ಹೈದರಾಬಾದ್ : ಪ್ರಜಾಪ್ರಭುತ್ವವನ್ನು ಉಳಿಸುವ ಸಲುವಾಗಿ ವಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸರ್ವಾಧಿಕಾರಿ ಆಡಳಿತವನ್ನು ಕಿತ್ತೊಗೆಯಲು ಸಂಘಟನಾತ್ಮಕ ಹೋರಾಟ ಅಗತ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ.
ಹೈದ್ರಾಬಾದ್‍ನಲ್ಲಿ ನಡೆಯುತ್ತಿರುವ ಕಾಂಗ್ರೆಸ್‍ನ ರಾಷ್ಟ್ರೀಯ ಕಾರ್ಯಕಾರಿ ಸಭೆಯ ಮುಂದುವರೆದ ಸರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಕ್ಷದಲ್ಲಿ ಶಿಸ್ತು ಮತ್ತು ಏಕತೆಗೆ ಆದ್ಯತೆ ನೀಡುವಂತೆ ತಾಕೀತು ಮಾಡಿತು.
2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವುದು ಮತ್ತು ಕೇಂದ್ರದಲ್ಲಿ ಸರ್ಕಾರ ರಚಿಸಲು ಪರ್ಯಾಯ ಶಕ್ತಿ ರಚನೆಗೆ ಶ್ರದ್ಧೆಯಿಂದ ಕೆಲಸ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರತಿದಿನವೂ ಅನಗತ್ಯ ವಿವಾದವನ್ನು ಸೃಷ್ಟಿಸುವ ಮೂಲಕ ಜನರ ಮೂಲಭೂತ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇತ್ತೀಚೆಗೆ ಇಂಡಿಯಾ ಕೂಟ ಮುಂಬೈನಲ್ಲಿ ಸಭೆ ನಡೆಸಿದಾಗ ಕೇಂದ್ರಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆ ವಿಚಾರ ಕುರಿತು ಅಧ್ಯಯನ ಸಮಿತಿ ರಚಿಸಿತ್ತು. ಸಂಪ್ರದಾಯದ ವಿರುದ್ಧವಾಗಿ ಆ ಸಮಿತಿಗೆ ಮಾಜಿ ರಾಷ್ಟ್ರಪತಿಯವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ದೂರಿದರು.
ಮುಂದಿನ ಮೂರು ತಿಂಗಳಲ್ಲಿ 5 ರಾಜ್ಯಗಳಿಗೆ ವಿಧಾನಸಭೆ ಚುನಾವಣೆ ನಡೆಯಲಿದೆ. ಲೋಕಸಭೆ ಚುನಾವಣೆಗೆ 6 ತಿಂಗಳು ಮಾತ್ರ ಕಾಲಾವಕಾಶವಿದೆ. ಹೀಗಾಗಿ ಪ್ರತಿ ಕ್ಷಣವೂ ಕಾಂಗ್ರೆಸಿಗರಿಗೆ ಅಮೂಲ್ಯವಾದುದು ಎಂದು ಹೇಳಿದರು.
ಜಮ್ಮು-ಕಾಶ್ಮೀರದಲ್ಲಿ ಸಂಭವನೀಯ ಚುನಾವಣೆಗೆ ಪಕ್ಷ ಸಿದ್ಧವಾಗಿರಬೇಕು. ಛತ್ತೀಸ್‍ಘಡ, ರಾಜಸ್ಥಾನದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರಗಳು ಜಾರಿಗೊಳಿಸಿದ ಕಲ್ಯಾಣ ಕಾರ್ಯಕ್ರಮಗಳು ದೇಶಕ್ಕೆ ಮಾದರಿಯಾಗಿವೆ. ಇವುಗಳನ್ನು ವ್ಯಾಪಕ ಪ್ರಚಾರ ಮಾಡಬೇಕು. ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಹಿಮಾಚಲ ಪ್ರದೇಶ, ಕರ್ನಾಟಕದ ಗೆಲುವು, ಪಕ್ಷದ ಹುಮ್ಮಸ್ಸನ್ನು ಹೆಚ್ಚಿಸಿದೆ ಎಂದರು.
