BREAKING NEWS

‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯು ಭಾರತದ ಒಕ್ಕೂಟದ ಮೇಲಿನ ದಾಳಿ: ರಾಹುಲ್ ಗಾಂಧಿ

ನವದೆಹಲಿ : “ಒಂದು ರಾಷ್ಟ್ರ, ಒಂದು ಚುನಾವಣೆ” ಕಲ್ಪನೆಯು ಭಾರತೀಯ ಒಕ್ಕೂಟ ಹಾಗೂ ಅದರ ಎಲ್ಲಾ ರಾಜ್ಯಗಳ ಮೇಲಿನ ದಾಳಿಯಾಗಿದೆ’’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರವಿವಾರ ಆರೋಪಿಸಿದ್ದಾರೆ.

“INDIA, ಅದು ಭಾರತ, ರಾಜ್ಯಗಳ ಒಕ್ಕೂಟವಾಗಿದೆ. ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯು ಒಕ್ಕೂಟ ಹಾಗೂ ಅದರ ಎಲ್ಲಾ ರಾಜ್ಯಗಳ ಮೇಲಿನ ದಾಳಿಯಾಗಿದೆ’’ಎಂದು ರಾಹುಲ್ ಗಾಂಧಿ ಈ ಕುರಿತು ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ,

ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಸಾಧ್ಯತೆಯ ಕುರಿತು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಕೇಂದ್ರ ಸರಕಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ ನಂತರ ಕಾಂಗ್ರೆಸ್ ಸಂಸದರು ಟ್ವೀಟ್ ಮಾಡಿದ್ದಾರೆ.

‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯನ್ನು ಅನುಷ್ಠಾನಗೊಳಿಸುವ ಸಾಧ್ಯತೆಯನ್ನು ಪರಿಶೀಲಿಸಲು ಕೇಂದ್ರ ಸರಕಾರ ರಚಿಸಿರುವ ಸಮಿತಿಯ ಭಾಗವಾಗುವ ಆಹ್ವಾನವನ್ನು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಶನಿವಾರ ನಿರಾಕರಿಸಿದ್ದಾರೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಮಿತಿಯಿಂದ ಹೊರಗಿಟ್ಟಿರುವ ಬಗ್ಗೆಯೂ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖರ್ಗೆ ಬದಲಿಗೆ ಪ್ರತಿಪಕ್ಷದ ಮಾಜಿ ನಾಯಕ ಗುಲಾಂ ನಬಿ ಆಝಾದ್ ಅವರನ್ನು ಸರಕಾರ ಸಮಿತಿಗೆ ಸೇರಿಸಿದೆ.

andolanait

Recent Posts

ಶೇ.10 ರಷ್ಟು ಜಾಗತಿಕ ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…

8 mins ago

ಹೂಫ್‌ಬೀಟ್ ಮ್ಯಾರಥಾನ್ : ಮೈಸೂರು ವಿದ್ಯಾರ್ಥಿಗಳ ಸಾಧನೆ

ಮೈಸೂರು : ಮಹಾರಾಷ್ಟ್ರದ ಕಾರ್ಜತ್‌ನಲ್ಲಿ ಇತ್ತೀಚೆಗೆ ನಡೆದ ಹೂಫ್‌ಬೀಟ್ ಮ್ಯಾರಥಾನ್ - ಮಹಾರಾಷ್ಟ್ರ ರಾಜ್ಯ ಎಂಡ್ಯುರನ್ಸ್ ಚಾಂಪಿಯನ್‌ಶಿಪ್‌ನಲ್ಲಿ ಮೈಸೂರಿನ ಚಾಮುಂಡಿ…

14 mins ago

Love in Mandya | ಮಗಳನ್ನ ಲವ್‌ ಮ್ಯಾರೇಜ್‌ ಮಾಡಿಕೊಂಡ ಅಳಿಯನ ಮನೆಗೆ ಬೆಂಕಿ ಇಟ್ಟ ಮಾವ!

ಮದ್ದೂರು : ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾದ ಹಿನ್ನೆಲೆಯಲ್ಲಿ ಹುಡುಗನ ಮನೆಗೆ ಯುವತಿಯ ತಂದೆ ಬೆಂಕಿ ಹಚ್ಚಿದ್ದು, ಯುವಕನ ಮನೆ…

20 mins ago

ಗ್ಯಾರಂಟಿ ಕುರಿತು ಸರ್ವೇ ನಡೆಸಲಿ : ಎಚ್.ವಿಶ್ವನಾಥ್‌ ಒತ್ತಾಯ

ಮೈಸೂರು : ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿ ಅಂಚಿಗೆ ತಂದು ನಿಲ್ಲಿಸಿರುವ ಗ್ಯಾರಂಟಿ ಯೋಜನೆಗಳ ಕುರಿತು ಸರ್ವೇ ನಡೆಸಬೇಕು. ಕಳೆದ…

42 mins ago

ಹನೂರು | ವಿವಿಧ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಹನೂರು : ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ…

1 hour ago

ಜಮೀನುಗಳಲ್ಲಿ ಕಾಡಾನೆ ಓಡಾಟ : ಗ್ರಾಮಸ್ಥರಲ್ಲಿ ಆತಂಕ

ಹನೂರು : ಬೆಳ್ಳಂಬೆಳಗ್ಗೆ ಎರಡು ಕಾಡಾನೆಗಳು ಜಮೀನುಗಳಲ್ಲಿ ಓಡಾಡಿ ಆತಂಕ ಸೃಷ್ಟಿಸಿದ ಘಟನೆ ಹನೂರು ತಾಲೂಕಿನ ಗುಂಡಾಪುರ ಗ್ರಾಮದಲ್ಲಿ ಶನಿವಾರ…

1 hour ago