Mysore
28
few clouds

Social Media

ಶುಕ್ರವಾರ, 27 ಮಾರ್ಚ್ 2026
Light
Dark

ಚಲಿಸುತ್ತಿದ್ದ ರೈಲಿನಲ್ಲಿ ಪ್ರಜ್ಞೆ ತಪ್ಪಿದ ಪ್ರಯಾಣಿಕರು : ಬಿಮ್ಸ್ ಆಸ್ಪತ್ರೆಗೆ ದಾಖಲು

ಬೆಳಗಾವಿ : ಚಲಿಸುತ್ತಿದ್ದ ರೈಲಿನಲ್ಲಿ ಅನುಮಾನಾಸ್ಪದವಾಗಿ ಪ್ರಯಾಣಿಕರು ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ. ಗೋವಾದಿಂದ ದೆಹಲಿಗೆ ತೆರಳುತ್ತಿದ್ದ ನಿಜಾಮುದ್ದೀನ್ ಎಕ್ಸ್​ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 8 ಜನರು ಪ್ರಜ್ಞೆ ತಪ್ಪಿ ಅಸ್ವಸ್ಥಗೊಂಡಿದ್ದು ಬೆಳಗಾವಿ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಈ ವಿಚಾರವನ್ನು ಪೊಲೀಸರ ಗಮನಕ್ಕೆ ತಂದು ಪ್ರಜ್ಞೆತಪ್ಪಿದ್ದ 8 ಪ್ರಯಾಣಿಕರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಗಂಭೀರವಾಗಿ ಅಸ್ವಸ್ಥಗೊಂಡ ನಾಲ್ವರು ಪ್ರಯಾಣಿಕರಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಗೋವಾದಿಂದ ದೆಹಲಿಗೆ‌ ಹೋಗುವ ನಿಜಾಮುದ್ದೀನ್ ಎಕ್ಸ್​ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 8 ಮಂದಿ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಅಸ್ವಸ್ಥಗೊಂಡಿದ್ದಾರೆ. ಇದರಿಂದ ಗಾಬರಿಗೊಂಡ ಸಹ ಪ್ರಯಾಣಿಕರು ಬೆಳಗಾವಿ ರೈಲು ನಿಲ್ದಾಣ ಬರುತ್ತಿದ್ದಂತೆ ಈ ಘಟನೆಯನ್ನು ಪೊಲೀಸರ ಗಮನಕ್ಕೆ ತಂದಿದ್ದಾರೆ. ಬಳಿಕ ಕೂಡಲೇ ಪ್ರಜ್ಞೆ ತಪ್ಪಿದ 8 ಜನ ಪ್ರಯಾಣಿಕರನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಗಂಭೀರವಾಗಿ ಅಸ್ವಸ್ಥತಗೊಂಡ ನಾಲ್ವರು ಪ್ರಯಾಣಿಕರಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಸಹ ಪ್ರಯಾಣಿಕರು ನೀಡಿದ ಆಹಾರ ಸೇವಿಸಿ ಪ್ರಜ್ಞೆ ತಪ್ಪಿದ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪ್ರಕರಣ ಬಗ್ಗೆ ಬೆಳಗಾವಿ ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!