ನವದೆಹಲಿ : ಸಂಸತ್ ಭದ್ರತಾ ವೈಫಲ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರನೇ ಆರೋಪಿ ಮಹೇಶ್ ಕುಮಾವತ್ ಎಂಬಾತನನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಮಹೇಶ್ ಕುಮಾವತ್ ರಾಜಸ್ಥಾನದ ನಾಗೋರ್ ಜಿಲ್ಲೆಯವನಾಗಿದ್ದು, ಸಂಸತ್‌ನಲ್ಲಿ ಭದ್ರತಾ ವೈಫಲ್ಯವಾದ ದಿನದಂದು ಈತ ಕೂಡ ನವದೆಹಲಿಗೆ ಆಗಮಿಸಿದ್ದು, ಈತ ಕೂಡ ಈ ಸಂಚಿನ ಭಾಗವಾಗಿದ್ದನೆಂದು ದೃಢಪಟ್ಟ ನಂತರ ಆತನ ಬಂಧಿಸಿದ್ದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ.
ಸಂಚಿನ ಪ್ರಮುಖ ರೂವಾರಿಯಾಗಿದ್ದ ಲಲಿತ್ ಝಾ ಘಟನೆ ನಡೆದ ಬೆನ್ನಲ್ಲೇ ರಾಜಸ್ಥಾನದಲ್ಲಿ ಮಹೇಶ್ ಇರುವ ಸ್ಥಳದಲ್ಲಿ ಅಡಗಿ ಕುಳಿತಿದ್ದ. ಈ ಸಂಚಿನ ಭಾಗವಾಗಿದ್ದ ಇತರ ನಾಲ್ಕು ಮಂದಿಯ ಮೊಬೈಲ್ ಫೋನ್ ನಾಶಪಡಿಸುವಲ್ಲಿ ಮಹೇಶ್ ಕೂಡ ಲಲಿತ್‌ಗೆ ಜೊತೆಯಾಗಿದ್ದ. ಡಿಸೆಂಬರ್ 13ರಂದು ಸಂಸತ್ ಕಟ್ಟಡದ ಹೊರಗೆ ಪ್ರತಿಭಟಿಸಿದ್ದ ಇಬ್ಬರಲ್ಲಿ ಒಬ್ಬಳಾಗಿದ್ದ ನೀಲಂ ಜೊತೆಗೆ ಮಹೇಶ್ ನಿರಂತರ ಸಂಪರ್ಕದಲ್ಲಿದ್ದನೆಂದು ತಿಳಿದು ಬಂದಿದೆ.
ಲಲಿತ್ ಮತ್ತು ಮಹೇಶ್ ಇಬ್ಬರೂ ಗುರುವಾರವೇ ದಿಲ್ಲಿಯ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದರು. ಶುಕ್ರವಾರ ಲಲಿತ್ ಬಂಧನವಾಗಿತ್ತು.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…