ಮಂಡ್ಯ : ಮಂತ್ರಿ ಸ್ಥಾನ ಸ್ವೀಕಾರ ಮಾಡಿದಾಗಿನಿಂದ ಕೃಷಿ ಸಚಿವ ಚಲುವರಾಯಸ್ವಾಮಿ ಒಂದಲ್ಲ ಒಂದು ವಿಚಾರಕ್ಕೆ ರಾಜಕೀಯ ದೊಡ್ಡಮಟ್ಟದಲ್ಲಿ ಸುದ್ದಿಯಾಗುತ್ತಿದ್ದಾರೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕಾಂಗ್ರೆಸ್ ಪೇಸಿಎಂ ಅಭಿಯಾನ ಮಾಡಿ ದೊಡ್ಡ ಮಟ್ಟದ ಏಟನ್ನು ನೀಡಿತ್ತು. ಇದೀಗ ಚಲುವರಾಯಸ್ವಾಮಿಯ ಮೂಲಕ ಕಾಂಗ್ರೆಸ್‍ಗೆ ಪೆಟ್ಟು ಕೊಡಲು ಬಿಜೆಪಿ ಅಂತಹದ್ದೇ ಒಂದು ಅಭಿಯಾನಕ್ಕೆ ಮುಂದಾಗಿದೆ.
ನಾಗಮಂಗಲ ಶಾಸಕ ಹಾಗೂ ಕೃಷಿ ಸಚಿವ ಸಿ.ಎಸ್.ಚಲುವರಾಯಸ್ವಾಮಿ ವಿರುದ್ಧ ಕೇಳಿಬಂದಿದ್ದ ಲಂಚ ಆರೋಪ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕಾಂಗ್ರೆಸ್ ಪೇಸಿಎಂ ಅಭಿಯಾನ ಮಾಡಿ ದೊಡ್ಡ ಮಟ್ಟದ ಏಟನ್ನು ನೀಡಿತ್ತು. ಇದೀಗ ಚಲುವರಾಯಸ್ವಾಮಿಯ ಮೂಲಕ ಕಾಂಗ್ರೆಸ್‍ಗೆ ಪೆಟ್ಟು ಕೊಡಲು ಬಿಜೆಪಿ ಪೇಸಿಎಸ್ ಅಭಿಯಾನಕ್ಕೆ ಮುಂದಾಗಿದೆ.
ಕಂಡಕ್ಟರ್ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣ ಕ್ಲೀನ್‍ಚಿಟ್ ಬೆನ್ನಲ್ಲೇ ಕೃಷಿ ಇಲಾಖೆಯ ಲಂಚಕ್ಕೆ ಒತ್ತಡ ಹಾಕಿರುವ ಆರೋಪ ಚಲುವರಾಯಸ್ವಾಮಿ ಬೆನ್ನಿಗೆ ಬಿದ್ದಿದೆ. ಕಳೆದ ತಿಂಗಳು ಕಂಡಕ್ಟರ್ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣದ ಸಿಐಡಿ ತನಿಖೆಯನ್ನು ಚಲುವರಾಯಸ್ವಾಮಿ ಎದುರಿಸಿದ್ದರು. ಆ ಪ್ರಕರಣದಲ್ಲಿ ಚಲುವರಾಯಸ್ವಾಮಿಗೆ ಕ್ಲೀನ್‍ಚೀಟ್ ಸಿಕ್ಕಿತ್ತು. ಈ ಬೆನ್ನಲ್ಲೇ ಕೃಷಿ ಇಲಾಖೆಯ ಅಧಿಕಾರಿಗಳ ಬಳಿ ಲಂಚ ಬೇಡಿಕೆ ಆರೋಪದಡಿ ಸಿಐಡಿ ತನಿಖೆಯನ್ನು ಎದುರಿಸುತ್ತಿದ್ದಾರೆ.
ಇನ್ನೊಂದೆಡೆ ಬಿಜೆಪಿ ಪೇಸಿಎಸ್ ಎಂಬ ಅಭಿಯಾನವನ್ನು ಸಾಮಾಜಿಕ ಜಾಲತಾಣದಲ್ಲಿ ಮಾಡುತ್ತಿದೆ. ಈ ಹಿಂದೆ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕಾಂಗ್ರೆಸ್ ಪೇಸಿಎಂ ಎಂಬ ಅಭಿಯಾನ ಮಾಡಿ ಬಿಜೆಪಿಗೆ ತೀವ್ರ ಮುಜುಗರ ತಂದಿತ್ತು. ಇದ್ದನ್ನೇ ಇದೀಗ ಅಸ್ತ್ರವನ್ನು ಮಾಡಿಕೊಂಡಿರುವ ಬಿಜೆಪಿ, ಸಾಮಾಜಿಕ ಜಾಲ ತಾಣದಲ್ಲಿ ಕ್ಯೂಆರ್ ಕೋಡ್ ಬಳಕೆ ಮಾಡಿಕೊಂಡು ಪೇಸಿಎಸ್ ಎಂದು ಮಾಡಿ 6 ರಿಂದ 8 ಲಕ್ಷ ರೂಪಾಯಿಯನ್ನು ಇಲ್ಲಿ ಪಡೆಯಲಾಗುತ್ತದೆ ಎಂದು ಹಾಕಲಾಗಿದೆ. ಜೊತೆಗೆ ಟ್ಯಾಗ್‍ಲೈನ್‍ನಲ್ಲಿ ಸ್ಕ್ಯಾನ್ ಮಾಡಿ ಚಲುವರಾಯಸ್ವಾಮಿಯ ಭ್ರಷ್ಟಾಚಾರ ಹೊರ ಬರುತ್ತೆ ನೋಡಿ ಎಂದು ಹಾಕಿದ್ದಾರೆ. ಈ ಪೇಸಿಎಸ್ ಮೂಲಕ ಕೃಷಿ ಇಲಾಖೆಯ ಟ್ರಾನ್ಸ್ ಫರ್ ಗೆ ಲಂಚ ತೆಗೆದುಕೊಳ್ಳುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿದೆ.
ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಬರೆದ ಪ್ರಕರಣದ ಸಂಬಂಧ ಸಚಿವ ಚಲುವರಾಯಸ್ವಾಮಿ ರಾಜಭವನಕ್ಕೆ ಭೇಟಿ ಕೊಟ್ಟು ರಾಜ್ಯಪಾಲರಿಗೆ ಸಮಜಾಯಿಷಿ ನೀಡಿದ್ದಾರೆ. ನಕಲಿ ಪತ್ರದ ವಿರುದ್ಧ ರಾಜ್ಯ ಪಾಲರಿಗೆ ದೂರು ನೀಡಿದ್ದಾರೆ. ಮಂಡ್ಯದಲ್ಲಿ ಆರು ಸ್ಥಾನ ಗೆದ್ದಿರೋದಕ್ಕೆ ಸಹಿಸುತ್ತಿಲ್ಲ. ಪತ್ರದಲ್ಲಿ ಕುಮಾರಸ್ವಾಮಿ ನಮ್ಮ ನಾಯಕರು ಅಂತಾ ಮೆನ್ಷನ್ ಮಾಡಿದ್ದಾರೆ. ಜನತಾದಳದವರೇ ಇದನ್ನ ಕ್ರಿಯೇಟ್ ಮಾಡಿದ್ದಾರೆ ಅಂತ ಸಚಿವ ಚಲುವರಾಯಸ್ವಾಮಿ ಆರೋಪಿಸಿದ್ದಾರೆ.
ಸದ್ಯ ರಾಜ್ಯ ರಾಜಕಾರಣದಲ್ಲಿ ಪೇಸಿಎಸ್ ಭಾರೀ ಸದ್ದು ಮಾಡುತ್ತಿದೆ. ಸರ್ಕಾರ ವರ್ಸಸ್ ವಿಪಕ್ಷಗಳ ವಾಕ್ಸಮರಕ್ಕೆ ಕಾರಣವಾಗಿದೆ.
ಯಶಸ್ವಿಯಾಗಿ ಜಾತ್ರೆ ನಡೆಸಲು ಶಾಸಕ, ಡಿಸಿ ಪಣ; ರಥೋತ್ಸವದ ನಂತರ ವಿವಿಧೆಡೆ ಅರವಟ್ಟಿಗೆಗಳ ಸೇವೆ ನಂಜನಗೂಡು: ಇಲ್ಲಿನ ಶ್ರೀಕಂಠೇಶ್ವರಸ್ವಾಮಿ ಜಾತ್ರೆಗೆ…
ಅಕ್ಷತಾ ಹೆಣ್ಣಿನ ತಾಯ್ತನ ಆಕೆ ಗರ್ಭವತಿಯೆಂದು ತಿಳಿದಾಗಿನಿಂದಲೇ ಜಾಗೃತವಾಗುತ್ತದೆ. ತನಗೆ ಹುಟ್ಟಲಿರುವ ಮಗುವಿನ ಬಗ್ಗೆ ಅಂದಿನಿಂದಲೇ ಬಣ್ಣಬಣ್ಣದ ಕನಸುಗಳನ್ನು ಕಾಣಲಾರಂಭಿಸುತ್ತಾಳೆ.…
ಸಿರಿ ಮೈಸೂರು ಮುಖಕ್ಕೆ ಪ್ರಸಾದನ ಮಾಡಿಕೊಂಡು, ಭಾರೀ ವಸ್ತ್ರ ಧರಿಸಿ, ಕತ್ತಿ ಹಿಡಿದು, ವೀರಭದ್ರನ ಧ್ಯಾನ ಮಾಡಿ ವೇದಿಕೆ ಏರಿ…
ಸ್ವಾಮಿ ಪೊನ್ನಾಚಿ ಮಹದೇಶ್ವರನ ಬೆಟ್ಟದ ಪೋಡಿನಿಂದ ಬಂದು ನಮ್ಮ ಮನೆಯಲ್ಲಿ ದನ ಮೇಯಿಸುತ್ತಿದ್ದ ಬೊಮ್ಮ ನನ್ನು ಕಂಡರೆ ನನಗೆ ಅಸಾಧ್ಯ…
ಸಿದ್ದೇಗೌಡ ಕೊಡಿಯಾಲ ಸಮಯಕ್ಕೆ ಬಾರದ ಅಧಿಕಾರಿ-ಸಿಬ್ಬಂದಿ:ಜನತೆ ಹೈರಾಣ ಶ್ರೀರಂಗಪಟ್ಟಣ: ತಾಲ್ಲೂಕಿನ ಅರಕೆರೆ ನಾಡಕಚೇರಿಯು ಅವ್ಯವಸ್ಥೆಯ ಗೂಡಾಗಿ ಮಾರ್ಪಟ್ಟಿದೆ. ಈ ನಾಡಕಚೇರಿಯಲ್ಲಿ…
ಲಕ್ಷ್ಮೀಕಾಂತ್ ಕೋಮಾರಪ್ಪ ಫಸಲು ನಾಶ, ಕಂಗಾಲಾದ ಕೃಷಿಕರು; ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸೋಮವಾರಪೇಟೆ: ತಾಲ್ಲೂಕಿನ ಗಣಗೂರು ಗ್ರಾಮ ಪಂಚಾಯಿತಿ…