ಬೆಂಗಳೂರು : ಪೆಂಡ್ರೈವ್ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬಗ್ಗೆ ಸುಳಿವು ನೀಡಿದವರಿಗೆ ಒಂದು ಲಕ್ಷ ರೂ ಬಹುಮಾನ ಜನತಾ ಪಕ್ಷದ ಘೋಷಿಸಿದೆ.
ಈ ಪ್ರಕರಣವನ್ನು ತನಿಖೆ ಮಾಡಿ ಆರೋಪಿಯನ್ನು ಬಂಧಿಸಿವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಫಲವಾಗಿದೆ. ಈ ಉದ್ದೇಶದಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲು ಮುಂದಾಗಿದ್ದೇವೆ ಎಂದು ಪಕ್ಷ ತಿಳಿಸಿದೆ.
ಸರ್ವಜನಿಕರು ಯಾರೇ ಆಗಲಿ ಪ್ರಜ್ವಲ್ ರೇವಣ್ಣ ಬಗ್ಗೆ ಸುಳಿವು ಅಥವ ಹಿಡಿದು ಕೊಟ್ಟವರಿಗೆ ಒಂದು ಲಕ್ಷ ರೂ ಬಹುಮಾನವನ್ನು ನೀಡಲಾಗುವುದು ಎಂದು ಜನತಾ ಪಕ್ಷ ತಿಳಿಸಿದೆ.
ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ರಸ್ತೆಯಲ್ಲಿ ಪ್ರಜ್ವಲ್ ರೇವಣ್ಣ ವಾಂಟೆಡ್ ಎಂಬ ಫಲಕವನ್ನು ಹಿಡಿದು ಮೆರವಣಿಗೆ ಮಾಡಿದರು.