ಬೆಂಗಳೂರು: ವಿಧಾನಸಭೆಯಲ್ಲಿ ಸ್ಪೀಕರ್ ಪೀಠಕ್ಕೆ ಅಗೌರವ ಸೂಚಿಸಿದ ಆರೋಪದಲ್ಲಿ ಹತ್ತು ಮಂದಿ ಶಾಸಕರ ಅಮಾನತು ಮಾಡಿದ್ದನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.
ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂದೆ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಸ್ಪೀಕರ್ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸುನೀಲ್ ಕುಮಾರ್, ಸುರೇಶ್ ಕುಮಾರ್, ಮುನಿರತ್ನ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದಾರೆ.
ಸದನಕ್ಕೆ ಗೈರು
ಇನ್ನು ಬಿಜೆಪಿ ಶಾಸಕರು ಸದನಕ್ಕೆ ಗೈರಾಗುವ ಮೂಲಕ ಮೂಲಕ ನಮ್ಮ ಆಕ್ರೋಶ ವ್ಯಕ್ತಪಡಿಸಿದರು. ಜೆಡಿಎಸ್ ಸದಸ್ಯರು ಕೂಡಾ ಇದಕ್ಕೆ ಸಾಥ್ ನೀಡಿದ್ದಾರೆ. ಜೆಡಿಎಸ್ ಕೂಡಾ ಸದನಕ್ಕೆ ಹಾಜರಾಗಿಲ್ಲ.
ಐಎಎಸ್ ಅಧಿಕಾರಿಗಳನ್ನು ವಿಪಕ್ಷ ನಾಯಕರ ಸ್ವಾಗತಕ್ಕೆ ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಸದನದಲ್ಲಿ ಬುಧವಾರ ಧರಣಿ ನಡೆಸಿದ್ದರು
ರಾಜಭವನಕ್ಕೆ ತೆರಳುತ್ತಿರುವ ಬಿಜೆಪಿ ನಾಯಕರು
ಅಧಿವೇಶನಕ್ಕೆ ಹತ್ತು ಸದಸ್ಯರ ಅಮಾನತು ವಿಚಾರವಾಗಿ ಸ್ಪೀಕರ್ ನಡೆಯನ್ನು ವಿರೋಧಿಸಿ ಬಿಜೆಪಿ ನಾಯಕರು ರಾಜಪಾಲರನ್ನು ಭೇಟಿ ಮಾಡಲು ತೆರಳುತ್ತಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಇತರ ನಾಯಕರು ರಾಜಭವನಕ್ಕೆ ಕಾಲುನಡಿಗೆಯ ಮೂಲಕ ತೆರಳುತ್ತಿದ್ದಾರೆ. ರಾಜ್ಯಪಾಲರಿಗೆ ದೂರು ನೀಡಲು ಆಗಮಿಸಿದ ಬಿಜೆಪಿ ಶಾಸಕರಿಗೆ ಜೆಡಿಎಸ್ ಕೂಡಾ ಸಾಥ್ ನೀಡಿದರು. ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹಾಗೂ ಶಾಸಕರು ರಾಜಭವನಕ್ಕೆ ಆಗಮಿಸಿದ್ದಾರೆ. ಅಮಾನತು ವಿರೋಧಿಸಿ ರಾಜಪಾಲರಿಗೆ ಜಂಟಿಯಾಗಿ ದೂರು ನೀಡಲಿದ್ದಾರೆ.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…