ಮೈಸೂರು: ಸಂಸತ್ ಭವನಕ್ಕೆ ನುಗ್ಗಿ ಬಣ್ಣದ ಹೊಗೆ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರತಾ ಅಧಿಕಾರಿಗಳು ನಾಲ್ವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮೈಸೂರಿನ ಮನೋರಂಜನ್, ಸಾಗರ್ ಶರ್ಮಾ, ಅಮೋಲ್ ಶಿಂಧೆ, ನೀಲಮ್ ಸೇರಿದಂತೆ ಒಟ್ಟು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಇಬ್ಬರು ಯುವಕರಲ್ಲಿ ಇಬ್ಬರು ಕರ್ನಾಟಕದವರಾಗಿದ್ದು, ಈ ಪೈಕಿ ಮನೋರಂಜನ್ ಎಂಬಾತ ಮೈಸೂರು ಮೂಲದ ಇಂಜಿನಿಯರ್ ಪದವೀಧರನಾಗಿದ್ದು, ಇನ್ನೊಬ್ಬ ಸಾಗರ್ ಶರ್ಮಾ ಎಂದು ಗುರುತಿಸಲಾಗಿದೆ. ಈ ಇಬ್ಬರೂ ಮೈಸೂರು ಹಾಗೂ ಕೊಡಗು ಸಂಸದ ಪ್ರತಾಪ್ ಸಿಂಹ ಅವರ ಕಚೇರಿಯಲ್ಲಿ ವಿಸಿಟರ್ಸ್ ಪಾಸ್ ಪಡೆದು ಸಂಸತ್ ಪ್ರವೇಶಿಸಿದ್ದರು.
ಹೀಗಾಗಿ ಇದೀಗ ಪ್ರತಾಪ್ ಸಿಂಹ ವಿರುದ್ಧ ಸಾರ್ವಜನಿಕರು ಹಾಗೂ ಪ್ರತಿಪಕ್ಷಗಳ ಕಾರ್ಯಕರ್ತರು ಕಿಡಿಕಾರುತ್ತಿದ್ದಾರೆ. ಮೈಸೂರು ನಗರ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರು ನಗರದ ಜಲದರ್ಶಿನಿ ಅತಿಥಿ ಗೃಹದ ಪ್ರತಾಪ್ ಸಿಂಹ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಪ್ರತಾಪ್ ಸಿಂಹ ಅವರೇ ಈ ಘಟನೆಗೆ ನೇರ ಹೊಣೆ ಎಂದು ಕಿಡಿಕಾರಿ ಧಿಕ್ಕಾರ ಕೂಗಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸಪಟ್ಟಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…