ನವದೆಹಲಿ: ಸಂಸತ್ ಕಟ್ಟಡ ಸಂಕೀರ್ಣದ ಭದ್ರತೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಗೆ ಹಸ್ತಾಂತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.
ಕೇಂದ್ರ ಗೃಹ ಸಚಿವಾಲಯ ಸಂಸತ್ತಿನ ಕಟ್ಟಡ ಸಂಕೀರ್ಣದ ಸಮೀಕ್ಷೆಗೆ ಬುಧವಾರ ನಿರ್ದೇಶನ ನೀಡಿದ್ದು, ಸಿಐಎಸ್ಎಫ್ ಭದ್ರತೆ ಮತ್ತು ಅಗ್ನಿಶಾಮಕ ದಳವನ್ನು ಸಮಗ್ರ ಮಾದರಿಯಲ್ಲಿ ನಿಯಮಿತವಾಗಿ ನಿಯೋಜಿಸಲಾಗುವುದು ಎಂದು ಮೂಲಗಳು ತಿಳಿಸಿವೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.
ಸಿಐಎಸ್‌ಎಫ್ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಆಗಿದ್ದು, ಇದು ಪ್ರಸ್ತುತ ದೆಹಲಿಯಲ್ಲಿನ ಅನೇಕ ಕೇಂದ್ರ ಸರ್ಕಾರದ ಸಚಿವಾಲಯದ ಕಟ್ಟಡಗಳುಸ ಪರಮಾಣು ಮತ್ತು ಏರೋಸ್ಪೇಸ್ ಸ್ಥಳಗಳು, ವಿಮಾನ ನಿಲ್ದಾಣಗಳು ಮತ್ತು ದೆಹಲಿ ಮೆಟ್ರೋ ನಿಲ್ದಾಣದಲ್ಲಿ ಭದ್ರತೆ ಉಸ್ತುವಾರಿ ನೋಡಿಕೊಳ್ಳುತ್ತಿದೆ.
ಸಿಐಎಸ್ಎಫ್ನ ಸರ್ಕಾರಿ ಕಟ್ಟಡ ಭದ್ರತಾ (ಜಿಬಿಎಸ್) ಘಟಕದಿಂದ ಪಡೆದ ತಜ್ಞರು, ಕೇಂದ್ರ ಸರ್ಕಾರದ ಸಚಿವಾಲಯಗಳು ಮತ್ತು ಅಗ್ನಿ ಶಾಮಕ ಅಧಿಕಾರಿಗಳು ಮತ್ತು ಪ್ರಸ್ತುತ ಸಂಸತ್ತಿನ ಭದ್ರತಾ ತಂಡದ ಅಧಿಕಾರಿಗಳೊಂದಿಗೆ ಈ ವಾರದ ಕೊನೆಯಲ್ಲಿ ಸಮೀಕ್ಷೆ ಕೈಗೊಳ್ಳಲಿದ್ದಾರೆ.
ಹೊಸ ಮತ್ತು ಹಳೆಯ ಸಂಸತ್ತಿನ ಸಂಕೀರ್ಣ ಮತ್ತು ಅದರ ಸುತ್ತಮುತ್ತಲಿನ ಕಟ್ಟಡಗಳನ್ನು ಸಿಐಎಸ್ಎಫ್ನ ಸಮಗ್ರ ಭದ್ರತೆ ಅಡಿಯಲ್ಲಿ ತರಲಾಗುತ್ತಿದೆ.ಇದು ಸಂಸತ್ತಿನ ಭದ್ರತಾ ಸೇವೆ, ದೆಹಲಿ ಪೊಲೀಸ್ ಮತ್ತು ಸಿಐಎಸ್ ಎಫ್ ನ ಪಾರ್ಲಿಮೆಂಟ್ ಡ್ಯೂಟಿ ಗ್ರೂಪ್ ನ್ನು ಒಳಗೊಂಡಿರುತ್ತದೆ ಎಂದು ಮೂಲಗಳು ತಿಳಿಸಿವೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…