ಬೆಳಗಾವಿ : ಚಲಿಸುತ್ತಿದ್ದ ರೈಲಿನಲ್ಲಿ ಅನುಮಾನಾಸ್ಪದವಾಗಿ ಪ್ರಯಾಣಿಕರು ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ. ಗೋವಾದಿಂದ ದೆಹಲಿಗೆ ತೆರಳುತ್ತಿದ್ದ ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 8 ಜನರು ಪ್ರಜ್ಞೆ ತಪ್ಪಿ ಅಸ್ವಸ್ಥಗೊಂಡಿದ್ದು ಬೆಳಗಾವಿ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಈ ವಿಚಾರವನ್ನು ಪೊಲೀಸರ ಗಮನಕ್ಕೆ ತಂದು ಪ್ರಜ್ಞೆತಪ್ಪಿದ್ದ 8 ಪ್ರಯಾಣಿಕರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಗಂಭೀರವಾಗಿ ಅಸ್ವಸ್ಥಗೊಂಡ ನಾಲ್ವರು ಪ್ರಯಾಣಿಕರಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಗೋವಾದಿಂದ ದೆಹಲಿಗೆ ಹೋಗುವ ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 8 ಮಂದಿ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಅಸ್ವಸ್ಥಗೊಂಡಿದ್ದಾರೆ. ಇದರಿಂದ ಗಾಬರಿಗೊಂಡ ಸಹ ಪ್ರಯಾಣಿಕರು ಬೆಳಗಾವಿ ರೈಲು ನಿಲ್ದಾಣ ಬರುತ್ತಿದ್ದಂತೆ ಈ ಘಟನೆಯನ್ನು ಪೊಲೀಸರ ಗಮನಕ್ಕೆ ತಂದಿದ್ದಾರೆ. ಬಳಿಕ ಕೂಡಲೇ ಪ್ರಜ್ಞೆ ತಪ್ಪಿದ 8 ಜನ ಪ್ರಯಾಣಿಕರನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಗಂಭೀರವಾಗಿ ಅಸ್ವಸ್ಥತಗೊಂಡ ನಾಲ್ವರು ಪ್ರಯಾಣಿಕರಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಸಹ ಪ್ರಯಾಣಿಕರು ನೀಡಿದ ಆಹಾರ ಸೇವಿಸಿ ಪ್ರಜ್ಞೆ ತಪ್ಪಿದ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪ್ರಕರಣ ಬಗ್ಗೆ ಬೆಳಗಾವಿ ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…