ನವದೆಹಲಿ: ಮೋದಿ ಸರ್ಕಾರದ ವಿರುದ್ದ ಸ್ಪರ್ಧೆ ನಡೆಸಲು ಒಂದಾಗಲು ಯತ್ನಿಸುತ್ತಿರುವ ಪ್ರತಿಪಕ್ಷಗಳಲ್ಲಿ ಬಿರುಕು ಮೂಡುತ್ತಿದೆ. ಬಿಹಾರದ ಪಾಟ್ನಾದಲ್ಲಿ ಶುಕ್ರವಾರ ನಡೆಯಲಿರುವ ಪ್ರತಿಪಕ್ಷಗಳ ಸಭೆಗೆ ಬಿಎಸ್ ಪಿ ಮತ್ತು ಆರ್ ಎಲ್ ಡಿ ಪಕ್ಷಗಳು ಗೈರಾಗಲಿದೆ.
ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಮುಖ್ಯಸ್ಥ ಜಯಂತ್ ಚೌಧರಿ ಕುಟುಂಬ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಕಾರಣ ಶುಕ್ರವಾರ ಪಾಟ್ನಾದಲ್ಲಿ ಬೃಹತ್ ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದಿದ್ದಾರೆ.
ಉತ್ತರ ಪ್ರದೇಶದ, ಬಿಎಸ್ ಪಿ ನಾಯಕಿ ಮಾಯಾವತಿ ಅವರು ಕಾಂಗ್ರೆಸ್ ಮತ್ತು ಬಿಜೆಪಿ ಎರಡನ್ನೂ ಗುರಿಯಾಗಿಸಿಕೊಂಡು ಸರಣಿ ಟ್ವೀಟ್ ಮಾಡಿದ್ದು, ಪಾಟ್ನಾ ಸಮಾವೇಶದಲ್ಲಿ ಭಾಗವಹಿಸುವುದಿಲ್ಲ ಎಂದಿದ್ದಾರೆ.
2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ವಿರೋಧ ಪಕ್ಷಗಳು ಜಂಟಿಯಾಗಿ ಸಮಸ್ಯೆಗಳನ್ನು ಎತ್ತುತ್ತಿದ್ದರೂ, ನಿತೀಶ್ ಕುಮಾರ್ ಅವರು ಆಯೋಜಿಸಿರುವ ಪಾಟ್ನಾ ಸಭೆಯು “ಹೃದಯಗಳಲ್ಲ, ಕೈ ಜೋಡಿಸುವಂತಿದೆ” ಎಂದು ಮಾಯಾವತಿ ಹೇಳಿದರು.
ಹಣದುಬ್ಬರ, ಬಡತನ, ನಿರುದ್ಯೋಗ, ಹಿಂದುಳಿದಿರುವಿಕೆ, ಅನಕ್ಷರತೆ, ಜನಾಂಗೀಯ ದ್ವೇಷ, ಧಾರ್ಮಿಕ ಹಿಂಸಾಚಾರ ಇತ್ಯಾದಿಗಳಿಂದ ಬಳಲುತ್ತಿರುವ ದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯಂತಹ ಪಕ್ಷಗಳು ಮಾನವೀಯ ಸಮಾನತೆಯ ಸಂವಿಧಾನವನ್ನು ಜಾರಿಗೆ ತರಲು ಸಮರ್ಥವಾಗಿಲ್ಲ ಎಂಬುದು ಬಹುಜನರ ಸ್ಥಿತಿಯಿಂದ ಸ್ಪಷ್ಟವಾಗಿದೆ” ಎಂದು ಯುಪಿ ಮಾಜಿ ಮುಖ್ಯಮಂತ್ರಿ ಮಾಯಾವತಿ ಹೇಳಿದರು.
ಪ್ರತಿಪಕ್ಷಗಳನ್ನು ಒಗ್ಗೂಡಿಸುತ್ತಿರುವ ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಸಭೆಯನ್ನು ಕರೆದಿದ್ದಾರೆ.
ಪಾಟ್ನಾದ ಪ್ರತಿಪಕ್ಷ ಸಭೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಮತ್ತು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಾಯಕ ಎಂಕೆ ಸ್ಟಾಲಿನ್, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಎಂ.ಕೆ. ಶರದ್ ಪವಾರ್, ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…