BREAKING NEWS

ಆಪರೇಷನ್ ಹಸ್ತ: ಕಾಂಗ್ರೆಸ್ ಸೇರ್ಪಡೆಗೊಂಡ ಎಸ್​​ಟಿ ಸೋಮಶೇಖರ್ ಬೆಂಬಲಿಗರು

ಬೆಂಗಳೂರು : ಕಾಂಗ್ರೆಸ್ ಪಕ್ಷವು ಆಪರೇಷನ್ ಹಸ್ತ ಆರಂಭಿಸಿದ್ದು, ಮೊದಲ ಹಂತವಾಗಿ ಯಶವಂತಪುರ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ ಅವರ ಬೆಂಬಲಿಗರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಇಂದು ಸೋಮಶೇಖರ್ ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಬಿಬಿಎಂಪಿ ಮಾಜಿ ಸದಸ್ಯರಾದ ಆರ್ಯ ಶ್ರೀನಿವಾಸ್​, ರಾಜಣ್ಣ, ಜಿ.ಪಂ. ಮಾಜಿ ಸದಸ್ಯರಾದ ಶಿವಮಾದಯ್ಯ, ಹನುಮಂತೇಗೌಡ, ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾದರು. ಈ ವೇಳೆ, ನೆಲಮಂಗಲ ಕಾಂಗ್ರೆಸ್​​ ಶಾಸಕ ಎನ್.ಶ್ರೀನಿವಾಸ್, ಆನೇಕಲ್ ಕಾಂಗ್ರೆಸ್ ಶಾಸಕ ಬಿ.ಶಿವಣ್ಣ ಉಪಸ್ಥಿತರಿದ್ದರು.

ಇದೇ ವೇಳೆ ಮಾತನಾಡಿದ ಮಾಜಿ ಪಾಲಿಕೆ ಸದಸ್ಯ ರಾಜಣ್ಣ,  ಸೋಮಶೇಖರ್ ಅವರಿಗೆ ಬಿಜೆಪಿಯಲ್ಲಿ ಇಲ್ಲಸಲ್ಲದ‌ ಕಾಟ ಕೊಡುತ್ತಿದ್ದಾರೆ. ಹೀಗಾಗಿ ಸೋಮಶೇಖರ್ ಅವರು ಆದಷ್ಟು ಬೇಗ ಕಾಂಗ್ರೆಸ್ ಪಕ್ಷಕ್ಕೆ ಬರಬೇಕು ಎಂದು ವೇದಿಕೆ ಮೇಲೆಯೇ ಆಹ್ವಾನ ನೀಡಿದರು.

ಸೋಮಶೇಖರ್ ಹೆಸರು ಹೇಳದಂತೆ ತಡೆದ ಶಾಸಕ ಶ್ರೀನಿವಾಸ್

ಕೆಪಿಸಿಸಿ ಸಭೆಯಲ್ಲಿ ಮಾತನಾಡುತ್ತಿದ್ದ ಆನೆಕಲ್ ಶಾಸಕ ಶಿವಣ್ಣ ಅವರು, ಸೋಮಶೇಖರ್ ಹೆಸರು ಹೇಳಿದ್ದಾರೆ. ಈ ವೇಳೆ ಸೋಮಶೇಖರ್ ಹೆಸರು ಹೇಳದಂತೆ ನೆಲಮಂಗಲ ಶಾಸಕ ಶ್ರೀನಿವಾಸ್ ಅವರು ತಡೆದಿದ್ದಾರೆ. ಕೂಡಲೇ ಮಾತು‌ ಬದಲಾಯಿಸಿದ ಅವರು, ಸೋಮಶೇಖರ್ ರಾಜಕೀಯ ಬೆಳವಣಿಗೆ ಬಗ್ಗೆ ಹೇಳಿದರು. ನಾನು ಮತ್ತು ಸೋಮಶೇಖರ್ ಒಂದೇ ಬಾರಿಗೆ ಚುನಾವಣೆಗೆ ಸ್ಫರ್ಧೆ ಮಾಡಿದ್ದೆವು.  2004 ರಲ್ಲಿ ನಮಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಎರಡು ಬಾರಿ ಸೋತರೂ ಮತ್ತೆ ಟಿಕೆಟ್ ನೀಡಿತ್ತು. ಇದರರ್ಥ ಕಾಂಗ್ರೆಸ್ ನಮ್ಮ ಕೈಬಿಡಲ್ಲ. ಕೆಲವೊಂದು ‌ಕಾರಣಗಳಿಂದ ಸೋಮಶೇಖರ್ ಬಿಜೆಪಿ ಹೋಗಿದ್ದಾರೆ ಎಂದರು.

andolanait

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

4 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

8 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

8 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

8 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

11 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

11 hours ago