Mysore
17
few clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ʼಆಪರೇಷನ್‌ ಹಸ್ತʼ ಯಶಸ್ವಿಯಾಗಲ್ಲ: ಬಸವರಾಜ ಬೊಮ್ಮಾಯಿ

ಬೆಂಗಳೂರು : ʼಲೋಕಸಭಾ ಚುನಾವಣೆಯ ಸಮೀಕ್ಷೆ ಬಂದ ನಂತರ ಸರ್ಕಾರದ ಅಸ್ತಿತ್ವದ ಪ್ರಶ್ನೆ ಬರುತ್ತೆ. ಹಾಗಾಗಿ ಕಾಂಗ್ರೆಸ್ ನವರಿಗೆ ಭಯ ಹುಟ್ಟಿಕೊಂಡಿದೆʼ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ʼʼಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸೀಟು ಗೆಲ್ಲಲ್ಲವೆಂದು ಸಮೀಕ್ಷೆಗಳು ಹೇಳುತ್ತಿವೆ. ಅದಕ್ಕಾಗಿ ಆಪರೇಷನ್ ಹಸ್ತ ಮಾಡುತ್ತಿದ್ದಾರೆ. ಆದರೆ, ಇದ್ಯಾವುದೂ ಯಶಸ್ವಿಯಾಗಲ್ಲ’ ಎಂದು ಹೇಳಿದರು.

ʼʼರಾಜ್ಯದಲ್ಲಿ ಮುಂಗಾರು ಜೂನ್ ತಿಂಗಳ ಕೊನೆವರೆಗೂ ಬರಲಿಲ್ಲ. ಮಳೆ ಇಲ್ಲದೇ ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದೆ. ಇದರಿಂದ ರೈತರಿಗೆ ಸಾಕಷ್ಟು ನಷ್ಟ ಆಗಿದೆ ಅದರ‌ ಬಗ್ಗೆ ಸರ್ಕಾರ ಯೋಚನೆ ಮಾಡಬೇಕು. ಆಗಸ್ಟ್ ನಲ್ಲಿ ಮಳೆ ಮತ್ತೆ ಹೋಗಿದೆ, ರೈತರು ಸಂಕಷ್ಟದಲ್ಲಿದ್ದಾರೆʼʼ ಎಂದು ಹೇಳಿದರು.

ʼʼಸರ್ಕಾರ ಮೂರು ತಿಂಗಳಿಂದ ಬರಗಾಲ ಘೋಷಣೆ ಮಾಡಿಲ್ಲ. ಬೆಳೆ, ಕುಡಿಯುವ ನೀರಿನ ಬಗ್ಗೆ ಯೋಚನೆ ಮಾಡಿಲ್ಲ, ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡಬೇಕುʼʼ ಎಂದು ಒತ್ತಾಯಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!