BREAKING NEWS

ಶಾಂತಿಭಂಗ ಮಾಡುವ ಸಂಘಟನೆಗಳ ಮೇಲೆ ನಿಗಾ ವಹಿಸಲಾಗುವುದು: ಕಾಂಗ್ರೆಸ್‌

ಬೆಂಗಳೂರು: ಅತ್ಯಾಚಾರ, ಅನಾಚಾರ, ಶಾಂತಿಭಂಗ ಮುಂತಾದ ಸಮಾಜಘಾತುಕ ಕೃತ್ಯಗಳನ್ನು ನಡೆಸುತ್ತಿರುವ ಸಂಘಟನೆಗಳ ಚಟುವಟಿಕೆಗಳನ್ನು ನಿಯಂತ್ರಿಸುವ ಬಗ್ಗೆ ನಮ್ಮ ಸರ್ಕಾರ ಚಿಂತನೆ ನಡೆಸಲಿದೆ ಎಂದು ಕಾಂಗ್ರೆಸ್ ಹೇಳಿದೆ.

ಈ ಬಗ್ಗೆ ಟ್ವೀಟ್ ಮಾಡಿದ್ದು 2019ರ ಪ್ರಕರಣವೊಂದನ್ನು ಉಲ್ಲೇಖಿಸಲಾಗಿದೆ. ಚಿತ್ತಾಪುರದಲ್ಲಿ ಆರ್‍ಎಸ್‍ಎಸ್‍ನ ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಗೆ ವಂಚಿಸಿ ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ.

ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯವೆಸಗುವುದೇ ಆರ್‍ಎಸ್‍ಎಸ್ ಶಾಖೆಯ ನಿತ್ಯ ಪಾಠವೇ ಎಂದು ಬಿಜೆಪಿಯನ್ನು ಪ್ರಶ್ನಿಸಲಾಗಿದೆ.

ಟ್ವೀಟ್‍ನಲ್ಲಿ ಮಹಿಳೆ ನೀಡಿರುವ ದೂರು ಹಾಗೂ ಅದನ್ನು ಆಧರಿಸಿ ದಾಖಲಾಗಿರುವ ಎಫ್‍ಐಆರ್ ಬಗ್ಗೆ ಮಾಹಿತಿ ನೀಡಲಾಗಿದೆ. ಅದರಲ್ಲಿ ವ್ಯವಹಾರಿಕ ವ್ಯಕ್ತಿಯೊಬ್ಬರು ವಿವಾಹಿತ ಮಹಿಳೆಗೆ ವಂಚಿಸಿ ಅಕ್ರಮ ಸಂಬಂಧ ಬೆಳೆಸಿದ್ದು, ಇತ್ತೀಚೆಗೆ ಆಕೆಯನ್ನು ನಿರಾಕರಿಸುತ್ತಿದ್ದಾರೆ ಎಂಬ ಆರೋಪ ಇದೆ. ಮಹಿಳೆಯಿಂದ ಸಾಲ ಮಾಡಿಸಿ, ಚಿನ್ನ ಪಡೆದುಕೊಂಡು ಅವರ ಸಾಂಸಾರಿಕ ಜೀವನವನ್ನು ಹಾಳು ಮಾಡಲಾಗಿದೆ ಎಂದು ದೂರಲಾಗಿದೆ.

ಟ್ವಿಟರ್ ನಲ್ಲಿ ಆರ್‍ಎಸ್‍ಎಸ್ ಸಮವಸ್ತ್ರಧಾರಿಗಳ ಫೋಟೋ ಲಗತ್ತಿಸಿದ್ದು ಅದರಲ್ಲಿ ಒಬ್ಬ ವ್ಯಕ್ತಿಯ ಮುಖಕ್ಕೆ ವೃತ್ತದ ಗುರುತು ಮಾಡಲಾಗಿದೆ.

ಈ ಮೊದಲು ಬಜರಂಗದಳ, ಆರ್‍ಎಸ್‍ಎಸ್ ಸೇರಿದಂತೆ ಯಾವುದೇ ವ್ಯಕ್ತಿಗಳು ಕಾನೂನು ಮೀರಿ ವರ್ತಿಸಿದರೆ ಕ್ರಮ ಕೈಗೊಳ್ಳುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು

ಈಗ ಅವರದೇ ಕ್ಷೇತ್ರದ 4 ವರ್ಷಗಳ ಹಿಂದಿನ ಪ್ರಕರಣವನ್ನು ಉಲ್ಲೇಖಿಸಿ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಶಾಂತಿಭಂಗ ಮುಂತಾದ ಚಟುವಟಿಕೆಗಳಲ್ಲಿ ತೊಡಗಿರುವ ಸಂಘಟನೆಗಳನ್ನು ನಿಯಂತ್ರಿಸಲು ಚಿಂತನೆ ನಡೆಸಲಾಗುವುದು ಎಂದು ತಿಳಿಸಲಾಗಿದೆ.

ಗ್ಯಾರಂಟಿ ಯೋಜನೆಗಳ ವಿಳಂಬದಿಂದಾಗಿ ಜನರಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಕೇಳಿಬರುತ್ತಿದ್ದು, ಅದರ ದಿಕ್ಕು ತಪ್ಪಿಸಲು ಈ ರೀತಿಯ ಹೇಳಿಕೆಗಳನ್ನು ನೀಡಲಾಗುತ್ತಿದೆ ಎಂಬ ಅಸಮಾಧಾನವೂ ಕೇಳಿಬಂದಿದೆ.

andolanait

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

12 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

13 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

13 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

13 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

14 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

17 hours ago