವಿಧಾನವನ್ನು ನಿರ್ಲಕ್ಷಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಆರೋಪಿಸಿದರು.
ಕಳೆದ ವರ್ಷ ಡಿಸೆಂಬರ್‌ನಲ್ಲಿ ಮಂಡ್ಯದಲ್ಲಿ ಕೆಎಂಎಫ್ ಮೆಗಾ ಡೇರಿ ಉದ್ಘಾಟನೆ ವೇಳೆ ಅಮಿತ್ ಶಾ, ‘ಅಮೂಲ್ ಮತ್ತು ನಂದಿನಿ ನಡುವಿನ ಸಹಕಾರವು ಡೈರಿ ಕ್ಷೇತ್ರದಲ್ಲಿ ಅದ್ಭುತ ಮಾಡಬಹುದು’ ಎಂದು ಹೇಳಿದ್ದರು.
ಗುಜರಾತ್ ಮೂಲದ ಅಮೂಲ್ ಏ. 5 ರಂದು ಹಾಲು ಮತ್ತು ಮೊಸರು ಪೂರೈಸಲು ಕರ್ನಾಟಕ ಮಾರುಕಟ್ಟೆಗೆ ಪ್ರವೇಶಿಸುವುದಾಗಿ ಘೋಷಿಸಿತು.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…