ಬೆಂಗಳೂರು : ಕ್ರಿಮಿನಲ್ ಕೇಸ್‍ಗಳಲ್ಲಿ ವ್ಯಕ್ತಿಯೊಬ್ಬ ಶಿಕ್ಷೆಗೆ ಗುರಿಯಾದ ಬಳಿಕ ಸಲ್ಲಿಕೆಯಾಗಿರುವ ಮೇಲ್ಮನವಿ ವಿಚಾರಣಾ ಹಂತದಲ್ಲಿದೆ ಎಂಬ ಕಾರಣಕ್ಕೆ ಪೆರೋಲ್ ಮನವಿ ತಿರಸ್ಕರಿಸುವಂತಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಬೆಳಗಾವಿಯ ಅರ್ಜುನ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ. ಅಲ್ಲದೆ, ಮುಂದಿನ 15 ದಿನಗಳಲ್ಲಿ ಕಾರಾಗೃಹದ ಅಧಿಕಾರಿಗಳು ಪೆರೋಲ್ ಅರ್ಜಿಯನ್ನು ಪರಿಗಣಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದೆ.
ಜೊತೆಗೆ, ಈ ಆದೇಶವನ್ನು ಎಡಿಜಿಪಿ(ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ)ಗೆ ತಲುಪಿಸಬೇಕು, ಅವರು ಎಲ್ಲ ಕಾರಾಗೃಹಗಳಿಗೆ ಈ ಬಗ್ಗೆ ಮಾಹಿತಿ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದರೆ, ಆಗ ಪೆರೋಲ್ ಅರ್ಜಿಯನ್ನು ಪರಿಗಣಿಸಬೇಕಾಗುತ್ತದೆ.
ಆಗಲೂ ಸಹ ಒಂದು ವೇಳೆ ಪೆರೋಲ್ ಅರ್ಜಿ ತಿರಸ್ಕಾರವಾಗಿದ್ದರೂ ಸಹ ಪೆರೋಲ್ ಅರ್ಜಿಯನ್ನು ಪರಿಶೀಲಿಸಿ ಯಾವ ಆಧಾರದಲ್ಲಿ ಮನವಿ ಸಲ್ಲಿಸಲಾಗಿದೆ ಎಂಬುದನ್ನು ಆಧರಿಸಿ ನೈಜ ಕಾರಣವಿದ್ದರೆ ಮಾತ್ರ ತಿರಸ್ಕರಿಸಬೇಕೇ ಹೊರತು ಇಲ್ಲವಾದರೆ ಅರ್ಜಿ ಪುರಸ್ಕರಿಸಬೇಕು ಎಂದು ನ್ಯಾಯಪೀಠ ತಿಳಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಕಾನೂನು ರೀತಿಯಲ್ಲಿ ಅರ್ಜಿದಾರರು ತಮಗೆ ಅಧೀನ ನ್ಯಾಯಾಲಯ ಶಿಕ್ಷೆಗೆ ಒಳಪಡಿಸಿರುವುದನ್ನು ಪ್ರಶ್ನಿಸಿದ್ದಾರೆ. ಆದರೆ ಮೇಲ್ಮನವಿ ಬಾಕಿ ಇದೆ ಎಂಬ ಕಾರಣ ನೀಡಿ ಪೆರೋಲ್ ನಿರಾಕರಿಸಲಾಗಿದೆ. ಹೀಗಾಗಿ, ನ್ಯಾಯಾಲಯ ಪೆರೋಲ್ ತಿರಸ್ಕರಿಸಿರುವ ಹಿಂಬರಹ ರದ್ದುಗೊಳಿಸಿ, ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದ್ದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಕಾನೂನು ಪ್ರಕಾರ ಪೆರೋಲ್ ಅರ್ಜಿ ಪರಿಗಣಿಸುವಂತೆ ನಿರ್ದೇಶನ ನೀಡಿದೆ.
ಪ್ರಕರಣವೇನು?: ಅರ್ಜಿದಾರರು 2018ರ ಎಪ್ರಿಲ್ 6ರಿಂದ ಜೈಲಿನಲ್ಲಿದ್ದಾರೆ ಮತ್ತು ಅವರು ಹಲವು ಕಾರಣಗಳನ್ನು ನೀಡಿ 2022ರ ಡಿಸೆಂಬರ್ 7ರಂದು ಪೆರೋಲ್ ಅರ್ಜಿ ಸಲ್ಲಿಸಿದ್ದರು. ಆದರೆ, ಕ್ರಿಮಿನಲ್ ಮೇಲ್ಮನವಿ ಹಾಗೂ ಜಾಮೀನು ಅರ್ಜಿ ಬಾಕಿ ಇದೆ ಎಂಬ ಕಾರಣ ನೀಡಿದ ಜೈಲಿನ ಅಧೀಕ್ಷಕರು ಪೆರೋಲ್ ಅರ್ಜಿಯನ್ನು ತಿರಸ್ಕರಿಸಿದ್ದರು. ಅದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು.
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…
ನಾಗಮಂಗಲ : ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು…