Mysore
19
overcast clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಇರುವುದು ಬಿಜೆಪಿಗೆ ಮಾತ್ರ : ಖೂಬಾ

ಬೀದರ್: ಮೀಸಲಾತಿ ವಿಷಯದಲ್ಲಿ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಬಿಜೆಪಿ ಮಾತ್ರ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆಗಳನ್ನು ಈಡೇರಿಸಿ ಬದ್ಧತೆಯನ್ನು ತೋರಿದ್ದಾರೆ ಎಂದು ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.
ಕಾಂಗ್ರೆಸ್ ದಲಿತರು ಹಾಗೂ ಸಣ್ಣ ಸಮುದಾಯಗಳನ್ನು ಕೇವಲ ಮತಬ್ಯಾಂಕ್‍ಗಾಗಿ ಬಳಸಿಕೊಂಡಿತ್ತು. ಹೊಸ ಮೀಸಲಾತಿಯಂತೆ 2-ಡಿ, ವೀರಶೈವ ಲಿಂಗಾಯತ ಸಮುದಾಯ ಮೀಸಲಾತಿ ಶೇ 5 ರಿಂದ 7ಕ್ಕೆ ಹಾಗೂ 2-ಸಿ, ಒಕ್ಕಲಿಗ ಸಮುದಾಯದ ಮೀಸಲಾತಿ ಶೇ 4ರಿಂದ 6ಕ್ಕೆ ಏರಿಕೆ ಮಾಡಿರುವುದು ಅಭಿನಂದನಾರ್ಹವಾಗಿದೆ ಎಂದು ಹೇಳಿದ್ದಾರೆ.

ಪರಿಶಿಷ್ಟರ ಎಡಗೈ ಸಮುದಾಯಕ್ಕೆ ಶೇ 6 ರಷ್ಟು ಬಲಗೈ ಸಮುದಾಯಕ್ಕೆ ಶೇ 5.5 ರಷ್ಟು ಭೋವಿ, ಬಂಜಾರಾ ಸಮುದಾಯಗಳಿಗೆ ಶೇ 4.5 ರಷ್ಟು ಮತ್ತು ಅಲೆಮಾರಿ ಸಣ್ಣ ಸಮುದಾಯಗಳಿಗೆ ಶೇ 1 ರಷ್ಟು ಒಳ ಮೀಸಲಾತಿ ನೀಡಿರುವುದು ಐತಿಹಾಸಿಕ ಕ್ರಮವಾಗಿದೆ ಎಂದು ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!