ಪಕ್ಷದ ನಾಯಕರು, ಕಾರ್ಯಕರ್ತರು ಸಂಘಟನೆಯ ಹಿತಾಸಕ್ತಿಗೆ ಧಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು. ಮಾಧ್ಯಮಗಳ ಮುಂದೆ ಅನಗತ್ಯ ವಿಚಾರಗಳನ್ನು ಚರ್ಚಿಸದೆ ಸ್ವಯಂನಿಯಂತ್ರಣ ಕ್ರೂಢೀಕರಿಸಿಕೊಳ್ಳಬೇಕು. ಒಗ್ಗಟ್ಟಿನ ಬಲ, ಶಿಸ್ತು ಗೆಲುವಿಗೆ ಸಹಕಾರಿ ಎಂಬುದು ಕರ್ನಾಟಕದಲ್ಲಿ ಸಾಬೀತು ಮಾಡಿದೆ.
ಮುಂದಿನ ದಿನಗಳಲ್ಲಿ ಸಂವಿಧಾನದ ಸಂರಕ್ಷಣೆ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ರಾಜಕೀಯ ಬದಲಾವಣೆ ಅನಿವಾರ್ಯವಾಗಿದೆ. ಇವು ಕೇವಲ ಕಾಂಗ್ರೆಸ್‍ನ ಸವಾಲುಗಳಲ್ಲ. ಭಾರತೀಯರ ಪ್ರತಿಯೊಬ್ಬರ ಮುಂದಿರುವ ಅಪಾಯ ಎಂದು ಎಚ್ಚರಿಸಿದರು.
ಪ್ರತಿಯೊಂದು ರಾಜ್ಯದ ಕಾಂಗ್ರೆಸ್ ಘಟಕವು ಬೂತ್, ಬ್ಲಾಕ್, ಜಿಲ್ಲಾಮಟ್ಟಗಳಲ್ಲಿ ಸಮಿತಿಗಳನ್ನು ಸಿದ್ಧವಾಗಿಟ್ಟುಕೊಂಡಿರಬೇಕು. ಕಾಲಕಾಲಕ್ಕೆ ನಿಯಮಿತ ಕಾರ್ಯಕ್ರಮಗಳನ್ನು ನೀಡಬೇಕು. ಸಂಭವನೀಯ ಅಭ್ಯರ್ಥಿಗಳನ್ನು ಗುರುತಿಸಲು ಆರಂಭಿಸಬೇಕು. ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರದ ಲೋಪಗಳನ್ನು ಜನರ ಮುಂದಿಡಬೇಕು.
ರೈತರು, ಕಾರ್ಮಿಕರು, ಮಹಿಳೆಯರು, ಸಾಮಾಜಿಕ ಸ್ಥಿತಿಗತಿಗಳಲ್ಲಿ ಅನುಭವಿಸುತ್ತಿರುವ ಸಮಸ್ಯೆಗಳನ್ನು ವಿಶ್ಲೇಷಿಸಬೇಕು. ಜನ ಸಂಕಷ್ಟದಲ್ಲಿದ್ದಾಗ ಮೂಕ ಪ್ರೇಕ್ಷಕರಾಗಿ ಉಳಿಯಲು ಸಾಧ್ಯವಿಲ್ಲ ಎಂದರು.
ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಶತಮಾನೋತ್ಸವವನ್ನು 2024 ರಲ್ಲಿ ಆಚರಿಸಲಾಗುತ್ತಿದೆ. ಆ ವೇಳೆಗೆ ಬಿಜೆಪಿಯನ್ನು ಅಕಾರದಿಂದ ಕಿತ್ತೊಗೆದು ಗಾಂಧಿಜೀಯವರಿಗೆ ನಾವು ಗೌರವ ಸಲ್ಲಿಸಬೇಕು. ತೆಲಂಗಾಣದಿಂದ ಹೊಸ ಶಕ್ತಿ ಮತ್ತು ಹೊಸ ಸಂದೇಶದೊಂದಿಗೆ ನಾವು ಜನರ ಮುಂದೆ ಹೋಗುತ್ತಿದ್ದೇವೆ. ಬಿಜೆಪಿ ದುರಾಡಳಿತದಿಂದ ಜನರ ದುಃಖವನ್ನು ಮುಕ್ತಗೊಳಿಸಲು ಹಾಗೂ ಎಲ್ಲಾ ಚುನಾವಣೆ ಗೆಲ್ಲಲು ಸಂಕಲ್ಪ ಬದ್ಧರಾಗಿರುವಂತೆ ಸಲಹೆ ನೀಡಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…