BREAKING NEWS

ಅತಿಥಿ ಉಪನ್ಯಾಸಕರಿಗೆ ಸೇವಾನುಭವ ಆಧಾರದ ಮೇಲೆ ವೇತನ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವಂತೆ ಸರ್ಕಾರದ ವಿರುದ್ಧ ಮುಷ್ಕರ ನಡೆಸಿದ್ದ ಅತಿಥಿ ಉಪನ್ಯಾಸಕರ ಮನವೊಲಿಸಲು ಸರ್ಕಾರ ಮುಂದಾಗಿದ್ದು, ಸೇವಾನುಭವದ ಆಧಾರದ ಮೇಲೆ ವೇತನ ಹೆಚ್ಚಿಸಲಾಗುವುದು. ಇದು ಹೊಸ ವರ್ಷಕ್ಕೆ ಕಾಂಗ್ರೆಸ್‌ನ ಗ್ಯಾರೆಂಟಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆ ಮೂಲಕ ಡ್ಯಾಮೆಜ್‌ ಕಂಟ್ರೋಲ್‌ಗೆ ಸಿಎಂ ಮುಂದಾಗಿದ್ದಾರೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನಾವು ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದ್ದೇವೆ. ಅವರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡುವ ಜೊತೆಗೆ ಕೆಲವು ಹೊಸ ಸೌಲಭ್ಯಗಳನ್ನು ನೀಡಲಾಗುವುದು ಎಂದಿದ್ದಾರೆ.

ಎಕ್ಸ್‌ ನಲ್ಲೇನಿದೆ?
ಉನ್ನತ ಶಿಕ್ಷಣ ಸಚಿವರಾದ ಡಾ||ಎಂ.ಸಿ.ಸುಧಾಕರ್ ಮತ್ತು‌ ಮಾಜಿ MLC ಪುಟ್ಟಣ್ಣನವರ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಚರ್ಚಿಸಿ, ಅತಿಥಿ ಉಪನ್ಯಾಸಕರ ನೆರವಿಗೆ ನಿಲ್ಲುವ ಉದ್ದೇಶದಿಂದ ಹಲವು ಮಹತ್ವದ ನಿರ್ಣಯಗಳನ್ನು ನಮ್ಮ‌ ಸರ್ಕಾರ ತೆಗೆದುಕೊಂಡಿದೆ.

ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ನಾನು ದನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದೆ. ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ಗೌರವಧನ ಹೆಚ್ಚಳಕ್ಕೆ ಮುಂದಾಗಿದೆ.

ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರೂ., 5 ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರೂ., 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರೂ. ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8 ಸಾವಿರ ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ.

ಇದರ ಜೊತೆ ಅತಿಥಿ ಉಪನ್ಯಾಸಕರ ಆರೋಗ್ಯದ ದೃಷ್ಟಿಯಿಂದ ವಾರ್ಷಿಕ 5 ಲಕ್ಷ ರೂ. ಗಳ ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ಮೀರಿದ ನಂತರದಲ್ಲಿ ಭದ್ರತಾ ರೂಪದಲ್ಲಿ ಗರಿಷ್ಠ 5 ಲಕ್ಷ ರೂ. ಇಡಿಗಂಟು ನೀಡುವುದು, ವಾರಕ್ಕೆ 15 ಗಂಟೆಗೂ ಹೆಚ್ಚಿನ ಕಾರ್ಯಭಾರ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡುವುದು ಹಾಗೂ 3 ತಿಂಗಳ ವೇತನ ಸಹಿತ ಮಾತೃತ್ವ ರಜೆ ನೀಡಲಾಗುವುದು.

ನೇಮಕಾತಿಯಲ್ಲಿ ಅತಿಥಿ ಉಪನ್ಯಾಸಕರ ಸೇವಾನುಭವ ಆಧರಿಸಿ, ವೆಯ್ಟೇಜ್‌ ನೀಡುವುದು, ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಕಾರ್ಯಭಾರವಿದ್ದಲ್ಲಿ ನಂತರದ ವರ್ಷವೂ ಅಲ್ಲಿಯೇ ಅವರ ಸೇವೆಯನ್ನು ಮುಂದುವರೆಸುವುದು ಸೇರಿದಂತೆ ಕೌನ್ಸೆಲಿಂಗ್‌ ಪ್ರಕ್ರಿಯೆ ಸರಳೀಕರಣಗೊಳಿಸಲು ಸರ್ಕಾರ ನಿರ್ಧರಿಸಿದೆ. ಸರ್ಕಾರ ಅತಿಥಿ ಉಪನ್ಯಾಸಕರ ಜೊತೆ ಇದೆ, ಕೂಡಲೇ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದು ಕರ್ತವ್ಯಕ್ಕೆ ಹಾಜರಾಗುವಂತೆ ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರಲ್ಲಿ ಮನವಿ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್‌ನೊಂದಿಗೆ ಬರೆದುಕೊಂಡಿದ್ದಾರೆ.

https://x.com/siddaramaiah/status/1743590634521600294?s=20

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago