Mysore
20
clear sky

Social Media

ಶುಕ್ರವಾರ, 02 ಜನವರಿ 2026
Light
Dark

ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ ಪ್ರಕರಣ: ಆರೋಪಿಗಳಿಗೆ ಜಾಮೀನು

ಬೆಂಗಳೂರು: ರಾಜ್ಯಸಭಾ ಚುನಾವಣೆ ಬಳಿಕ ʼವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆʼ ಎಂಬ ಆರೋಪದಡಿಯಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೆ ನಗರದ ಹೆಚ್ಚುವರಿ ಮುಖ್ಯ ಮೆಟ್ರೊ ಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಷರತ್ತಬದ್ಧ ಜಾಮೀನು ಮಂಜೂರು ಮಾಡಿದೆ.

ಬಂಧನಕ್ಕೊಳಗಾಗಿದ್ದ ದೆಹಲಿಯ ಕಿಶನ್‌ ಗಂಜಂನ ಮೊಹಮ್ಮದ್‌ ಇಲ್ತಾಜ್‌, ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮ್ಮದ್‌ ಶಫಿ ನಾಶಿಪುಡಿ ಮತ್ತು ಬೆಂಗಳೂರಿನ ಜಯಮಹಲ್‌ ನಿವಾಸಿ ಡಿ.ಎಸ್.‌ ಮುನಾವರ್‌ ಅಹ್ಮದ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 39ನೇ ಹೆಚ್ಚುವರಿ ಮುಖ್ಯ ಮೆಟ್ರೊ ಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನ ನ್ಯಾಯಾಧೀಶ ವಿ. ವಿಜೇತ್‌ ಪುರಸ್ಕರಿಸಿದ್ದಾರೆ.

ʼಆರೋಪಿಗಳು ಒಂದು ಲಕ್ಷ ರೂಪಾಯಿ ಮೊತ್ತದ ಮುಚ್ಚಳಿಕೆ ನೀಡಬೇಕು. ಇಬ್ಬರು ವ್ಯಕ್ತಿಗಳು ಜಾಮೀನು ಒದಗಿಸಬೇಕು. ಆರೋಪಿಗಳು ಭಾರತ ಬಿಟ್ಟು ಹೊರಹೋಗಬಾರದು. ವಿಚಾರಣೆಗಳಿಗೆ ಹಾಜರಾಗಬೇಕು ಮತ್ತು ಇಂತಹ ಅಪರಧ ಕೃತ್ಯಗಳಲ್ಲಿ ಭಾಗಿಯಾಗಬಾರದು” ಎಂದು ಷರತ್ತುಗಳನ್ನು ವಿಧಿಸಿದೆ.

Tags:
error: Content is protected !!