BREAKING NEWS

ನ್ಯಾ.ಸದಾಶಿವ ವರದಿ ಕೇಂದ್ರಕ್ಕೆ ಶಿಫಾರಸು ನಿರ್ಧಾರಕ್ಕೆ ವಿರೋಧ: ಚುನಾವಣೆ ಬಹಿಷ್ಕಾರಕ್ಕೆ ಸಮುದಾಯ ಸಿದ್ದತೆ

ಶಿವಮೊಗ್ಗ: ನ್ಯಾಯಮೂರ್ತಿ ಎ.ಜೆ. ಸದಾಶಿವ ಅಯೋಗದ ಶಿಫಾರಸ್ಸನ್ನು ಕೇಂದ್ರಕ್ಕೆ ಕಳುಹಿಸಲು ತೀರ್ಮಾನಿಸಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿ ಶಿಕಾರಿಪುರ ತಾಲ್ಲೂಕಿನ ಹಲವು ತಾಂಡಾಗಳ ಎದುರು ವಿಧಾನಸಭೆ ಚುನಾವಣೆ ಬಹಿಷ್ಕಾರ ಕುರಿತಾದ ಫ್ಲೆಕ್ಸ್‌ಗಳು ಕಾಣಿಸುತ್ತಿವೆ.

ತಾಲ್ಲೂಕು ಕೇಂದ್ರ ಶಿಕಾರಿಪುರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲು ಬಂಜಾರ ಸಮುದಾಯ ಮುಂದಾಗಿದೆ.

ತಾಲ್ಲೂಕಿನ ಕುಸ್ಕೂರು ತಾಂಡಾ, ಬಿಳಕಿ, ಇಟ್ಟಿಗೆಹಳ್ಳಿ ಬಳ್ಳೂರು ತಾಂಡಾಗಳ ಪ್ರವೇಶ ದ್ವಾರದಲ್ಲಿ ‘ಹಮಾರೋ ತಾಂಡೊ ಹಮಾರೋ ರಾಜ್’ ಹೆಸರಿನ ಫ್ಲೆಕ್ಸ್‌ಗಳನ್ನು ಹಾಕಲಾಗಿದೆ. ತಾಂಡಾಕ್ಕೆ ರಾಜಕೀಯ ಪಕ್ಷಗಳ ಮುಖಂಡರ ಪ್ರವೇಶ ಸಂಪೂರ್ಣ ನಿರ್ಬಂಧಿಸಲಾಗಿದೆ ಎಂದು ಅದರಲ್ಲಿ ಉಲ್ಲೇಖಿಸಲಾಗಿದೆ. ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಸಾಮಾಜಿಕ ಜಾಲತಾಣದಲ್ಲೂ ಪೋಸ್ಟರ್‌ ಹರಿಬಿಡಲಾಗಿದೆ.

ಮುಖಂಡರಿಗೂ ಬಹಿಷ್ಕಾರದ ಭೀತಿ: ‘ಪ್ರತಿಭಟನೆಗೆ ಪೂರ್ವಭಾವಿಯಾಗಿ ಶಿಕಾರಿಪುರದಲ್ಲಿ ಭಾನುವಾರ ನಡೆದ ಸಭೆಗೆ ಹಾಲಿ, ಮಾಜಿ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗಿತ್ತು. ಸಮಾಜದ ಮುಖಂಡರು ಯಾರು ಬರುವುದಿಲ್ಲವೋ ಅವರು ಚುನಾವಣೆ ಪ್ರಚಾರಕ್ಕೆ ತಾಂಡಾಗಳಿಗೆ ಬಿಟ್ಟುಕೊಳ್ಳಬಾರದು ಎಂಬ ನಿರ್ಧಾರ ಕೈಗೊಳ್ಳಲಾಗಿತ್ತು. ನೀವು ಬರುತ್ತೀರೊ, ಇಲ್ಲವೋ ಸ್ಪಷ್ಟಪಡಿಸಿ ಎಂದು ತಾಕೀತು ಮಾಡಿದ್ದರಿಂದ ಬಹುತೇಕರು ಪಾಲ್ಗೊಂಡಿದ್ದೆವು’ ಎಂದು ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯ, ಸಾಲೂರಿನ ಜಯಾನಾಯ್ಕ ಹೇಳಿದರು.

‘ನಮಗೆ ಅನ್ಯಾಯ ಆಗಲಿದೆ. ಚುನಾವಣೆಯಲ್ಲಿ ಮತ ಹಾಕುವುದು ಬೇಡ. ಬಹಿಷ್ಕರಿಸೋಣ ಎಂದು ಸಭೆಯಲ್ಲಿ ನಿರ್ಧರಿಸಲಾಯಿತು. ನಾವು ಬಿಜೆಪಿಯಲ್ಲಿ ಇದ್ದವರು. ಪಕ್ಷದ ಪರ ಮಾತಾಡಲು ಹೋದರೆ ಗಲಾಟೆ ಆಗುತ್ತಿತ್ತು. ಹೀಗಾಗಿ ಏನೂ ಮಾತಾಡಲಾಗಲಿಲ್ಲ’ ಎಂದು ತಿಳಿಸಿದರು.

‘ಶಿಕಾರಿಪುರ ತಾಲ್ಲೂಕಿನಲ್ಲಿ 68 ತಾಂಡಾಗಳಿವೆ. ನಮಗೂ ಈ ವಿಚಾರದಲ್ಲಿ ವಿಷಾದ ಇದೆ. ರಾಘಣ್ಣ, ಬಿ.ಎಸ್.ಯಡಿಯೂರಪ್ಪ ನಮ್ಮ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಇದು ನಮಗೂ ನುಂಗಲಾರದ ತುತ್ತಾಗಿದೆ’ ಎಂದು ಅಳಲು ತೋಡಿಕೊಂಡರು.

‘ನಮ್ಮ ತಾಂಡಾದಲ್ಲಿ 125 ಮನೆಗಳಿವೆ. ನಾವ್ಯಾರೂ ಮತ ಹಾಕುವುದಿಲ್ಲ. ಯಾವುದೇ ಪಕ್ಷದವರು ನಮ್ಮೂರಿಗೆ ಬರುವಂತಿಲ್ಲ’ ಎಂದು ಬಹಿಷ್ಕರಿಸಿದ್ದೇವೆ’ ಎಂದು ಕುಸ್ಕೂರು ತಾಂಡಾದ ಲಕ್ಷ್ಮಣ ನಾಯ್ಕ ಹೇಳಿದರು.

ಪ್ರತಿಭಟನೆಯ ನಿರ್ಧಾರ

ಶಿಕಾರಿಪುರದ ಪ್ರವಾಸಿ ಮಂದಿರದಲ್ಲಿ ಭಾನುವಾರ ತಾಲ್ಲೂಕು ಬಂಜಾರ ಸಮಿತಿ ಅಧ್ಯಕ್ಷ ವಡ್ಡಿಗೇರಿ ಮಂಜುನಾಯ್ಕ ನೇತೃತ್ವದಲ್ಲಿ ತಾಂಡಾಗಳ ಪ್ರಮುಖರು ಸೇರಿ ಸರ್ಕಾರದ ನಿರ್ಧಾರದ ವಿರುದ್ಧ ಖಂಡನಾ ಸಭೆ ನಡೆಸಿದರು. ಈ ವೇಳೆ ಪ್ರತಿಭಟನೆಯ ನಿರ್ಧಾರ ಕೈಗೊಳ್ಳಲಾಗಿದೆ.

********

ಸರ್ಕಾರದ ಮೇಲಿನ ಸಿಟ್ಟಿಗೆ ತಾಂಡಾದ ಜನರು ಚುನಾವಣೆ ಬಹಿಷ್ಕಾರದ ಫ್ಲೆಕ್ಸ್‌ಗಳನ್ನು ಹಾಕಿದ್ದಾರೆ. ಶಿಕಾರಿಪುರದಲ್ಲಿ ಸೋಮವಾರ ನಡೆಯುವ ಪ್ರತಿಭಟನೆ ನಂತರ ಆ ಬಗ್ಗೆ ಚರ್ಚಿಸಲಾಗುವುದು.

-ಸೈನಾಭಗತ್ ಮಹಾರಾಜ್, ಬಂಜಾರಾ ಸಮುದಾಯದ ಧರ್ಮಗುರು, ಮರಿಯಮ್ಮದೇವಿ ಮತ್ತು ಸೇವಾಲಾಲ್ ಮಠ, ಸಾಲೂರು

andolanait

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

7 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

8 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

8 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

8 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

8 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

9 hours ago