ಇಸ್ಲಾಮಾಬಾದ್ : ಭಾರತವು ಚಂದ್ರನನ್ನು ತಲುಪಿ ವಿಶ್ವದಾದ್ಯಂತ ಹೆಗ್ಗಳಿಕೆಗೆ ಪಾತ್ರವಾದರೆ, ಇತ್ತ ಪಾಕಿಸ್ತಾನವು ಪ್ರಪಂಚದ ಮುಂದೆ ಭಿಕ್ಷೆ ಬೇಡುತ್ತಿದೆ ಎಂದು ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಬೇಸರ ವ್ಯಕ್ತಪಡಿಸಿದ್ದಾರೆ.
ವೀಡಿಯೋ ಲಿಂಕ್ ಮೂಲಕ ಲಾಹೋರ್ ನ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಅವರು, ಭಾರತವು ಚಂದ್ರನನ್ನು ತಲುಪಿ ಜಿ20 ಶೃಂಗಸಭೆಯನ್ನು ಬಹಳ ಯಶಸ್ವಿಯಾಗಿ ನಡೆಸಿದೆ. ಆದರೆ ಇಂದು ಪಾಕಿಸ್ತಾನದ ಪ್ರಧಾನಿ ಹಣಕ್ಕಾಗಿ ಪ್ರಪಂಚದ ಶ್ರೀಮಂತ ದೇಶಗಳ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ. ಭಾರತ ಮಾಡಿದ ಸಾಧನೆಯನ್ನು ಪಾಕಿಸ್ತಾನಕ್ಕೆ ಸಾಧಿಸಲು ಏಕೆ ಸಾಧ್ಯವಾಗಲಿಲ್ಲ? ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ.
1990 ರಲ್ಲಿ ತಮ್ಮ ಸರ್ಕಾರ ಪ್ರಾರಂಭಿಸಿದ ಆರ್ಥಿಕ ಸುಧಾರಣೆಗಳನ್ನು ಭಾರತ ಅನುಸರಿಸಿದೆ. ಅಟಲ್ ಬಿಹಾರಿ ವಾಜಪೇಯಿ ಅವರು ಭಾರತದ ಪ್ರಧಾನಿಯಾದಾಗ ಭಾರತದ ವಿದೇಶಿ ವಿನಿಮಯ ಕೇವಲ ಒಂದು ಶತಕೋಟಿ ಡಾಲರ್‍ಗಳಷ್ಟಿತ್ತು. ಆದರೆ ಈಗ ಅದು 600 ಶತಕೋಟಿ ಡಾಲರ್‍ಗೆ ಏರಿದೆ. ಭಾರತ ಇಂದು ಎಲ್ಲಿಗೆ ತಲುಪಿದೆ?, ಪಾಕಿಸ್ತಾನ ಭಿಕ್ಷಾಟನೆಯಿಂದ ಎಲ್ಲಿದೆ ಎಂದು ಪ್ರಶ್ನಿಸಿದರು.
ಇದೇ ವೇಳೆ ನಿವೃತ್ತ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ, ಮಾಜಿ ಐಎ ಮುಖ್ಯಸ್ಥ ಫೈಜ್ ಹಮೀದ್ ಮತ್ತು ಮಾಜಿ ಮುಖ್ಯ ನ್ಯಾಯಮೂರ್ತಿ ಮಿಯಾನ್ ಸಾಕಿಬ್ ನಿಸಾರ್ ಅವರು ಪಾಕಿಸ್ತಾನದ ಈ ಸ್ಥಿತಿಗೆ ಕಾರಣ ಎಂದು ನವಾಜ್ ಷರೀಫ್ ದೂರಿದ್ದಾರೆ.
ಮುಂಬರುವ ಚುನಾವಣೆಗಳಲ್ಲಿ ಪಕ್ಷದ ರಾಜಕೀಯ ಪ್ರಚಾರವನ್ನು ಮುನ್ನಡೆಸಲು ಷರೀಫ್ ಮೊದಲ ಬಾರಿಗೆ ಅಕ್ಟೋಬರ್ 21 ರಂದು ದೇಶಕ್ಕೆ ಹಿಂದಿರುಗುವುದಾಗಿ ಘೋಷಿಸಿದ್ದಾರೆ. ಯುಕೆಯಲ್ಲಿ ನಾಲ್ಕು ವರ್ಷಗಳ ಸ್ವಯಂ-ಘೋಷಿತ ಗಡಿಪಾರು ಕೊನೆಗೊಳ್ಳಲಿದೆ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷ ಗೆಲ್ಲಲಿದೆ ಎಂದು ಷರೀಫ್ ಘೋಷಿಸಿದರು.
ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…
ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…
ಓದುಗರ ಪತ್ರ: ಗಾಳಿ... ತಂಗಾಳಿ ! ಚಾಮರಾಜನಗರದ ಶುದ್ಧ ಗಾಳಿಗೆ ದೇಶದಲ್ಲಿ ೪ನೇ ಸ್ಥಾನ ಎಂಥ ಪ್ರಾಣವಾಯು ! ಮಲೆ ಮಾದಪ್ಪ…
ರಾಜ್ಯ ಸರ್ಕಾರ ಮಂಡಿಸಿದ ದ್ವೇಷ ಭಾಷಣ ಮಸೂದೆ ೨೦೨೫ ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ವ್ಯಾಪಕ…
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆಯಲ್ಲಿ ಹಲವು ಮಹತ್ವದ ಮಾಹಿತಿಗಳು ಬಯಲಾಗಿವೆ. ಮುಡಾ ಹಗರಣದ…
ಮೈಸೂರಿನ ಬಹುತೇಕ ಭಾಗಗಳಲ್ಲಿ ಪಾದಚಾರಿ ಮಾರ್ಗಗಳನ್ನು ಅಂಗಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಸಾರ್ವಜನಿಕರು ರಸ್ತೆಯ ಮೇಲೆ ಸಂಚರಿಸುವುದು ಅನಿವಾರ್ಯವಾಗಿದೆ. ನಗರದ…