ರೈತರ ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪ; ದಿಶಾ ಪೊಲೀಸರ ವಶಕ್ಕೆ!

ಬೆಂಗಳೂರು: ಬೆಂಗಳೂರು: ರೈತರ ಪ್ರತಿಭಟನೆ ವೇಳೆ ಶಸ್ತ್ರಾಸ್ತ್ರ ಪೂರೈಕೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಬೆಂಗಳೂರು ಮೂಲದ ದಿಶಾ ರವಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಹಿಂಸಾಚಾರದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಪ್ರಚೋದನೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ದಿಶಾ ಅವರನ್ನು ಬಂಧಿಸಲಾಗಿದೆ.

ದಿಶಾರವಿ ವಿರುದ್ದ ದೇಶದ್ರೋಹ, ಅಪರಾಧ ಒಳಸಂಚು ಸೇರಿದಂತೆ ಹಲವು ಸೆಕ್ಷನ್ ಅಡಿಯಲ್ಲಿ ದೆಹಲಿ ಸೈಬರ್ ಕ್ರೈಮ್ ಪೊಲೀಸರು ಪ್ರಕರಣ ದಾಖಲಿಸಿದ್ದರು.

× Chat with us