ಪ್ರಾತಿನಿಧಿಕ ಚಿತ್ರ
6 ಮೇಕೆಗಳನ್ನು ಸಾಯಿಸಿ, ನಾಲ್ಕನ್ನು ಹೊತ್ತೊಯ್ದ ಚಿರತೆಗಳು, ತಾಲ್ಲೂಕಿನಲ್ಲಿ ಮುಂದುವರಿದ ಚಿರತೆ ಹಾವಳಿ
ಪಾಂಡವಪುರ: ಮನೆಯ ಹಿಂದಿನ ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ ಮೇಕೆಗಳ ಮೇಲೆ ದಾಳಿ ಮಾಡಿರುವ ಚಿರತೆಗಳ ಹಿಂಡು ಆರು ಮೇಕೆಗಳನ್ನು ಸಾಯಿಸಿ, ನಾಲ್ಕು ಮೇಕೆಗಳನ್ನು ಹೊತ್ತೊಯ್ದಿರುವ ಘಟನೆ ತಾಲ್ಲೂಕಿನ ಗಿರಿಯಾರಹಳ್ಳಿ ಗ್ರಾಮದಲ್ಲಿ ಭಾನುವಾರ ಮಧ್ಯರಾತ್ರಿ ನಡೆದಿದೆ.
ಗ್ರಾಮದ ನಾಗೇಗೌಡ ಎಂಬವರ ಮೇಕೆಗಳ ಮೇಲೆ ದಾಳಿ ಮಾಡಿರುವ ಚಿರತೆಗಳು ಹೊತ್ತೊಯ್ದಿವೆ. ಮನೆಯ ಹಿಂದಿನ ಕೊಟ್ಟಿಗೆಯಲ್ಲಿ 20 ಮೇಕೆಗಳನ್ನು ಸಾಕಿದ್ದರು. ಭಾನುವಾರ ಮಧ್ಯರಾತ್ರಿ ಕೊಟ್ಟಿಗೆಗೆ ಮರ‍್ನಾಲ್ಕು ಚಿರತೆಗಳು ಒಟ್ಟಿಗೆ ದಾಳಿ ಮಾಡಿ ಆರು ಮೇಕೆಗಳನ್ನು ಸಾಯಿಸಿ, ನಾಲ್ಕು ಮೇಕೆಗಳನ್ನು ಹೊತ್ತೊಯ್ದಿವೆ.
ಸ್ಥಳಕ್ಕೆ ಶಾಸಕ ಸಿ.ಎಸ್. ಪುಟ್ಟರಾಜು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೂಕ್ತ ಕ್ರಮವಹಿಸಿ ಮೇಕೆ ಮಾಲೀಕರಾದ ನಾಗೇಗೌಡ ಅವರಿಗೆ ಸೂಕ್ತ ಪರಿಹಾರ ಸೇರಿದಂತೆ ಗ್ರಾಮದಲ್ಲಿರುವ ಚಿರತೆಗಳನ್ನು ಸೆರೆ ಹಿಡಿಯಲು ಬೋನುಗಳನ್ನು ಅಳವಡಿಸುವಂತೆ ಶಾಸಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಭಯಭೀತರಾದ ಗ್ರಾಮಸ್ಥರು:
ಒಟ್ಟಿಗೆ ಮೂರ‍್ನಾಲ್ಕು ಚಿರತೆ ದಾಳಿ ಮಾಡಿ ಆರು ಮೇಕೆಗಳನ್ನು ಸಾಯಿಸಿರುವುದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹಿಂದೆಂದೂ ಇಂತಹ ಪ್ರಕರಣಗಳು ನಡೆದಿರಲಿಲ್ಲ. ಆದರೆ, ಚಿರತೆಗಳು ಸುಮಾರು 16 ಮೇಕೆಗಳನ್ನು ಸಾಯಿಸಿರುವುದರಿಂದ ಎಷ್ಟು ಚಿರತೆಗಳು ದಾಳಿ ಮಾಡಿರಬಹುದು ಎಂಬುದೇ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…