ಮೈಸೂರು : ವಿಧಾನಸಭಾ ಚುನಾವಣೆ ಹಿನ್ನೆಲೆ ಜನರಿಗೆ ಅಭಯ ನೀಡಲು ಏಪ್ರಿಲ್ ಮೊದಲ ವಾರದಲ್ಲಿ ಪ್ಯಾರಾ ಮಿಲಿಟರಿ ಪಡೆ ನಗರಕ್ಕೆ ಆಗಮಿಸಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ತಿಳಿಸಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನ ಜಿಲ್ಲೆಯಲ್ಲಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳು ಸಹ ಇವೆ. ಇಂತಹ ಪ್ರದೇಶಗಳಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಹಾಗೂ ಜನರಿಗೆ ಅಭಯ ನೀಡಲು, ಪ್ಯಾರಾ ಮಿಲಿಟರಿ ಪಡೆ ಕರೆಸಲಾಗುತ್ತಿದೆ ಎಂದರು.ಮೈಸೂರು ಜಿಲ್ಲೆಯ ಯಾವ ಏರಿಯಾಗಳಲ್ಲಿ ಪ್ಯಾರಾ ಮಿಲಿಟರಿ ಪಡೆ ಪಥಸಂಚಲನ ನಡೆಸಬೇಕೆಂದು ತೀರ್ಮಾನ ಮಾಡಲಾಗಿದೆ. ಅಲ್ಲದೇ, ಪಾರದರ್ಶಕ ಚುನಾವಣೆಗೆ ಪೊಲೀಸ್ ಇಲಾಖೆಯಿಂದ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿದ್ದೇವೆ ಎಂದು ಹೇಳಿದರು.
ಇದುವರೆಗೆ 46 ಲಕ್ಷ ನಗದು ವಶ : ಜಿಲ್ಲೆಯ ಚೆಕ್‌ಪೋಸ್ಟ್‌ಗಳಲ್ಲಿ ಇದುವರೆಗೆ ಒಟ್ಟು 46 ಲಕ್ಷ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ. ಕೆಲವು ಸಮಾಜ ಘಾತುಕ ವ್ಯಕ್ತಿಗಳನ್ನು ಗಡಿಪಾರು ಮಾಡಲಾಗಿದೆ. ಚುನಾವಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ ಎಂದರು. ಮೈಸೂರು ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ಸಕಲ ಸಿದ್ಧತೆ ನಡೆದಿದೆ. ಮೈಸೂರು ಜಿಲ್ಲೆಯ 8 ಕಡೆ ಚೆಕ್ಪೋಸ್ಟ್ ತೆರೆಯಲಾಗಿದೆ. ಬಾವಲಿ ಚೆಕ್ಪೋಸ್ಟ್ ಮೂಲಕ ಹೊರ ರಾಜ್ಯದಿಂದ ಹೆಚ್ಚಿನ ಜನರು ಆಗಮಿಸುತ್ತಾರೆ. ಅಲ್ಲದೇ, ಕೇರಳ ಗಡಿಯಲ್ಲಿ ನಕ್ಸಲ್ ಚಟುವಟಿಕೆ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ಹೇಳಿದರು.
ಕೇರಳ ಗಡಿಗೆ ಹೊಂದಿಕೊಂಡಂತೆ ಎಂಟು ಬೂತ್ಗಳು ಬರಲಿದ್ದು ಆ ಭಾಗದಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ. ಇನ್ನುಳಿದಂತೆ ಇತರೆ ಜಿಲ್ಲೆಗಳಾದ ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಿಂದಲೂ ಮೈಸೂರು ಜಿಲ್ಲೆಗೆ ಹೆಚ್ಚಿನ ಜನರು ಆಗಮಿಸುತ್ತಾರೆ. ಎಲ್ಲಾ ಚೆಕ್‌ಪೋಸ್ಟ್‌ಗಳಲ್ಲಿ ಅಧಿಕಾರಿಗಳು ನಿಗಾವಹಿಸಿದ್ದಾರೆ ಎಂದರು.
ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…
ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…
‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…
ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…