ಬೀದರ್: ಮೀಸಲಾತಿ ವಿಷಯದಲ್ಲಿ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಬಿಜೆಪಿ ಮಾತ್ರ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆಗಳನ್ನು ಈಡೇರಿಸಿ ಬದ್ಧತೆಯನ್ನು ತೋರಿದ್ದಾರೆ ಎಂದು ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.
ಕಾಂಗ್ರೆಸ್ ದಲಿತರು ಹಾಗೂ ಸಣ್ಣ ಸಮುದಾಯಗಳನ್ನು ಕೇವಲ ಮತಬ್ಯಾಂಕ್‍ಗಾಗಿ ಬಳಸಿಕೊಂಡಿತ್ತು. ಹೊಸ ಮೀಸಲಾತಿಯಂತೆ 2-ಡಿ, ವೀರಶೈವ ಲಿಂಗಾಯತ ಸಮುದಾಯ ಮೀಸಲಾತಿ ಶೇ 5 ರಿಂದ 7ಕ್ಕೆ ಹಾಗೂ 2-ಸಿ, ಒಕ್ಕಲಿಗ ಸಮುದಾಯದ ಮೀಸಲಾತಿ ಶೇ 4ರಿಂದ 6ಕ್ಕೆ ಏರಿಕೆ ಮಾಡಿರುವುದು ಅಭಿನಂದನಾರ್ಹವಾಗಿದೆ ಎಂದು ಹೇಳಿದ್ದಾರೆ.
ಪರಿಶಿಷ್ಟರ ಎಡಗೈ ಸಮುದಾಯಕ್ಕೆ ಶೇ 6 ರಷ್ಟು ಬಲಗೈ ಸಮುದಾಯಕ್ಕೆ ಶೇ 5.5 ರಷ್ಟು ಭೋವಿ, ಬಂಜಾರಾ ಸಮುದಾಯಗಳಿಗೆ ಶೇ 4.5 ರಷ್ಟು ಮತ್ತು ಅಲೆಮಾರಿ ಸಣ್ಣ ಸಮುದಾಯಗಳಿಗೆ ಶೇ 1 ರಷ್ಟು ಒಳ ಮೀಸಲಾತಿ ನೀಡಿರುವುದು ಐತಿಹಾಸಿಕ ಕ್ರಮವಾಗಿದೆ ಎಂದು ತಿಳಿಸಿದ್ದಾರೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…