BREAKING NEWS

ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ದೃಢ : ಎಫ್‌ಎಸ್‌ಎಲ್‌ ವರದಿ ಬಹಿರಂಗ ಪಡಿಸಿದ ಬಿಜೆಪಿ !

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೂಗಿದ್ದು ನಿಜ , FSL ವರದಿಯಲ್ಲಿ ಇದು ಧೃಡವಾಗಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಮಾಹಿತಿ ನೀಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ‘ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ’.

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಸೀರ್ ಸಾಬ್ ಜಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ.ರಾಷ್ಟ್ರ ವಿರೋಧಿ ಧೋರಣೆಯ ಕಾಂಗ್ರೆಸ್ ಹಾಗೂ ಸುಳ್ಳು ಸುದ್ದಿ ಕಾರ್ಖಾನೆಯ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಈಗಲಾದರೂ ತಮ್ಮ ದೇಶದ್ರೋಹದ ಕೃತ್ಯವನ್ನು ಒಪ್ಪಿಕೊಂಡು ವಿಧಾನಸೌಧದ ಎದುರು ಸಾಷ್ಟಾಂಗ ನಮಸ್ಕಾರ ಮಾಡಿ ಕನ್ನಡಿಗರ ಕ್ಷಮೆ ಕೋರಬೇಕು’ ಎಂದು ಬಿಜೆಪಿ ಆಗ್ರಹಿಸಿದೆ.

andolana

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

8 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

9 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

10 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

10 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

11 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

11 hours ago