BREAKING NEWS

ಸಿಐಎಸ್‌ಎಫ್‌ʼಗೆʼ ಸಂಸತ್‌ನ ಭದ್ರತಾ ಜವಬ್ಧಾರಿ

ನವದೆಹಲಿ: ಸಂಸತ್ ಕಟ್ಟಡ ಸಂಕೀರ್ಣದ ಭದ್ರತೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಗೆ ಹಸ್ತಾಂತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.

ಕೇಂದ್ರ ಗೃಹ ಸಚಿವಾಲಯ ಸಂಸತ್ತಿನ ಕಟ್ಟಡ ಸಂಕೀರ್ಣದ ಸಮೀಕ್ಷೆಗೆ ಬುಧವಾರ ನಿರ್ದೇಶನ ನೀಡಿದ್ದು, ಸಿಐಎಸ್ಎಫ್ ಭದ್ರತೆ ಮತ್ತು ಅಗ್ನಿಶಾಮಕ ದಳವನ್ನು ಸಮಗ್ರ ಮಾದರಿಯಲ್ಲಿ ನಿಯಮಿತವಾಗಿ ನಿಯೋಜಿಸಲಾಗುವುದು ಎಂದು ಮೂಲಗಳು ತಿಳಿಸಿವೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

ಸಿಐಎಸ್‌ಎಫ್‌ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಆಗಿದ್ದು, ಇದು ಪ್ರಸ್ತುತ ದೆಹಲಿಯಲ್ಲಿನ ಅನೇಕ ಕೇಂದ್ರ ಸರ್ಕಾರದ ಸಚಿವಾಲಯದ ಕಟ್ಟಡಗಳುಸ ಪರಮಾಣು ಮತ್ತು ಏರೋಸ್ಪೇಸ್ ಸ್ಥಳಗಳು, ವಿಮಾನ ನಿಲ್ದಾಣಗಳು ಮತ್ತು ದೆಹಲಿ ಮೆಟ್ರೋ ನಿಲ್ದಾಣದಲ್ಲಿ ಭದ್ರತೆ ಉಸ್ತುವಾರಿ ನೋಡಿಕೊಳ್ಳುತ್ತಿದೆ.

ಸಿಐಎಸ್ಎಫ್ನ ಸರ್ಕಾರಿ ಕಟ್ಟಡ ಭದ್ರತಾ (ಜಿಬಿಎಸ್) ಘಟಕದಿಂದ ಪಡೆದ ತಜ್ಞರು, ಕೇಂದ್ರ ಸರ್ಕಾರದ ಸಚಿವಾಲಯಗಳು ಮತ್ತು ಅಗ್ನಿ ಶಾಮಕ ಅಧಿಕಾರಿಗಳು ಮತ್ತು ಪ್ರಸ್ತುತ ಸಂಸತ್ತಿನ ಭದ್ರತಾ ತಂಡದ ಅಧಿಕಾರಿಗಳೊಂದಿಗೆ ಈ ವಾರದ ಕೊನೆಯಲ್ಲಿ ಸಮೀಕ್ಷೆ ಕೈಗೊಳ್ಳಲಿದ್ದಾರೆ.

ಹೊಸ ಮತ್ತು ಹಳೆಯ ಸಂಸತ್ತಿನ ಸಂಕೀರ್ಣ ಮತ್ತು ಅದರ ಸುತ್ತಮುತ್ತಲಿನ ಕಟ್ಟಡಗಳನ್ನು ಸಿಐಎಸ್ಎಫ್ನ ಸಮಗ್ರ ಭದ್ರತೆ ಅಡಿಯಲ್ಲಿ ತರಲಾಗುತ್ತಿದೆ.ಇದು ಸಂಸತ್ತಿನ ಭದ್ರತಾ ಸೇವೆ, ದೆಹಲಿ ಪೊಲೀಸ್ ಮತ್ತು ಸಿಐಎಸ್ ಎಫ್ ನ ಪಾರ್ಲಿಮೆಂಟ್ ಡ್ಯೂಟಿ ಗ್ರೂಪ್ ನ್ನು ಒಳಗೊಂಡಿರುತ್ತದೆ ಎಂದು ಮೂಲಗಳು ತಿಳಿಸಿವೆ.

andolanait

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

3 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

9 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

9 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

10 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

11 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

17 hours ago