BREAKING NEWS

ಶಾಲಾ ವಿದ್ಯಾರ್ಥಿನಿಯರಿಗೆ ಸ್ಕರ್ಟ್​​​ ಬದಲು ಪ್ಯಾಂಟ್ ಅಥವಾ ಚೂಡಿದಾರ ಸಮವಸ್ತ್ರ : ಕೆಎಸ್‌ಸಿಪಿಸಿಆರ್‌ ಪ್ರಸ್ತಾವನೆ

ಬೆಂಗಳೂರು : ರಾಜ್ಯದಲ್ಲಿ ನೂತನವಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಲವಾರು ಕ್ಷೇತ್ರಗಳಲ್ಲಿ ಬದಲಾವಣೆಯನ್ನು ತರಲು ಬಯಸಿದೆ. ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದ ಬೆನ್ನಲ್ಲೇ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಗಮನ ಹರಿಸಿದ ಸರ್ಕಾರ ಇದೀಗ ಶಾಲಾ ವಿದ್ಯಾರ್ಥಿಗಳ ಸಮವಸ್ತ್ರದ ಮೇಲೂ ಕಣ್ಣಿಟ್ಟಿದ್ದು, ಸಮವಸ್ತ್ರ ಬದಲಾವಣೆಗೆ ಚಿಂತನೆ ನಡೆಸಿದೆ.

ಭದ್ರತೆ ಮತ್ತು ಹಿತದೃಷ್ಟಿಯಿಂದ​ 1 ರಿಂದ 10 ನೇ ತರಗತಿಯವರೆಗಿನ ವಿದ್ಯಾರ್ಥಿನಿಯರಿಗೆ ಸ್ಕರ್ಟ್​​​ ಬದಲು ಪ್ಯಾಂಟ್ ಅಥವಾ ಚೂಡಿದಾರ ಸಮವಸ್ತ್ರ ಕಡ್ಡಾಯಗೊಳಿಸಿ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸಿದೆ. ಸಾಧ್ಯವಾದರೆ ಶಾಲೆಗಳಲ್ಲಿ ಸೂಚಿಸಲಾದ ಸಮವಸ್ತ್ರದ ನಿಯಮಗಳು ಮತ್ತು ನಿಬಂಧನೆಗಳನ್ನು ಮರುಪರಿಶೀಲಿಸಿ ಮತ್ತು ಬಾಲಕಿಯರ ಒಟ್ಟಾರೆ ಅಭಿವೃದ್ಧಿಗಾಗಿ ಸಮವಸ್ತ್ರದ ನಿಯಮಗಳಲ್ಲಿ ಮಾರ್ಪಾಡು ಮಾಡಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೇಳಿದೆ.

ಇದರೊಂದಿಗೆ ಸ್ಕರ್ಟ್ ಧರಿಸುವ ಹುಡುಗಿಯರು ಎದುರಿಸುತ್ತಿರುವ ಅನಾನುಕೂಲತೆಗಳ ಕುರಿತು ಆಯೋಗಕ್ಕೆ ಪತ್ರ ಬರೆದ ನಂತರ ಶಿಫಾರಸು ಮಾಡಲಾಗಿದೆ. ಪತ್ರದಲ್ಲಿ ಹುಡುಗಿಯರು ನಾಚಿಕೆ ಸ್ವಭಾವದರಾಗಿದ್ದು, ಸಾಮಾನ್ಯವಾಗಿ ಸ್ಕರ್ಟ್ ಗಳನ್ನು ಧರಿಸುವುದರಿಂದ ಮುಜುಗರ ವ್ಯಕ್ತಪಡಿಸುತ್ತಾರೆ. ಪ್ರಯಾಣಿಸುವಾಗ, ಜನನಿಬಿಡ ಪ್ರದೇಶಗಳಲ್ಲಿ ತಿರುಗಾಡುವಾಗ, ಸೈಕ್ಲಿಂಗ್ ಅಥವಾ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವಾಗ ಸ್ಕರ್ಟ್ ಧರಿಸುವುದು ಒಂದು ಅಡಚಣೆಯಾಗಿದೆ. ಇನ್ನು ಪತ್ರದಲ್ಲಿ ಲೈಂಗಿಕ ಕಿರುಕುಳದ ವರದಿಗಳೂ ಇವೆಯೆಂದು ಉಲ್ಲೇಖಿಸಿ, ಅವರ ಸಮವಸ್ತ್ರವನ್ನು ಚೂಡಿದಾರ್ ಅಥವಾ ಪ್ಯಾಂಟ್ ಗೆ ಬದಲಾಯಿಸುವಂತೆ ಸೂಚಿಸಿದೆ.

ಅಂದಹಾಗೆ ಕರ್ನಾಟಕ ಶಿಕ್ಷಣ ಕಾಯ್ದೆ,1983 ರ ಪ್ರಕಾರ, ಶೈಕ್ಷಣಿಕ ಸಂಸ್ಥೆಗಳು ತಮ್ಮ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ಶಿಫಾರಸು ಮಾಡಲು ಸ್ವತಂತ್ರವಾಗಿವೆ. ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಗಂಡುಮಕ್ಕಳಿಗೆ ಶರ್ಟ್, ಚಡ್ಡಿ ಅಥವಾ ಪ್ಯಾಂಟ್‌ಗಳನ್ನು ಸೂಚಿಸಿದರೆ, ಹೆಚ್ಚಿನ ಖಾಸಗಿ ಶಾಲಾ ಆಡಳಿತಗಳು ಹುಡುಗಿಯರಿಗೆ ಸ್ಕರ್ಟ್‌ಗಳನ್ನು ಸೂಚಿಸಿದೆ. ಕೇಂದ್ರೀಯ ವಿದ್ಯಾಲಯ ಶಾಲೆಗಳಲ್ಲಿ ಚೂಡಿದಾರಗಳನ್ನು ಧರಿಸುವುದು ಕಡ್ಡಾಯವಾಗಿದೆ. ಎಲ್ಲಾ ಸರಕಾರಿ, ಅನುದಾನಿತ ಮತ್ತು ವಿದ್ಯಾರ್ಥಿನಿಯರಿಗೆ ಸ್ಕರ್ಟ್ ಧರಿಸುವುದು ಸಮವಸ್ತ್ರದ ಒಂದು ಭಾಗವಾಗಿದೆ. ಆದರೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮೇಲಿನ ಸಮಸ್ಯೆಗಳನ್ನು ಉಲ್ಲೇಖಿಸಿ ಪತ್ರ ಬರೆದಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಕೆಎಸ್‌ಸಿಪಿಸಿಆರ್‌ ಅಧ್ಯಕ್ಷ ಕೆ.ನಾಗಣ್ಣಗೌಡ ಅವರು “ಸ್ಕರ್ಟ್​​​​ಗಿಂತ ಪ್ಯಾಂಟ್ ಅಥವಾ ಚೂಡಿದಾರ ಧರಿಸುವುದು ಉತ್ತಮ ಎಂಬ ಅಭಿಪ್ರಾಯವನ್ನು ಹೆಚ್ಚಿನ ವಿದ್ಯಾರ್ಥಿನಿಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದ್ದರಿಂದ, ನಾವು ಡಿಎಸ್‌ಇಎಲ್‌ಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದೇವೆ ಮತ್ತು ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ” ಎಂದು ಹೇಳಿದ್ದಾರೆ.

lokesh

Recent Posts

ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

1 hour ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

1 hour ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

3 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

3 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

3 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

3 hours ago