ನವದೆಹಲಿ : ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಲ್ಲಿ ಸಿಲುಕಿರುವ ತನ್ನ ಪ್ರಜೆಗಳನ್ನು ಸುರಕ್ಷಿತವಾಗಿ ಕರೆತರಲು ಭಾರತ ಸರ್ಕಾರ ಆಪರೇಷನ್ ಅಜಯ್ ಆರಂಭಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಯುದ್ಧಪೀಡಿತ ದೇಶದಿಂದ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಪ್ರಕಟಿಸಿದ್ದಾರೆ. ಇದಕ್ಕಾಗಿ ವಿಶೇಷ ಚಾರ್ಟರ್ ವಿಮಾನಗಳು ಹಾಗೂ ಇತರೆ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಮಧ್ಯಪ್ರಾಚ್ಯ ದೇಶದಲ್ಲಿ ಇಸ್ರೇಲ್ ಹಾಗೂ ಹಮಾಸ್ ಉಗ್ರರ ಕದನ ಮುಂದುವರಿದಿದೆ. ಹಮಾಸ್ ಪರ ಸಿರಿಯಾ, ಇರಾನ್, ಲೆಬನಾನ್‌ನಂತಹ ದೇಶಗಳು ದಾಳಿಗೆ ಮುಂದಾಗಿದ್ದರೆ, ಅಮೆರಿಕ, ಬ್ರಿಟನ್, ಫ್ರಾನ್ಸ್ ಹಾಗೂ ಇತರೆ ದೇಶಗಳು ಇಸ್ರೇಲ್ ಬೆನ್ನಿಗೆ ನಿಂತಿವೆ.
ಭಾರತಕ್ಕೆ ಮರಳಲು ಬಯಸಿರುವ ನಮ್ಮ ನಾಗರಿಕರಿಗೆ ಸೌಲಭ್ಯ ಕಲ್ಪಿಸಲು ಆಪರೇಷನ್ ಅಜಯ್ ಆರಂಭಿಸಲಾಗಿದೆ. ವಿಶೇಷ ಚಾರ್ಟರ್ ಫ್ಲೈಟ್‌ಗಳು ಮತ್ತು ಇತರೆ ವ್ಯವಸ್ಥೆಗಳನ್ನು ಒದಗಿಸಲಾಗುತ್ತಿದೆ” ಎಂದು ಜೈಶಂಕರ್ ಅವರು ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.
ವಿದೇಶದಲ್ಲಿ ನಮ್ಮ ಜನರ ಸುರಕ್ಷತೆ ಹಾಗೂ ಯೋಗ- ಕ್ಷೇಮಕ್ಕಾಗಿ ಸಂಪೂರ್ಣ ಬದ್ಧರಾಗಿದ್ದೇವೆ ಎಂದು ಅವರು ಹೇಳಿದ್ದಾರೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯವು ದಿಲ್ಲಿಯಲ್ಲಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವ ನಿಯಂತ್ರಣ ಕೊಠಡಿ, ಟೆಲ್ ಅವಿವ್ ಮತ್ತು ರಾಮಲ್ಲಾಹ್‌ನಲ್ಲಿ ಪ್ರತ್ಯೇಕ ತುರ್ತು ಸಹಾಯವಾಣಿಗಳನ್ನು ತೆರೆದಿದೆ. ಸಹಾಯದ ಅಗತ್ಯ ಇರುವ ಭಾರತೀಯರಿಗೆ ಅಗತ್ಯ ಮಾಹಿತಿ ಮತ್ತು ನೆರವು ಒದಗಿಸುವುದು ಹಾಗೂ ಪರಿಸ್ಥಿತಿಯ ಅವಲೋಕನ ಮಾಡುವುದು ಇದರ ಉದ್ದೇಶವಾಗಿದೆ. ಇಸ್ರೇಲ್‌ನಲ್ಲಿ ಸುಮಾರು 20 ಸಾವಿರ ಭಾರತೀಯರು ಇದ್ದಾರೆ ಎಂದು ವರದಿಯಾಗಿದೆ.
ಇಸ್ರೇಲ್‌ನಲ್ಲಿ ಕೇರಳದ ಸುಮಾರು 7 ಸಾವಿರ ಮಂದಿ ಸಿಲುಕಿದ್ದು, ಅವರಿಗೆ ಸಹಾಯ ಮಾಡುವಂತೆ ಮತ್ತು ಸುರಕ್ಷತೆಯನ್ನು ಖಾತರಿಪಡಿಸಲು ಮಧ್ಯಪ್ರವೇಶ ಮಾಡುವಂತೆ ಸಿಎಂ ಪಿಣರಾಯಿ ವಿಜಯನ್ ಅವರು ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದಿದ್ದರು.
ತಮಿಳುನಾಡು ಸರ್ಕಾರ ಕೂಡ ಇಸ್ರೇಲ್‌ನಲ್ಲಿ ರಾಜ್ಯ ಸುಮಾರು 84 ಮಂದಿ ಇರುವುದಾಗಿ ತಿಳಿಸಿತ್ತು. ಶಿಕ್ಷಣ, ಉದ್ಯಮ ಅಥವಾ ಪ್ರವಾಸಕ್ಕೆಂದು ತೆರಳಿದವರು ಯುದ್ಧದ ನಡುವೆ ಸಿಲುಕಿಕೊಂಡಿದ್ದಾರೆ.
ಹಮಾಸ್ ಮತ್ತು ಇಸ್ರೇಲ್ ನಡುವಿನ ಸಮರ ಗುರುವಾರ ಆರನೇ ದಿನಕ್ಕೆ ಕಾಲಿಟ್ಟಿದೆ. ಎರಡೂ ಪಡೆಗಳು ಪರಸ್ಪರ ತೀವ್ರ ಸಂಘರ್ಷಕ್ಕೆ ಇಳಿದಿವೆ. ಲೆಬನಾನ್‌ನ ರಾಜಕೀಯ ಪಕ್ಷ ಹಾಗೂ ಉಗ್ರ ಸಂಘಟನೆ ಹೆಜ್ಬೊಲ್ಲಾ, ಇಸ್ರೇಲ್ ಕಡೆ ಕ್ಷಿಪಣಿಗಳನ್ನು ಉಡಾಯಿಸಿರುವುದಾಗಿ ಹೇಳಿದೆ. ಸಿರಿಯಾ ಕೂಡ ಇಸ್ರೇಲ್ ಭೂಭಾಗದ ಮೇಲೆ ಶೆಲ್ ದಾಳಿ ನಡೆಸಿದೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್‌ಗಳನ್ನು…
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…